ಅವರ ಬಲದ ಮಹಿಮೆಯು ನೀನೇ ಮತ್ತು ನಿನ್ನ ಕಟಾಕ್ಷದಿಂದ ನಮ್ಮ ಕೊಂಬು ಉನ್ನತವಾಗುವದು.
Cross references
ಹನ್ನಳು ಪ್ರಾರ್ಥಿಸಿ ಹೇಳಿದ್ದೇನಂದರೆನನ್ನ ಹೃದಯವು ಕರ್ತನಲ್ಲಿ ಸಂತೋಷಿ ಸಿತು, ನನ್ನ ಕೊಂಬು ಕರ್ತನಲ್ಲಿ ಉನ್ನತವಾಯಿತು; ನನ್ನ ಶತ್ರುಗಳ ಮೇಲೆ ನನ್ನ ಬಾಯಿ ವಿಸ್ತಾರವಾಯಿತು, ಯಾಕಂದರೆ ನಾನು ನಿನ್ನ ರಕ್ಷಣೆಯಲ್ಲಿ ಸಂತೋಷ ಪಟ್ಟೆನು.
ಕರ್ತನ ಸಂಗಡ ವಿವಾದಿಸುವವರು ಮುರಿದು ಚೂರಾಗುವರು. ಆತನು ಆಕಾಶದಲ್ಲಿಂದ ಅವರ ಮೇಲೆ ಗುಡುಗುವನು. ಕರ್ತನು ಲೋಕಾಂತ್ಯದ ವರೆಗೂ ನ್ಯಾಯತೀರಿಸಿ ತನ್ನ ಅರಸನಿಗೆ ಬಲಕೊಡುವನು, ತನ್ನ ಅಭಿಷಿಕ್ತನ ಕೊಂಬನ್ನು ಉನ್ನತಮಾಡುವನು ಎಂಬದು.
ಇದಲ್ಲದೆ ಅವನು ಅವರಿಗೆ--ನೀವು ಹೋಗಿ ಕೊಬ್ಬಿದ್ದನ್ನು ತಿಂದು ಸಿಹಿ ಯಾದದ್ದನ್ನು ಕುಡಿದು ಯಾರಿಗೆ ಸಿದ್ಧಮಾಡಿದ್ದು ಏನೂ ಇಲ್ಲವೋ ಅವರಿಗೆ ಭಾಗಗಳನ್ನು ಕಳುಹಿಸಿ ಕೊಡಿರಿ. ಯಾಕಂದರೆ ಈ ದಿನವು ನಮ್ಮ ಕರ್ತನಿಗೆ ಪರಿಶುದ್ಧ ವಾಗಿದೆ. ಕರ್ತನ ಆನಂದವು ನಿಮ್ಮ ಬಲವಾಗಿರು ವದರಿಂದ ನೀವು ವ್ಯಥೆಪಡಬೇಡಿರಿ.
ಕರ್ತನು ನನ್ನ ಬಲವೂ ಗುರಾಣಿಯೂ ಆಗಿದ್ದಾನೆ; ನನ್ನ ಹೃದಯವು ಆತನಲ್ಲಿ ಭರವಸವಿಟ್ಟದ್ದರಿಂದ ಸಹಾಯ ಹೊಂದಿದೆನು; ಆದದರಿಂದ ನನ್ನ ಹೃದಯವು ಬಹಳವಾಗಿ ಉತ್ಸಾಹ ಪಡುವದು; ನನ್ನ ಹಾಡಿನಿಂದ ಆತನನ್ನು ಕೊಂಡಾ ಡುವೆನು.
ದುಷ್ಟರ ಕೊಂಬುಗಳನ್ನೆಲ್ಲಾ ಕಡಿದುಬಿಡುವೆನು; ಆದರೆ ನೀತಿವಂತರ ಕೊಂಬುಗಳು ಎತ್ತಲ್ಪಡುವವು.
ಆದರೆ ನನ್ನ ನಂಬಿಗಸ್ತಿಕೆಯೂ ಕರುಣೆಯೂ ಅವನ ಸಂಗಡ ಇರುವವು. ನನ್ನ ಹೆಸರಿನಲ್ಲಿ ಅವನ ಕೊಂಬು ಉನ್ನತವಾಗುವದು.
ಆದರೆ ನೀನು ನನ್ನ ಕೊಂಬನ್ನು ಕಾಡುಕೋಣದ ಕೊಂಬಿನಹಾಗೆ ಎತ್ತುವಿ; ಹೊಸ ಎಣ್ಣೆಯಿಂದ ಅಭಿಷಿಕ್ತ ನಾಗುವೆನು.
ಅವನು ಬಡವರಿಗೆ ಧಾರಾಳವಾಗಿ ಕೊಡುತ್ತಾನೆ; ಅವನ ನೀತಿ ಎಂದೆಂದಿಗೂ ನಿಲ್ಲು ತ್ತದೆ; ಅವನ ಕೊಂಬು ಘನದಿಂದ ಎತ್ತಲ್ಪಡುವದು.ದುಷ್ಟನು ನೋಡಿ ದುಃಖಪಡುವನು; ತನ್ನ ಹಲ್ಲು ಗಳನ್ನು ಕಡಿದು ಕರಗಿಹೋಗುವನು; ದುಷ್ಟರ ಆಶೆಯು ನಾಶವಾಗುವದು.
ಅಲ್ಲಿ ದಾವೀದನಿಗೆ ಕೊಂಬನ್ನು ಮೊಳಿಸುವೆನು; ನನ್ನ ಅಭಿಷಿಕ್ತನಿಗೆ ದೀಪವನ್ನು ಸಿದ್ಧಮಾಡಿದ್ದೇನೆ.ಅವನ ಶತ್ರುಗಳಿಗೆ ನಾಚಿಕೆಯನ್ನು ಹೊದಿಸುವೆನು; ಆದರೆ ಅವನ ಮೇಲೆ ಅವನ ಕಿರೀಟವು ಶೋಭಿಸುವದು ಎಂದು ಹೇಳಿದ್ದಾನೆ.
ಆತನು ತನ್ನ ಜನರ ಕೊಂಬನ್ನು ಮೇಲಕ್ಕೆತ್ತಿದ್ದಾನೆ; ಆತನ ಪರಿ ಶುದ್ಧರೆಲ್ಲರೂ ಇಸ್ರಾಯೇಲಿನ ಮಕ್ಕಳು, ಅಂದರೆ ಆತನಿಗೆ ಸವಿಾಪವಾದ ಜನರ ಸ್ತೋತ್ರವನ್ನು ಗೌರವಿ ಸುತ್ತಾನೆ; ಕರ್ತನನ್ನು ಸ್ತುತಿಸಿರಿ.
ಕರ್ತನಲ್ಲಿ ಮಾತ್ರ ನನಗೆ ನೀತಿಯೂ ಬಲವೂ ಉಂಟೆಂದು ಮನುಷ್ಯರೂ ಸಹ ಆತನ ಬಳಿಗೆ ಬರುವರು; ಆತನ ಮೇಲೆ ಉರಿಗೊಂಡವ ರೆಲ್ಲರೂ ನಾಚಿಕೆಗೆ ಈಡಾಗುವರು ಎಂದು ಒಬ್ಬನು ನಿಶ್ಚಯವಾಗಿ ಹೇಳುತ್ತಾನೆ.ಇಸ್ರಾಯೇಲಿನ ಸಂತಾನದವರೆಲ್ಲರೂ ಕರ್ತನಲ್ಲಿ ನೀತಿವಂತರಾಗಿ ಹೆಚ್ಚಳಪಡುವರು.
ಆದರೆ ನೀವು ಕ್ರಿಸ್ತ ಯೇಸುವಿನಲ್ಲಿ ರುವದು ಆತನಿಂದಲೇ; ಆತನು ನಮಗೆ ದೇವರ ಕಡೆಯಿಂದ ಜ್ಞಾನವು ನೀತಿ ಶುದ್ಧೀಕರಣ ವಿಮೋಚನೆ ಗಳಾಗಿ ಮಾಡಲ್ಪಟ್ಟಿದ್ದಾನೆ.ಹೆಚ್ಚಳ ಪಡುವವನು ಕರ್ತನಲ್ಲಿಯೇ ಹೆಚ್ಚಳಪಡಲಿ ಎಂದು ಬರೆಯಲ್ಪಟ್ಟಂತೆ ಆಯಿತು.
ಅದಕ್ಕಾತನು--ನನ್ನ ಕೃಪೆಯೇ ನಿನಗೆ ಸಾಕು; ಬಲಹೀನತೆಯಲ್ಲಿಯೇ ನನ್ನ ಬಲವು ಪರಿಪೂರ್ಣವಾಗುತ್ತದೆ ಎಂದು ನನಗೆ ಹೇಳಿದನು. ಹೀಗಿರಲಾಗಿ ಕ್ರಿಸ್ತನ ಬಲವು ನನ್ನಲ್ಲಿ ನೆಲೆಸಿ ಕೊಂಡಿರಬೇಕೆಂದು ನನಗುಂಟಾಗುವ ನಿರ್ಬಲಾ ವಸ್ಥೆಗಳ ವಿಷಯದಲ್ಲಿಯೇ ಬಹು ಸಂತೋಷವಾಗಿ ಹೆಚ್ಚಳಪಡುವೆನು.
ನನ್ನನ್ನು ಬಲಪಡಿಸುವ ಕ್ರಿಸ್ತನ ಮೂಲಕ ನಾನು ಎಲ್ಲವುಗಳನ್ನು ಮಾಡಬಲ್ಲೆನು.