Home Psalm 95 · ಕನ್ನಡ ಬೈಬಲ್

Psalm

Chapter 95

ಕನ್ನಡ ಬೈಬಲ್
1ಬನ್ನಿರಿ, ಕರ್ತನಿಗೆ ಉತ್ಸಾಹ ಧ್ವನಿಮಾಡುವಾ ನಮ್ಮ ರಕ್ಷಣೆಯ ಬಂಡೆಗೆ ಜಯಧ್ವನಿ ಮಾಡೋಣ.
2ಸ್ತೋತ್ರದಿಂದ ಆತನ ಸನ್ನಿಧಿಯ ಮುಂದೆ ಬಂದು ಕೀರ್ತನೆಗಳಿಂದ ಆತನಿಗೆ ಆನಂದದ ಧ್ವನಿಮಾಡೋಣ.
3ಕರ್ತನು ದೊಡ್ಡ ದೇವರೂ ಎಲ್ಲಾ ದೇವರುಗಳ ಮೇಲೆ ದೊಡ್ಡ ಅರಸನೂ ಆಗಿದ್ದಾನೆ.
4ಆತನ ಕೈಯಲ್ಲಿ ಭೂಮಿಯ ಆಳವಾದ ಸ್ಥಳಗಳು ಅವೆ; ಬೆಟ್ಟಗಳ ಬಲವು ಆತನದೇ.
5ಸಮುದ್ರವು ಆತನದು; ಆತನು ಅದನ್ನು ಮಾಡಿದನು; ಆತನ ಕೈಗಳು ಒಣಭೂಮಿಯನ್ನು ರೂಪಿಸಿದವು.
6ಬನ್ನಿರಿ, ನಮ್ಮನ್ನು ಉಂಟುಮಾಡಿದ ಕರ್ತನ ಮುಂದೆ ಮೊಣಕಾಲು ಊರೋಣ ಆತನಿಗೆ ಎರಗಿ ಆರಾಧಿಸೋಣ.
7ಆತನು ನಮ್ಮ ದೇವರು; ನಾವು ಆತನು ಮೇಯಿಸುವ ಜನರೂ ಆತನ ಕೈ ಕೆಳಗಿರುವ ಹಿಂಡೂ ಆಗಿದ್ದೇವೆ. ನೀವು ಈ ಹೊತ್ತು ಆತನ ಸ್ವರವನ್ನು ಕೇಳಿದರೆ
8ಅರಣ್ಯದಲ್ಲಿ ಆದ ಶೋಧನೆಯ ದಿವಸದಲ್ಲಿ ಕೋಪವನ್ನೆಬ್ಬಿಸಿದಂತೆ ನಿಮ್ಮ ಹೃದ ಯವನ್ನು ಕಠಿಣಮಾಡಿಕೊಳ್ಳಬೇಡಿರಿ.
9ಅಲ್ಲಿ ನಿಮ್ಮ ತಂದೆಗಳು ನನ್ನನ್ನು ಶೋಧಿಸಿ, ಪರೀಕ್ಷಿಸಿದರು; ನನ್ನ ಕೆಲಸವನ್ನು ನೋಡಿದರು.
10ನಾಲ್ವತ್ತು ವರುಷ ಆ ಸಂತತಿಗೆ ಬೇಸರಗೊಂಡು--ಇವರು ತಮ್ಮ ಹೃದಯ ದಲ್ಲಿ ತಪ್ಪಿ ಹೋಗುವ ಜನರಾಗಿದ್ದಾರೆ; ನನ್ನ ಮಾರ್ಗ ಗಳನ್ನು ಅವರು ಅರಿಯರು ಅಂದೆನು.ಆದದರಿಂದ ನನ್ನ ವಿಶ್ರಾಂತಿಯಲ್ಲಿ ಅವರು ಪ್ರವೇಶಿಸರೆಂದು ಕೋಪ ದಿಂದ ಆಣೆ ಇಟ್ಟುಕೊಂಡೆನು.
11ಆದದರಿಂದ ನನ್ನ ವಿಶ್ರಾಂತಿಯಲ್ಲಿ ಅವರು ಪ್ರವೇಶಿಸರೆಂದು ಕೋಪ ದಿಂದ ಆಣೆ ಇಟ್ಟುಕೊಂಡೆನು.
Bible Study with Steffi App

Memorize verses with spaced repetition. Free, no ads, 15+ languages.

Download Free ↗

Choose Theme