ಎಂದೆಂದಿಗೂ ಅವನಿಗೋ ಸ್ಕರ ನನ್ನ ಕರುಣೆಯನ್ನು ಕಾದಿಡುವೆನು. ನನ್ನ ಒಡಂಬಡಿಕೆಯು ಅವನೊಂದಿಗೆ ದೃಢವಾಗಿರುವದು.
Cross references
ಆದರೆ ನಾನು ನಿನ್ನ ಮುಂದೆ ತೊರೆದುಬಿಟ್ಟ ಸೌಲ ನಿಂದ ನನ್ನ ಕೃಪೆಯನ್ನು ನಾನು ತೊಲಗಿಸಿದ ಹಾಗೆ ಅವನಿಂದ ತೊಲಗಿಸುವದಿಲ್ಲ.
ನನ್ನ ಮನೆ ದೇವರ ಸಮ್ಮುಖದಲ್ಲಿ ಹಾಗೆಯೇ ಅಲ್ಲದಿದ್ದರೂ ನನ್ನ ಸಂಗಡ ನಿತ್ಯವಾದ ಒಡಂಬಡಿಕೆ ಯನ್ನು ಮಾಡಿದ್ದಾನೆ; ಎಲ್ಲಾದರ ವಿಷಯ ಸಿದ್ಧವಾದ ದ್ದಾಗಿಯೂ ಸ್ಥಿರವಾದದ್ದಾಗಿಯೂ ಅದೆ. ಆತನು ಅದನ್ನು ಬೆಳೆಯದೆ ಇದ್ದರೂ ನನ್ನ ಎಲ್ಲಾ ರಕ್ಷಣೆಯೂ ನನ್ನ ಎಲ್ಲಾ ಅಭಿಲಾಷೆಯೂ ಅದೇ.
ಆದಾಗ್ಯೂ ನನ್ನ ಪ್ರೀತಿ ಕರುಣೆಯನ್ನು ಅವನಿಂದ ಸಂಪೂರ್ಣವಾಗಿ ತೊಲಗಿಸೆನು; ಇಲ್ಲವೇ ನನ್ನ ನಂಬಿಗಸ್ತಿಕೆಯನ್ನು ವ್ಯರ್ಥ ಮಾಡೆನು.
ಆತನು ತನಗೆ ಭಯಪಡುವ ವರಿಗೆ ಆಹಾರ ಕೊಟ್ಟಿದ್ದಾನೆ; ಯುಗಯುಗಕ್ಕೂ ತನ್ನ ಒಡಂಬಡಿಕೆಯನ್ನು ಜ್ಞಾಪಕಮಾಡಿಕೊಳ್ಳುವನು.
ತನ್ನ ಜನರಿಗೆ ವಿಮೋಚನೆಯನ್ನು ಕಳುಹಿ ಸಿದನು; ಯುಗಯುಗಕ್ಕೂ ತನ್ನ ಒಡಂಬಡಿಕೆಯನ್ನು ಆಜ್ಞಾಪಿಸಿದನು; ಆತನ ಹೆಸರು ಪರಿಶುದ್ಧವೂ ಘನವೂ ಆಗಿದೆ.ಕರ್ತನ ಭಯವು ಜ್ಞಾನದ ಮೂಲವು; ಆತನ ಆಜ್ಞೆಗಳನ್ನು ಕೈಕೊಳ್ಳುವವರಿಗೆ ತಿಳುವಳಿಕೆಯಿದೆ; ಆತನ ಸ್ತೋತ್ರವು ಎಂದೆಂದಿಗೂ ನಿಲ್ಲುತ್ತದೆ.
ಪರ್ವತಗಳು ಹೊರಟುಹೋಗುವವು, ಮತ್ತು ಗುಡ್ಡಗಳು ತೆಗೆದುಹಾಕಲ್ಪಡುವವು; ಆದರೆ ನನ್ನ ದಯೆಯು ನಿನ್ನನ್ನು ಬಿಟ್ಟುಹೋಗದು ಇಲ್ಲವೆ ನನ್ನ ಸಮಾಧಾನದ ಒಡಂಬಡಿಕೆಯು ತೆಗೆಯಲ್ಪಡುವದಿಲ್ಲ ಎಂದು ನಿನ್ನ ಮೇಲೆ ಕರುಣೆಯನ್ನು ಇಟ್ಟಿರುವ ಕರ್ತನು ಹೇಳುತ್ತಾನೆ.
ನಿಮ್ಮ ಕಿವಿಗಳನ್ನು ಬಾಗಿಸಿಕೊಂಡು ನನ್ನ ಬಳಿಗೆ ಬನ್ನಿರಿ; ಕೇಳಿರಿ, ನಿಮ್ಮ ಪ್ರಾಣವು ಬದುಕು ವದು; ನಿಶ್ಚಯವಾಗಿ ದಾವೀದನಿಗೆ ಖಂಡಿತವಾಗಿ ಮಾಡಿದ ಕರುಣೆಗಳ ಪ್ರಕಾರ ನಿಮ್ಮ ಸಂಗಡ ನಿತ್ಯ ವಾದ ಒಡಂಬಡಿಕೆಯನ್ನು ಮಾಡುವೆನು.
ಅವರ ಶತ್ರುಗಳ ಕೈಯಲ್ಲಿಯೂ ಅವರ ಪ್ರಾಣವನ್ನು ಹುಡುಕು ವವರ ಕೈಯಲ್ಲಿಯೂ ಒಪ್ಪಿಸುವೆನು: ಅವರ ಹೆಣಗಳು ಆಕಾಶದ ಪಕ್ಷಿಗಳಿಗೂ ಭೂಮಿಯ ಮೃಗಗಳಿಗೂ ಆಹಾರವಾಗುವವು.
ಪಿತೃಗಳಿಗೆ ವಾಗ್ದಾನ ಮಾಡಿದ್ದು ಹೇಗೆ ಎಂಬ ಶುಭಸಂದೇಶ ವನ್ನು ನಾವು ನಿಮಗೆ ಪ್ರಕಟಿಸುತ್ತೇವೆ.