Home Bibles ಕೀರ್ತನೆಗಳು 9:11 · ಕನ್ನಡ ಬೈಬಲ್
ಕೀರ್ತನೆಗಳು 9:11 · ಕನ್ನಡ ಬೈಬಲ್

ಚೀಯೋನಿನಲ್ಲಿ ವಾಸಿಸುವ ಕರ್ತನನ್ನು ಕೀರ್ತಿಸಿರಿ; ಆತನ ಕ್ರಿಯೆಗಳನ್ನು ಜನಗಳಲ್ಲಿ ತಿಳಿಸಿರಿ.

Cross references

ಕೀರ್ತನೆಗಳು 33:1

ಓ ನೀತಿವಂತರೇ, ನೀವು ಕರ್ತನಲ್ಲಿ ಸಂತೋಷಪಡಿರಿ; ಯಥಾರ್ಥರು ಸ್ತೋತ್ರ ಮಾಡುವದು ಯೋಗ್ಯವಾಗಿದೆ.

ಕೀರ್ತನೆಗಳು 47:6

ದೇವರಿಗೆ ಸ್ತುತಿಗಳನ್ನು ಹಾಡಿರಿ, ಸ್ತುತಿಗಳನ್ನು ಹಾಡಿರಿ; ನಮ್ಮ ಅರಸನಿಗೆ ಸ್ತುತಿಗಳನ್ನು ಹಾಡಿರಿ, ಸ್ತುತಿಗಳನ್ನು ಹಾಡಿರಿ;

ಕೀರ್ತನೆಗಳು 66:2

ಆತನ ಹೆಸರಿನ ಘನವನ್ನು ಕೀರ್ತಿಸಿರಿ; ಆತನ ಸ್ತೋತ್ರವನ್ನು ಘನವುಳ್ಳದ್ದಾಗಿ ಮಾಡಿರಿ.

ಕೀರ್ತನೆಗಳು 66:5

ಬನ್ನಿರಿ, ದೇವರ ಕಾರ್ಯಗಳನ್ನು ನೋಡಿರಿ; ಮನುಷ್ಯರ ಮಕ್ಕಳ ಕಡೆಗೆ ಆತನು ತನ್ನ ಕಾರ್ಯಗಳಲ್ಲಿ ಭಯಂಕರನಾಗಿದ್ದಾನೆ.

ಕೀರ್ತನೆಗಳು 76:2

ಸಾಲೇಮಿನಲ್ಲಿ ಆತನ ಗುಡಾರವೂ ಚೀಯೋನಿನಲ್ಲಿ ಆತನ ವಾಸಸ್ಥಾನವೂ ಉಂಟು.

ಕೀರ್ತನೆಗಳು 78:68

ಯೆಹೂದನ ಕುಲವನ್ನೂ ತಾನು ಪ್ರೀತಿ ಮಾಡಿದ ಚೀಯೋನ್‌ ಪರ್ವತವನ್ನೂ ಆದುಕೊಂಡು,

ಕೀರ್ತನೆಗಳು 91:14

ಅವನು ತನ್ನ ಪ್ರೀತಿಯನ್ನು ನನ್ನ ಮೇಲೆ ಇಟ್ಟಿದ್ದಾನೆ; ಆದದರಿಂದ ಅವನನ್ನು ತಪ್ಪಿಸುವೆನು; ಅವನು ನನ್ನ ಹೆಸರನ್ನು ತಿಳಿದಿರುವದರಿಂದ ಅವನನ್ನು ಉನ್ನತದಲ್ಲಿಡುವೆನು.

ಕೀರ್ತನೆಗಳು 96:1

ಕರ್ತನಿಗೆ ಹೊಸ ಹಾಡನ್ನು ಹಾಡಿರಿ; ಸಮಸ್ತ ಭೂಮಿಯೇ, ಕರ್ತನಿಗೆ ಹಾಡಿರಿ.

ಕೀರ್ತನೆಗಳು 96:10

ಕರ್ತನು ಆಳುತ್ತಾನೆ; ಲೋಕವು ಸ್ಥಿರವಾಗಿದೆ, ಕದಲುವದಿಲ್ಲ. ಆತನು ಜನಗಳಿಗೆ ನೀತಿಯಲ್ಲಿ ನ್ಯಾಯತೀರಿಸುವನೆಂದು ಅನ್ಯಜನಾಂಗಗಳಲ್ಲಿ ಹೇಳಿರಿ.

ಕೀರ್ತನೆಗಳು 105:1

ಕರ್ತನಿಗೆ ಉಪಕಾರ ಸ್ತುತಿಮಾಡಿರಿ; ಆತನ ಹೆಸರನ್ನು ಕರೆಯಿರಿ; ಜನ ಗಳಲ್ಲಿ ಆತನ ಕ್ರಿಯೆಗಳನ್ನು ತಿಳಿಯಮಾಡಿರಿ.

ಕೀರ್ತನೆಗಳು 107:22

ಸ್ತೋತ್ರದ ಬಲಿಗಳನ್ನು ಅರ್ಪಿಸಿ ಆತನ ಕೆಲಸಗಳನ್ನು ಉತ್ಸಾಹ ದಿಂದ ಸಾರಲಿ.

ಕೀರ್ತನೆಗಳು 118:17

ನಾನು ಸಾಯದೆ ಬದುಕಿ, ಕರ್ತನ ಕಾರ್ಯಗಳನ್ನು ಪ್ರಕಟಿಸುವೆನು.

ಕೀರ್ತನೆಗಳು 132:13

ಕರ್ತನು ಚೀಯೋನನ್ನು ಆದುಕೊಂಡು ಅದನ್ನು ತನ್ನ ವಾಸಕ್ಕಾಗಿ ಅಪೇಕ್ಷಿಸಿದ್ದಾನೆ.

ಕೀರ್ತನೆಗಳು 148:1

ಕರ್ತನನ್ನು ನೀವು ಸ್ತುತಿಸಿರಿ, ಕರ್ತನನ್ನು ಆಕಾಶದಿಂದ ನೀವು ಸ್ತುತಿಸಿರಿ; ಉನ್ನತವಾದವುಗಳಲ್ಲಿ ಆತನನ್ನು ಸ್ತುತಿಸಿರಿ.

ಕೀರ್ತನೆಗಳು 148:13

ಕರ್ತನ ಹೆಸರನ್ನು ಸ್ತುತಿಸಿರಿ; ಆತನ ಹೆಸರು ಮಾತ್ರ ಶ್ರೇಷ್ಠವಾಗಿದೆ; ಆತನ ಮಹಿಮೆಯು ಭೂಮ್ಯಾಕಾಶಗಳ ಮೇಲೆ ಅದೆ.ಆತನು ತನ್ನ ಜನರ ಕೊಂಬನ್ನು ಮೇಲಕ್ಕೆತ್ತಿದ್ದಾನೆ; ಆತನ ಪರಿ ಶುದ್ಧರೆಲ್ಲರೂ ಇಸ್ರಾಯೇಲಿನ ಮಕ್ಕಳು, ಅಂದರೆ ಆತನಿಗೆ ಸವಿಾಪವಾದ ಜನರ ಸ್ತೋತ್ರವನ್ನು ಗೌರವಿ ಸುತ್ತಾನೆ; ಕರ್ತನನ್ನು ಸ್ತುತಿಸಿರಿ.

ಯೆಶಾಯ 12:4

ನೀವು--ಕರ್ತನನ್ನು ಕೊಂಡಾ ಡಿರಿ; ಜನರ ಮಧ್ಯದಲ್ಲಿ ಆತನ ಹೆಸರನ್ನೆತ್ತಿ ಕ್ರಿಯೆಗ ಳನ್ನು ಪ್ರಕಟಿಸಿರಿ. ಆತನ ನಾಮವನ್ನು ಉನ್ನತೋನ್ನತ ವೆಂದು ಎತ್ತಿ ಹೇಳಿರಿ ಎಂದು ಆ ದಿನದಲ್ಲಿ ಹೇಳುವಿರಿ.

ಯೆಶಾಯ 14:32

ಆಗ ಜನಾಂಗಗಳ ದೂತರಿಗೆ ಯಾವ ಉತ್ತರವನ್ನು ಕೊಡ ಬೇಕೆಂದರೆ? ಕರ್ತನು ಚೀಯೋನನ್ನು ಸ್ಥಾಪಿಸಿದ್ದಾನೆ, ಆತನ ಜನರಲ್ಲಿನ ಬಡವರು ಅದನ್ನು ಆಶ್ರಯಿಸಿ ಕೊಳ್ಳುವರು ಎಂಬದೇ.

ಯೋಹಾನ 17:26

ನೀನು ನನ್ನನ್ನು ಪ್ರೀತಿಸಿದಂಥ ಪ್ರೀತಿಯು ಅವರಲ್ಲಿ ಇರಬೇಕೆಂತಲೂ ನಾನು ಅವರಲ್ಲಿ ಇರುವಂತೆಯೂ ನಾನು ಅವರಿಗೆ ನಿನ್ನ ಹೆಸರನ್ನು ಪ್ರಕಟಿಸಿದ್ದೇನೆ; ಇನ್ನೂ ಪ್ರಕಟಿಸುವೆನು ಅಂದನು.

ಹೆಬ್ರಿಯರಿಗೆ 12:22

ಆದರೆ ನೀವು ಚೀಯೋನ್‌ ಪರ್ವತಕ್ಕೂ ಜೀವಸ್ವರೂಪನಾದ ದೇವರ ಪಟ್ಟಣವಾಗಿರುವ ಪರಲೋಕದ ಯೆರೂಸಲೇಮಿಗೂ ಎಣಿಸಲಸಾಧ್ಯವಾದ ದೂತ ಗಣಗಳ ಬಳಿಗೂ

ಪ್ರಕಟನೆ 14:1

ಆಗ ಇಗೋ, ಕುರಿಮರಿಯಾದಾತನು ಚೀಯೋನ್‌ ಪರ್ವತದ ಮೇಲೆ ನಿಂತಿರು ವದನ್ನು ನಾನು ಕಂಡೆನು. ಆತನ ಜೊತೆಯಲ್ಲಿ ಒಂದು ಲಕ್ಷ ನಾಲ್ವತ್ತುನಾಲ್ಕು ಸಾವಿರ ಮಂದಿ ಇದ್ದರು; ಅವರ ಹಣೆಗಳ ಮೇಲೆ ಆತನ ತಂದೆಯ ಹೆಸರು ಬರೆಯ ಲ್ಪಟ್ಟಿತು.

Interlinear

Choose Theme