ಕರ್ತನೇ, ದುಷ್ಟರು ಎಷ್ಟರ ವರೆಗೆ ದುಷ್ಟರು ಎಷ್ಟರ ವರೆಗೆ ಜಯಿಸುವರು?
Cross references
ಹಾಮಾನನು ತನ್ನ ಐಶ್ವರ್ಯದ ಘನವನ್ನೂ ತನ್ನ ಮಕ್ಕಳ ಹೆಚ್ಚಳವನ್ನೂ ಅರಸನು ತನ್ನನ್ನು ಯಾವದರಲ್ಲಿ ಹೆಚ್ಚಿಸಿದ್ದಾನೋ ಅರಸನ ಪ್ರಭು ಗಳ ಮೇಲೆಯೂ ಸೇವಕರ ಮೇಲೆಯೂ ತನ್ನನ್ನು ಹೇಗೆ ಎತ್ತಿದ್ದಾನೆಂದೂ ಎಲ್ಲವನ್ನೂ ಅವರಿಗೆ ವಿವರ ವಾಗಿ ಹೇಳಿದನು.
ಹಾಮಾನನು ಒಳಕ್ಕೆ ಬಂದಾಗ ಅರಸನು ಅವನಿಗೆ--ಅರಸನು ಇಷ್ಟಪಟ್ಟು ಘನಪಡಿಸಬೇಕೆಂದಿ ರುವ ಮನುಷ್ಯನಿಗೆ ಮಾಡಬೇಕಾದದ್ದೇನು ಅಂದನು. ಆಗ ಹಾಮಾನನು ತನ್ನ ಹೃದಯದಲ್ಲಿ--ಅರಸನು ನನಗಿಂತ ಹೆಚ್ಚಾಗಿ ಇನ್ನಾರನ್ನು ಘನಪಡಿಸಬೇಕೆಂದಿ ರುವನು ಎಂದು ಅಂದುಕೊಂಡನು.
ಅದಕ್ಕೆ ಎಸ್ತೇರಳು--ವೈರಿಯೂ ಶತ್ರುವೂ ಯಾರಂದರೆ ಈ ಕೆಟ್ಟವನಾದ ಹಾಮಾನನೇ ಅಂದಳು. ಆಗ ಹಾಮಾನನು ಅರಸನ, ರಾಣಿಯ ಸಮ್ಮುಖದಲ್ಲಿ ಹೆದರಿ ಕೊಂಡನು.
ಅವರು ಮೊರ್ದೆಕೈ ಗೋಸ್ಕರ ಹಾಮಾನನು ಸಿದ್ಧ ಮಾಡಿಸಿದ್ದ ಗಲ್ಲಿನ ಮರದಲ್ಲಿ ಅವನನ್ನು ಹಾಕಿದರು. ಆಗ ಅರಸನ ಕೋಪವು ಶಾಂತವಾಯಿತು.
ಏನಂದರೆ, ದುಷ್ಟರ ಜಯವು ಸ್ವಲ್ಪ ಕಾಲದ್ದೂ ಕಪಟಿಗಳ ಸಂತೋಷವು ಕ್ಷಣ ಮಾತ್ರದ್ದೂ.
ನೀನು ನನ್ನ ಬಲವಾದ ದೇವರಾಗಿದ್ದೀ; ಯಾಕೆ ನನ್ನನ್ನು ತಳ್ಳಿ ಬಿಟ್ಟಿದ್ದೀ? ಯಾಕೆ ನಾನು ಶತ್ರುವಿನ ಬಾಧೆಯಲ್ಲಿ ಇದ್ದು ದುಃಖದಲ್ಲಿ ನಡೆದುಕೊಳ್ಳಬೇಕು?
ಅವರು ಕೆಟ್ಟುಹೋದವರು. ಸಂಕಟ ಪಡುವವರ ವಿಷಯ ಕೆಟ್ಟದ್ದಾಗಿಯೂ ಗರ್ವದಿಂದಲೂ ಮಾತನಾಡುತ್ತಾರೆ.
ನಮ್ಮ ಗುರುತುಗಳನ್ನು ನೋಡದೆ ಇದ್ದೇವೆ; ಇನ್ನು ಮೇಲೆ ಯಾವ ಪ್ರವಾದಿಯೂ ಇರುವದಿಲ್ಲ ಇಲ್ಲವೆ ಇದು ಎಷ್ಟರವರೆಗೆ ಎಂದು ತಿಳಿದವನು ನಮ್ಮಲ್ಲಿ ಯಾರೂ ಇಲ್ಲ.
ಕರ್ತನೇ, ನೀನು ಯಾವಾಗಲೂ ಕೋಪ ಮಾಡು ವದೂ ನಿನ್ನ ರೋಷವು ಬೆಂಕಿಯ ಹಾಗೆ ಉರಿಯು ವದೂ ಎಷ್ಟರವರೆಗೆ?
ಸೈನ್ಯಗಳ ದೇವರಾದ ಓ ಕರ್ತನೇ, ಎಷ್ಟರವರೆಗೆ ನಿನ್ನ ಜನರ ಪ್ರಾರ್ಥನೆಗೆ ವಿರೋಧವಾಗಿ ಕೋಪ ಗೊಳ್ಳುತ್ತೀ?
ಕರ್ತನೇ, ಎಷ್ಟರ ವರೆಗೆ? ಸದಾಕಾಲಕ್ಕೆ ನೀನು ಮರೆಯಾಗಿರುವಿ? ನಿನ್ನ ಸಿಟ್ಟು ಬೆಂಕಿಯ ಹಾಗೆ ಉರಿಯುವದೋ?
ಕರ್ತನು ನನಗೆ--ನೀನು ಹೋಗಿ ನಾರಿನ ದಟ್ಟಿಯನ್ನು ತೆಗೆದುಕೊಂಡು ನಿನ್ನ ನಡುವಿಗೆ ಕಟ್ಟು, ಆದರೆ ಅದನ್ನು ನೀರಿನಲ್ಲಿ ಹಾಕಬೇಡ ಅಂದನು;
ಓಡಿಹೋಗಿರಿ, ನಿಮ್ಮ ಪ್ರಾಣಗಳನ್ನು ತಪ್ಪಿಸಿಕೊಳ್ಳಿರಿ; ಅರಣ್ಯದಲ್ಲಿರುವ ಒಣಗಿಡದ ಹಾಗಿರ್ರಿ.
ಓ ಕರ್ತನೇ, ನಾನು ನಿನಗೆ ಮೊರೆಯಿಟ್ಟರೂ ಎಷ್ಟರ ವರೆಗೆ ನೀನು ಕೇಳದೇ ಇರುವಿ? ಹಿಂಸೆ ಹಿಂಸೆ ಎಂದು ನಿನಗೆ ಕೂಗುತ್ತೇನೆ; ಆದರೆ ನೀನು ರಕ್ಷಿಸುವದಿಲ್ಲ.
ಆಗ ಜನರು--ಇದು ಮನುಷ್ಯನ ಸ್ವರವಲ್ಲ , ದೇವರ ಸ್ವರವೇ ಎಂದು ಅರ್ಭಟಿಸಿದರು.
ಅವರು--ಓ ಕರ್ತನೇ, ಪರಿಶುದ್ಧನೂ ಸತ್ಯವಂತನೂ ಆಗಿರುವಾತನೇ, ಭೂಮಿಯ ಮೇಲೆ ವಾಸಿಸುವವರು ನಮ್ಮ ರಕ್ತವನ್ನು ಸುರಿಸಿದ್ದಕ್ಕಾಗಿ ನೀನು ಎಷ್ಟು ಕಾಲದವರೆಗೆ ನ್ಯಾಯವಿಚಾರಿಸದೆಯೂ ಪ್ರತಿದಂಡನೆ ಮಾಡದೆಯೂ ಇರುವಿ ಎಂದು ಮಹಾಶಬ್ದದಿಂದ ಕೂಗುತ್ತಾ ಹೇಳಿದರು.