Home Bibles ☰ Books ಕೀರ್ತನೆಗಳು 89:25 · ಕನ್ನಡ ಬೈಬಲ್
ಕೀರ್ತನೆಗಳು 89:25 · ಕನ್ನಡ ಬೈಬಲ್

ಸಮುದ್ರದಲ್ಲಿ ಅವನ ಕೈ ಯನ್ನೂ ನದಿಗಳಲ್ಲಿ ಅವನ ಬಲಗೈಯನ್ನೂ ಇರಿಸು ವೆನು.

Cross references

1 ಸಮುವೇಲ 2:10

ಕರ್ತನ ಸಂಗಡ ವಿವಾದಿಸುವವರು ಮುರಿದು ಚೂರಾಗುವರು. ಆತನು ಆಕಾಶದಲ್ಲಿಂದ ಅವರ ಮೇಲೆ ಗುಡುಗುವನು. ಕರ್ತನು ಲೋಕಾಂತ್ಯದ ವರೆಗೂ ನ್ಯಾಯತೀರಿಸಿ ತನ್ನ ಅರಸನಿಗೆ ಬಲಕೊಡುವನು, ತನ್ನ ಅಭಿಷಿಕ್ತನ ಕೊಂಬನ್ನು ಉನ್ನತಮಾಡುವನು ಎಂಬದು.

1 ಅರಸುಗಳು 4:21

ಇದಲ್ಲದೆ ಸೊಲೊಮೋನನು ನದಿ ಮೊದಲು ಗೊಂಡು ಫಿಲಿಷ್ಟಿಯರ ದೇಶವನ್ನು ಹಾದು ಐಗುಪ್ತದ ಮೇರೆಯ ವರೆಗೂ ಇರುವ ಸಮಸ್ತ ರಾಜ್ಯಗಳ ಮೇಲೆ ಆಳುತ್ತಿದ್ದನು. ಆ ರಾಜ್ಯಗಳವರು ಸೊಲೊಮೋನನು ಜೀವಿಸಿರುವ ದಿವಸಗಳಲ್ಲೆಲ್ಲಾ ಕಾಣಿಕೆಗಳನ್ನು ತಂದು ಅವನನ್ನು ಸೇವಿಸುತ್ತಾ ಇದ್ದರು.

ಕೀರ್ತನೆಗಳು 2:8

ನನ್ನನ್ನು ಕೇಳು; ಆಗ ಅನ್ಯಜನರನ್ನು ನಿನ್ನ ಬಾಧ್ಯತೆಯಾಗಿಯೂ ಭೂಮಿಯ ಕಟ್ಟಕಡೆಯ ವರೆಗೆ ನಿನ್ನ ಸ್ವಾಸ್ಥ್ಯವಾಗಿಯೂ ಕೊಡುವೆನು.

ಕೀರ್ತನೆಗಳು 72:8

ಸಮುದ್ರದಿಂದ ಸಮುದ್ರದ ವರೆಗೂ ನದಿಯಿಂದ ಭೂಮಿಯ ಕೊನೆಗಳವರೆಗೂ ಆತನು ಆಳುವನು.

ಕೀರ್ತನೆಗಳು 80:11

ಅದು ತನ್ನ ರೆಂಬೆಗಳನ್ನು ಸಮುದ್ರದ ವರೆಗೂ ತನ್ನ ಬಳ್ಳಿಗಳನ್ನು ನದಿಗೂ ಹರಡಿಸಿತು.

ಕೀರ್ತನೆಗಳು 132:17

ಅಲ್ಲಿ ದಾವೀದನಿಗೆ ಕೊಂಬನ್ನು ಮೊಳಿಸುವೆನು; ನನ್ನ ಅಭಿಷಿಕ್ತನಿಗೆ ದೀಪವನ್ನು ಸಿದ್ಧಮಾಡಿದ್ದೇನೆ.ಅವನ ಶತ್ರುಗಳಿಗೆ ನಾಚಿಕೆಯನ್ನು ಹೊದಿಸುವೆನು; ಆದರೆ ಅವನ ಮೇಲೆ ಅವನ ಕಿರೀಟವು ಶೋಭಿಸುವದು ಎಂದು ಹೇಳಿದ್ದಾನೆ.

ಪ್ರಕಟನೆ 11:15

ಏಳನೆಯ ದೂತನು ತುತೂರಿಯನ್ನೂದಿದನು. ಆಗ ಪರಲೋಕದಲ್ಲಿ ಮಹಾಶಬ್ದಗಳುಂಟಾಗಿ-- ಈ ಲೋಕದ ರಾಜ್ಯಗಳು ನಮ್ಮ ಕರ್ತನ ಮತ್ತು ಆತನ ಕ್ರಿಸ್ತನ ರಾಜ್ಯಗಳಾದವು; ಆತನು ಯುಗ ಯುಗಾಂತರಗಳಲ್ಲಿಯೂ ಆಳುವನು ಎಂದು ಹೇಳಿ ದವು.

Interlinear

Choose Theme