ಆದರೆ ಕರ್ತನು ನನಗೆ ದುರ್ಗವೂ ನನ್ನ ದೇವರು ನನ್ನ ಆಶ್ರಯದ ಬಂಡೆಯೂ ಆಗಿದ್ದಾನೆ.ಅವರ ಅಪರಾಧವನ್ನು ಅವರ ಮೇಲೆ ತಿರಿಗಿ ಬರಮಾಡುವನು; ಅವರ ಕೇಡಿನಲ್ಲಿ ಅವರನ್ನು ಸಂಹರಿಸುವನು; ನಮ್ಮ ದೇವರಾದ ಕರ್ತನು ಅವರನ್ನು ಸಂಹರಿಸುವನು.
Cross references
ಕರ್ತನು ಕುಗ್ಗಿದವರಿಗೆ ಆಶ್ರಯವಾಗಿರುವನು, ಇಕ್ಕಟ್ಟಿನ ಸಮಯದಲ್ಲಿ ಸಹ ಆಶ್ರಯವಾಗಿರುವನು.
ಕರ್ತನು ನನ್ನ ಬಂಡೆಯೂ ನನ್ನ ಕೋಟೆಯೂ ನನ್ನನ್ನು ತಪ್ಪಿಸು ವಾತನೂ ನನ್ನ ದೇವರೂ ನಾನು ಭರವಸವಿಡುವ ನನ್ನ ಬಲವೂ ನನ್ನ ಗುರಾಣಿಯೂ ನನ್ನ ರಕ್ಷಣೆಯ ಕೊಂಬೂ ನನ್ನ ಉನ್ನತವಾದ ದುರ್ಗವೂ ಆಗಿದ್ದಾನೆ.
ಕರ್ತನು ನನ್ನ ಬೆಳಕೂ ರಕ್ಷಣೆಯೂ ಆಗಿದ್ದಾನೆ; ನಾನು ಯಾರಿಗೆ ಭಯಪಡು ವೆನು? ಕರ್ತನು ನನ್ನ ಜೀವದ ಬಲವಾಗಿದ್ದಾನೆ; ನಾನು ಯಾರಿಗೆ ಹೆದರುವೆನು?
ನನ್ನ ಬಲಕ್ಕಾಗಿ ನಾನು ನಿನ್ನನ್ನು ಕಾದುಕೊಂಡಿರುವೆನು; ದೇವರು ನನ್ನ ದುರ್ಗವಾಗಿದ್ದಾನೆ.
ಆದರೆ ನಾನು ನಿನ್ನ ಬಲದ ವಿಷಯವಾಗಿ ಹಾಡುವೆನು; ಹೌದು, ಹೊತ್ತಾರೆ ನಿನ್ನ ಕೃಪೆಗಾಗಿ ಉತ್ಸಾಹಪಡುವೆನು; ನೀನು ನನಗೆ ದುರ್ಗ ವಾಗಿಯೂ ನನ್ನ ಇಕ್ಕಟ್ಟಿನ ದಿವಸದಲ್ಲಿ ಆಶ್ರಯ ವಾಗಿಯೂ ಇದ್ದೀ.ಓ ನನ್ನ ಬಲವೇ, ನಿನ್ನನ್ನು ಕೀರ್ತಿಸುವೆನು; ದೇವರು ನನ್ನ ದುರ್ಗವೂ ಕರುಣೆ ಯುಳ್ಳ ನನ್ನ ದೇವರೂ ಆಗಿದ್ದಾನೆ.
ಆತನೇ ನನ್ನ ಬಂಡೆಯೂ ರಕ್ಷಣೆಯೂ ದುರ್ಗವೂ ಆಗಿದ್ದಾನೆ; ನಾನು ಕದಲುವದೇ ಇಲ್ಲ.
ಆತನೇ ನನ್ನ ಬಂಡೆಯೂ ರಕ್ಷಣೆಯೂ ದುರ್ಗವೂ ಆಗಿದ್ದಾನೆ. ನಾನು ಕದಲೆನು.
ಎಲ್ಲಾ ಕಾಲದಲ್ಲಿ ಆತನಲ್ಲಿ ಭರವಸ ವಿಡಿರಿ, ಜನರೇ; ನಿಮ್ಮ ಹೃದಯವನ್ನು ಆತನ ಮುಂದೆ ಹೊಯ್ಯಿರಿ; ದೇವರು ನಮಗೆ ಆಶ್ರಯವಾಗಿದ್ದಾನೆ. ಸೆಲಾ.
ಜನಾಂಗಗಳನ್ನು ಶಿಕ್ಷಿಸುವ ವನೂ ಮನುಷ್ಯನಿಗೆ ತಿಳುವಳಿಕೆಯನ್ನು ಕಲಿಸುವವನೂ ಗದರಿಸನೋ?
ಬಂಡೆಗಳ ಕೋಟೆಗಳು ಅವನಿಗೆ ಆಶ್ರಯವಾಗಿ ರುವವು. ರೊಟ್ಟಿಯು ಅವನಿಗೆ ಕೊಡಲ್ಪಡುವದು, ನೀರು ತಪ್ಪುವದಿಲ್ಲ.