ಓ ಕರ್ತನೇ, ನಿನ್ನ ಜನರನ್ನು ತುಂಡುತುಂಡು ಮಾಡುತ್ತಾರೆ; ನಿನ್ನ ಸ್ವಾಸ್ಥ್ಯವನ್ನು ಬಾಧಿಸುತ್ತಾರೆ.
Cross references
ಹೀಗಿರಲಾಗಿ ಬಹಳ ದಿನಗಳಾದ ಮೇಲೆ ಐಗುಪ್ತದ ಅರಸನು ಸತ್ತನು. ಇಸ್ರಾಯೇಲ್ ಮಕ್ಕಳು ದಾಸತ್ವದ ಕಾರಣದಿಂದ ನಿಟ್ಟುಸುರುಬಿಟ್ಟು ಕೂಗು ತ್ತಿದ್ದರು. ದಾಸತ್ವದ ನಿಮಿತ್ತವಾಗಿ ಅವರ ಕೂಗು ದೇವರ ಬಳಿಗೆ ಬಂತು.
ಇಲ್ಲವಾದರೆ ಅವನು ನನ್ನ ಪ್ರಾಣವನ್ನು ಸಿಂಹದಂತೆ ಹರಿದು ತುಂಡು ತುಂಡು ಮಾಡುವನು.
ಕರ್ತನನ್ನು ಪ್ರಾರ್ಥಿಸದೆ ರೊಟ್ಟಿಯನ್ನೋ ಎಂಬಂತೆ ನನ್ನ ಜನರನ್ನು ತಿಂದು ಅಪರಾಧಮಾಡಿದವರಿಗೆ ತಿಳುವಳಿಕೆಯಿಲ್ಲವೋ?
ಹೌದು, ನಿನ್ನ ನಿಮಿತ್ತ ದಿನ ವೆಲ್ಲಾ ಕೊಲ್ಲಲ್ಪಡುತ್ತೇವೆ; ಕೊಯ್ಗುರಿಗಳ ಹಾಗೆ ಎಣಿಸಲ್ಪಡುತ್ತೇವೆ.
ಅವುಗಳನ್ನು ಒಟ್ಟಾಗಿ ಕೆಡವಿ ಬಿಡೋಣ ಎಂದು ತಮ್ಮ ಹೃದಯದಲ್ಲಿ ಹೇಳಿಕೊಳ್ಳುತ್ತಾರೆ; ದೇಶದಲ್ಲಿರುವ ದೇವರ ಸಭಾಸ್ಥಾನಗಳನ್ನೆಲ್ಲಾ ಸುಟ್ಟುಬಿಡು ತ್ತಾರೆ.
ನಿನ್ನ ಬೆಳವಕ್ಕಿಯ ಪ್ರಾಣವನ್ನು ದುಷ್ಟರ ಸಮೂ ಹಕ್ಕೆ ಒಪ್ಪಿಸ ಬೇಡ; ನಿನ್ನ ದೀನರ ಸಭೆಯನ್ನು ಸದಾ ಕಾಲಕ್ಕೆ ಮರೆತುಬಿಡಬೇಡ.
ನಿನ್ನ ಸೇವಕರ ಹೆಣಗಳನ್ನು ಆಕಾಶದ ಪಕ್ಷಿಗಳಿಗೂ ಪರಿಶುದ್ಧರ ಮಾಂಸ ವನ್ನು ಭೂಮಿಯ ಮೃಗಗಳಿಗೂ ಆಹಾರವಾಗಿ ಕೊಟ್ಟಿ ದ್ದಾರೆ.
ಅವರು ಯಾಕೋಬನ್ನು ನುಂಗಿಬಿಟ್ಟಿದ್ದಾರೆ; ಅವನ ನಿವಾಸವನ್ನು ಹಾಳುಮಾಡಿದ್ದಾರೆ.
ನನ್ನ ಯೌವನ ದಿಂದ ಅವರು ನನ್ನನ್ನು ಬಹಳ ಬಾಧಿಸಿದರು; ಆದರೆ ಅವರು ನನ್ನನ್ನು ಗೆಲ್ಲಲಿಲ್ಲ.
ನೀವು ನನ್ನ ಪ್ರಜೆಯನ್ನು ಹೊಡೆದು ಚೂರು ಗಳನ್ನಾಗಿ ಮಾಡಿ ಬಡವರ ಮುಖಗಳನ್ನು ಹಿಂಡು ವದರ ಅರ್ಥವೇನು ಎಂದು ಸೈನ್ಯಗಳ ದೇವರಾದ ಕರ್ತನು ಹೇಳುತ್ತಾನೆ.
ಹಾಗಾದರೆ ಈಗ ಕರ್ತನು ಹೇಳುವದೇನಂದರೆ ನನಗೆ ಇಲ್ಲಿ ಏನಿದೆ? ನನ್ನ ಜನರು ಏನೂ ಇಲ್ಲದೆ ಒಯ್ಯಲ್ಪಟ್ಟಿದ್ದಾರಲ್ಲಾ; ಆಳುವವರು ಅವರನ್ನು ಗೋಳಾಡಿಸುತ್ತಾರಲ್ಲಾ ಮತ್ತು ನನ್ನ ಹೆಸರು ಪ್ರತಿದಿನವೂ ಎಡೆಬಿಡದೇ ದೂಷಣೆಗೆ ಗುರಿಯಾಗಿದೆ ಎಂದು ಕರ್ತನು ಹೇಳುತ್ತಾನೆ.
ಆದರೂ ನನ್ನನ್ನು ಅಸಹ್ಯಿಸುವವ ರಿಗೆ ಅವರು--ನಿಮಗೆ ಸಮಾಧಾನವಾಗುವದೆಂದು ಕರ್ತನು ಹೇಳುತ್ತಾನೆ ಎಂದು ಹೇಳುತ್ತಲೇ ಇದ್ದಾರೆ; ತಮ್ಮ ಹೃದಯದ ಕಲ್ಪನೆಯ ಪ್ರಕಾರ ನಡಕೊಳ್ಳುವವ ರೆಲ್ಲರಿಗೆ--ನಿಮ್ಮ ಮೇಲೆ ಕೇಡು ಬರುವದಿಲ್ಲ ಅನ್ನುತ್ತಾರೆ.
ಬಾಣಗಳನ್ನು ಮೆರಗು ಮಾಡಿರಿ, ಡಾಲುಗಳನ್ನು ಕೂಡಿಸಿರಿ; ಕರ್ತನು ಮೇದ್ಯರ ಅರಸರ ಆತ್ಮವನ್ನು ಎಬ್ಬಿಸಿದ್ದಾನೆ; ಆತನ ಆಲೋಚನೆ ಬಾಬೆಲಿಗೆ ವಿರೋಧವಾಗಿ ಅದನ್ನು ನಾಶಮಾಡುವದಕ್ಕೆ ಇದೆ. ಇದು ಕರ್ತನ ಪ್ರತಿದಂಡ ನೆಯೂ ಆತನ ದೇವಾಲಯದ ಪ್ರತಿದಂಡನೆಯೂ ಆಗಿದೆ.
ಅರಸನಾದ ಸೊಲೊಮೋನನು ಕರ್ತನ ಆಲಯದಲ್ಲಿ ಮಾಡಿಸಿದ ಎರಡು ಸ್ತಂಭಗಳನ್ನೂ ಒಂದು ಸಮುದ್ರವನ್ನೂ ಗದ್ದಿಗೆಗಳ ಕೆಳಗಿದ್ದ ಹನ್ನೆರಡು ಹಿತ್ತಾಳೆಯ ಎತ್ತುಗಳನ್ನೂ ತಕ್ಕೊಂಡನು; ಈ ಎಲ್ಲಾ ಪಾತ್ರೆಗಳಿಗೆ ಲೆಕ್ಕವಿಲ್ಲದಷ್ಟು ಹಿತ್ತಾಳೆ ತೂಕವಾಗಿತ್ತು.
ಅವನ ಆಹಾರದ ವಿಷಯ ವೇನಂದರೆ--ಅವನು ಬದುಕಿದ ದಿನಗಳೆಲ್ಲಾ ಅವನು ಸಾಯುವ ದಿನದವರೆಗೆ ದಿನದಿನಕ್ಕೆ ತಕ್ಕ ಆಹಾರವು ಯಾವಾಗಲೂ ಬಾಬೆಲಿನ ಅರಸನ ಕಡೆಯಿಂದ ಕೊಡಲ್ಪಡುತ್ತಿತ್ತು.
ಮನುಷ್ಯನನ್ನು ಅವನ ವ್ಯಾಜ್ಯದಲ್ಲಿ ಕೆಡಿಸುವದನ್ನೂ ಕರ್ತನು ಮೆಚ್ಚುವದಿಲ್ಲ.
ನಿನ್ನಲ್ಲಿ ತಂದೆಯನ್ನೂ ತಾಯಿಯನ್ನೂ ಅಲಕ್ಷ್ಯ ಮಾಡಿದ್ದಾರೆ; ನಿನ್ನಲ್ಲಿ ಅಪರಿಚಿತರಿಗೆ ಬಲಾತ್ಕಾರ ಮಾಡಿದ್ದಾರೆ; ನಿನ್ನಲ್ಲಿ ದಿಕ್ಕಿಲ್ಲದವನನ್ನೂ ವಿಧವೆಯನ್ನೂ ಪೀಡಿಸಿದ್ದಾರೆ.
ಒಳ್ಳೇದನ್ನು ಹಗೆಮಾಡಿ ಕೆಟ್ಟದ್ದನ್ನು ಪ್ರೀತಿಮಾಡುವವರೇ, ಅವರ ಮೇಲಿನಿಂದ ಅವರ ಚರ್ಮವನ್ನೂ ಅವರ ಎಲುಬುಗಳ ಮೇಲಿನಿಂದ ಅವರ ಮಾಂಸವನ್ನೂ ಕಿತ್ತುಕೊಳ್ಳು ವವರೇ,
ಇದಲ್ಲದೆ ನನ್ನ ಇಬ್ಬರು ಸಾಕ್ಷಿಗಳು ಗೋಣಿತಟ್ಟನ್ನು ಹೊದ್ದುಕೊಂಡು ಸಾವಿರದ ಇನ್ನೂರ ಅರವತ್ತು ದಿನಗಳ ತನಕ ಪ್ರವಾದಿಸುವ ಹಾಗೆ ಅವರಿಗೆ ಅಧಿಕಾರ ಕೊಡುವೆನು.
ಆ ಸ್ತ್ರೀಯು ಪರಿಶುದ್ದರ ರಕ್ತವನ್ನೂ ಯೇಸುವಿಗೋಸ್ಕರ ಸಾಕ್ಷಿಕೊಟ್ಟು ಹತರಾದವರ ರಕಆ ಸ್ತ್ರೀಯು ಪರಿಶುದ್ದರ ರಕ್ತವನ್ನೂ ಯೇಸುವಿಗೋಸ್ಕರ ಸಾಕ್ಷಿಕೊಟ್ಟು ಹತರಾದವರ ರಕ