ಕರ್ತನೇ, ಎಷ್ಟರವರೆಗೆ ಹಿಂತಿರುಗದಿರುವಿ? ನಿನ್ನ ಸೇವಕರ ವಿಷಯದಲ್ಲಿ ಅಂತಃಕರಣವಿರಲಿ.
Cross references
ಕೇಡಿನ ನಿಮಿತ್ತವೂ ಬೆಟ್ಟಗಳಲ್ಲಿ ಅವರನ್ನು ಕೊಲ್ಲುವದಕ್ಕೂ ಭೂಮಿಯ ಮೇಲಿನಿಂದ ಅವರನ್ನು ದಹಿಸಿಬಿಡುವದಕ್ಕೂ ಆತನು ಅವರನ್ನು ಹೊರಗೆ ಬರಮಾಡಿದ್ದಾನೆ ಎಂದು ಐಗುಪ್ತ್ಯರು ಯಾಕೆ ಹೇಳಬೇಕು? ನಿನ್ನ ಕೋಪದುರಿ ಯನ್ನು ಬಿಟ್ಟು ತಿರುಗಿಕೋ, ನಿನ್ನ ಜನರಿಗೆ ವಿರೋಧ ವಾದ ಈ ಕೇಡಿನ ವಿಷಯದಲ್ಲಿ ನಿನ್ನ ಮನಸ್ಸನ್ನು ಬದಲಾಯಿಸು.
ಆಗ ಕರ್ತನು ತನ್ನ ಜನರಿಗೆ ಮಾಡುತ್ತೇನೆಂದು ಹೇಳಿದ ಕೇಡಿನ ವಿಷಯದಲ್ಲಿ ಮನಸ್ಸನ್ನು ಬದಲಾಯಿಸಿ ಕೊಂಡನು.
ಅದು ಇಳಿದಾಗ ಅವನು--ಓ ಕರ್ತನೇ, ಅನೇಕ ಸಹಸ್ರ ಇಸ್ರಾಯೇ ಲ್ಯರ ಬಳಿಗೆ ಹಿಂದಿರುಗು ಅಂದನು.
ಕರ್ತನು ತನ್ನ ಜನರಿಗೆ ನ್ಯಾಯತೀರಿಸುವನು; ಅವರ ಬಲಹೋಯಿತೆಂದೂ ಬಚ್ಚಿಡಲ್ಪಟ್ಟವರೂ ಉಳಿ ದವರೂ ಇಲ್ಲವೆಂದೂ ನೋಡಿದಾಗ ತನ್ನ ದಾಸರಿಗೋಸ್ಕರ ಪಶ್ಚಾತ್ತಾಪಪಡುವನು.
ನನ್ನ ಪ್ರಾಣವು ಸಹ ಬಹಳವಾಗಿ ತಲ್ಲಣಿಸುತ್ತದೆ; ಆದರೆ ಓ ಕರ್ತನೇ, ಇದು ಎಲ್ಲಿಯ ವರೆಗೆ?
ಓ ಕರ್ತನೇ, ಹಿಂತಿರುಗಿ ನನ್ನ ಪ್ರಾಣವನ್ನು ತಪ್ಪಿಸಿಬಿಡು. ಹಾ! ನಿನ್ನ ಕರುಣೆಯ ನಿಮಿತ್ತ ನನ್ನನ್ನು ರಕ್ಷಿಸು.
ಮರಣದಲ್ಲಿ ನಿನ್ನ ಜ್ಞಾಪಕವಿಲ್ಲ; ಸಮಾಧಿ ಯಲ್ಲಿ ನಿನಗೆ ಉಪಕಾರಸ್ತುತಿ ಮಾಡುವವರು ಯಾರು?
ಓ ದೇವರೇ, ವೈರಿಯು ನಿಂದಿಸುವದು ಎಷ್ಟರ ವರೆಗೆ? ಶತ್ರುವು ನಿನ್ನ ಹೆಸರನ್ನು ಎಂದೆಂದಿಗೂ ದೂಷಿ ಸುವನೋ?
ಓ ಸೈನ್ಯಗಳ ದೇವರೇ, ತಿರುಗಿಕೋ ಎಂದು ನಾವು ನಿನ್ನನ್ನು ಬೇಡುತ್ತೇವೆ. ಆಕಾಶದಿಂದ ದೃಷ್ಟಿಸಿ ನೋಡು; ಈ ದ್ರಾಕ್ಷೇಗಿಡವನ್ನೂ
ನಿನ್ನ ಬಲಗೈ ನೆಟ್ಟ ಸಸಿಯನ್ನೂ ನೀನು ನಿನಗೆ ಬಲಪಡಿಸಿ ಕೊಂಡ ಕೊಂಬೆಯನ್ನೂ ಪರಾಮರಿಸು.
ಕರ್ತನೇ, ಎಷ್ಟರ ವರೆಗೆ? ಸದಾಕಾಲಕ್ಕೆ ನೀನು ಮರೆಯಾಗಿರುವಿ? ನಿನ್ನ ಸಿಟ್ಟು ಬೆಂಕಿಯ ಹಾಗೆ ಉರಿಯುವದೋ?
ಅವರಿಗಾಗಿ ತನ್ನ ಒಡಂಬಡಿಕೆಯನ್ನು ಜ್ಞಾಪಕಮಾಡಿಕೊಂಡು ತನ್ನ ಅತಿಶಯವಾದ ಕರು ಣೆಯ ಪ್ರಕಾರ ಪಶ್ಚಾತ್ತಾಪಪಟ್ಟನು.
ಕರ್ತನು ತನ್ನ ಜನರಿಗೆ ನ್ಯಾಯತೀರಿಸಿ ತನ್ನ ಸೇವಕರನ್ನು ಕನಿಕರಿಸುವನು.
ಓ ಕರ್ತನೇ, ಏಕೆ ನಮ್ಮನ್ನು ನಿನ್ನ ಮಾರ್ಗಗ ಳಿಂದ ತಪ್ಪಿಹೋಗುವಂತೆ ಮಾಡಿದ್ದೀ. ಏಕೆ ನಮ್ಮ ಹೃದಯವನ್ನು ನಿನಗೆ ಭಯಪಡದ ಹಾಗೆ ಕಠಿಣ ಮಾಡಿದ್ದೀ. ನಿನ್ನ ಸೇವಕರಿಗೋಸ್ಕರವೂ ನಿನ್ನ ಬಾಧ್ಯತೆಯ ಗೋತ್ರಗಳಿಗೋಸ್ಕರವೂ ಹಿಂತಿರುಗು.
ಕೇಳಿರಿ, ಕಿವಿಗೊಡಿರಿ, ಗರ್ವಪಡಬೇಡಿರಿ; ಕರ್ತನು ಮಾತನಾಡಿದ್ದಾನೆ.
ಎಫ್ರಾಯಾಮೇ, ನಾನು ನಿನ್ನನ್ನು ಬಿಟ್ಟು ಬಿಡುವದು ಹೇಗೆ? ಇಸ್ರಾಯೇಲೇ, ನಿನ್ನನ್ನು ನಾನು ಬಿಡಿಸುವದು ಹೇಗೆ? ನಾನು ನಿನ್ನನ್ನು ಅದ್ಮದ ಹಾಗೆ ಮಾಡುವದು ಹೇಗೆ? ನಾನು ನಿನ್ನನ್ನು ಜೆಬೋಯಾಮಿನ ಹಾಗೆ ಸ್ಥಾಪಿಸುವದು ಹೇಗೆ? ನನ್ನ ಹೃದಯವು ನನ್ನಲ್ಲಿ ತಿರುಗಿಕೊಂಡಿದೆ. ನನ್ನ ಪಶ್ಚಾತ್ತಾಪಗಳು ಒಟ್ಟಿಗೆ ಹತ್ತಿ ಕೊಂಡಿವೆ.
ನಿಮ್ಮ ಬಟ್ಟೆಗಳನ್ನಲ್ಲ, ನಿಮ್ಮ ಹೃದಯವನ್ನು ಹರಕೊಂಡು ನಿಮ್ಮ ದೇವರಾದ ಕರ್ತನ ಕಡೆಗೆ ತಿರುಗಿಕೊಳ್ಳಿರಿ; ಆತನು ದಯೆ ಕರುಣೆ ದೀರ್ಘಶಾಂತಿ ಮಹಾ ಕೃಪೆಯೂ ಉಳ್ಳವನಾಗಿ ಕೇಡಿಗೆ ಪಶ್ಚಾತ್ತಾಪಪಡುತ್ತಾನೆ.
ಕರ್ತನು ಇದನ್ನು ಕುರಿತು ಪಶ್ಚಾತ್ತಾಪಪಟ್ಟು ಇದು ಆಗ ಬಾರ ದೆಂದು ಹೇಳಿದನು.
ಕರ್ತನು ಇದಕ್ಕಾಗಿ ಪಶ್ಚಾತ್ತಾಪಪಟ್ಟು ಇವು ಸಹ ಆಗಬಾರದೆಂದು ಕರ್ತನಾದ ದೇವರು ಹೇಳುತ್ತಾನೆ.
ದೇವರು ತಿರುಗಿ ಕೊಂಡು ಪಶ್ಚಾತ್ತಾಪಪಟ್ಟು ನಾವು ನಾಶವಾಗದ ಹಾಗೆ ತನ್ನ ಕೋಪದ ಉರಿಯನ್ನು ಬಿಟ್ಟಾನೇನೋ ಯಾರು ಬಲ್ಲರು ಅಂದನು.ಆಗ ದೇವರು ಅವರ ಕ್ರಿಯೆಗಳನ್ನೂ ಅವರು ತಮ್ಮ ಕೆಟ್ಟ ಮಾರ್ಗವನ್ನೂ ಬಿಟ್ಟು ತಿರುಗಿದರೆಂದು ನೋಡಿದನು; ದೇವರು ಅವರಿಗೆ ಮಾಡುತ್ತೇನೆಂದು ಹೇಳಿದ ಕೇಡಿನ ವಿಷಯವಾಗಿ ಪಶ್ಚಾತ್ತಾಪಪಟ್ಟು ಅದನ್ನು ಮಾಡಲಿಲ್ಲ.
ಆದದರಿಂದ ಕರ್ತನು ಹೀಗೆ ಹೇಳುತ್ತಾನೆ --ನಾನು ಕನಿಕರದಿಂದ ಯೆರೂಸಲೇಮಿನ ಕಡೆಗೆ ತಿರುಗಿಕೊಂಡಿದ್ದೇನೆ; ನನ್ನ ಆಲಯವು ಅದರಲ್ಲಿ ಕಟ್ಟ ಲ್ಪಡುವದೆಂದು ಸೈನ್ಯಗಳ ಕರ್ತನು ಅನ್ನುತ್ತಾನೆ; ಯೆರೂ ಸಲೇಮಿನ ಮೇಲೆ ಅಳತೆ ನೂಲು ಚಾಚಲ್ಪಡುವದು.