ಆದದರಿಂದ ನನ್ನ ವಿಶ್ರಾಂತಿಯಲ್ಲಿ ಅವರು ಪ್ರವೇಶಿಸರೆಂದು ಕೋಪ ದಿಂದ ಆಣೆ ಇಟ್ಟುಕೊಂಡೆನು.
Cross references
ಏಳನೆಯ ದಿನದಲ್ಲಿ ದೇವರು ತಾನು ಮಾಡಿದ್ದ ತನ್ನ ಕೆಲಸವನ್ನು ಮುಗಿಸಿದ ಮೇಲೆ ಏಳನೆಯ ದಿನದಲ್ಲಿ ತಾನು ಮಾಡಿದ್ದ ಎಲ್ಲಾ ಕೆಲಸದಿಂದ ವಿಶ್ರಮಿಸಿಕೊಂಡನು.
ನಾನು ಅವರ ಪಿತೃಗಳಿಗೆ ಪ್ರಮಾಣಮಾಡಿದ ದೇಶವನ್ನು ನಿಶ್ಚಯವಾಗಿ ಅವರು ನೋಡುವದಿಲ್ಲ; ಇಲ್ಲವೆ ನನಗೆ ಕೋಪವನ್ನು ಎಬ್ಬಿಸಿದವರು ಸಹ ಅದನ್ನು ನೋಡು ವದಿಲ್ಲ.
ಆದದರಿಂದ ನೀನು ಅವರಿಗೆ--ನನ್ನ ಜೀವದಾಣೆ, ನೀವು ನನ್ನ ಕಿವಿಗಳು ಕೇಳುವಂತೆ ಮಾತನಾಡಿದ ಪ್ರಕಾರವೇ ನಿಮಗೆ ಮಾಡುವೆನು ಎಂದು ಕರ್ತನು ಹೇಳುತ್ತಾನೆ.
ಯೆಫುನ್ನೆಯ ಮಗನಾದ ಕಾಲೇಬನು ನೂನನ ಮಗನಾದ ಯೆಹೋಶುವನ ಹೊರತು ನಾನು ನಿಮ್ಮನ್ನು ವಾಸಮಾಡಿಸುವದಕ್ಕಾಗಿ ಪ್ರಮಾಣಮಾಡಿದ ದೇಶಕ್ಕೆ ನಿಸ್ಸಂದೇಹವಾಗಿ ನೀವು ಬಾರದೆ ಇರುವಿರಿ.
ಕರ್ತನು ನಿಮ್ಮ ಮಾತುಗಳ ಧ್ವನಿಯನ್ನು ಕೇಳಿ ಕೋಪಿಸಿಕೊಂಡು ಪ್ರಮಾಣಮಾಡಿ--
ನಿಶ್ಚಯವಾಗಿ ಕೆಟ್ಟಸಂತತಿಯಾದ ಈ ಮನುಷ್ಯರಲ್ಲಿ ಒಬ್ಬನಾದರೂ ನಾನು ನಿಮ್ಮ ಪಿತೃಗಳಿಗೆ ಕೊಡುತ್ತೇನೆಂದು ಪ್ರಮಾಣ ಮಾಡಿದ ಆ ಒಳ್ಳೇ ದೇಶವನ್ನು ನೋಡುವದಿಲ್ಲ.
ನಿಮ್ಮ ದೇವರಾದ ಕರ್ತನು ನಿಮಗೆ ಕೊಡುವ ವಿಶ್ರಾಂತಿಗೂ ಸ್ವಾಸ್ತ್ಯಕ್ಕೂ ನೀವು ಇನ್ನೂ ಸೇರಲಿಲ್ಲ;
ಆದದರಿಂದ ನೀನು ಈ ಜನರಿಗೋಸ್ಕರ ಪ್ರಾರ್ಥನೆ ಮಾಡಬೇಡ; ಅವರಿಗೋಸ್ಕರ ಮೊರೆ ಯನ್ನೂ ಪ್ರಾರ್ಥನೆಯನ್ನೂ ಎತ್ತಬೇಡ ಇಲ್ಲವೆ ನನಗೆ ವಿಜ್ಞಾಪನೆ ಮಾಡಬೇಡ; ನಾನು ಅದನ್ನು ಕೇಳಿಸಿಕೊಳ್ಳು ವದಿಲ್ಲ.
ವ್ಯರ್ಥವಾದದ್ದನ್ನು ದರ್ಶಿಸಿ, ಸುಳ್ಳು ಭವಿಷ್ಯಗಳನ್ನು ಹೇಳುವ ಪ್ರವಾದಿಗಳ ಮೇಲೆ ನನ್ನ ಕೈ ಮಾಡುವೆನು. ಅವರು ನನ್ನ ಜನರ ಸಭೆಯಲ್ಲಿ ಇರುವದೂ ಇಲ್ಲ, ಇಸ್ರಾಯೇಲನ ಮನೆತನದವರ ಪಟ್ಟಿಯಲ್ಲಿ ಬರೆಯಲ್ಪಡುವದೂ ಇಲ್ಲ; ಇಸ್ರಾಯೇಲಿನ ದೇಶದಲ್ಲಿ ಪ್ರವೇಶಿಸುವದೂ ಇಲ್ಲ; ನಾನೇ ದೇವರಾದ ಕರ್ತನೆಂದು ನೀವು ತಿಳಿದುಕೊಳ್ಳುವಿರಿ.
ಆದಾಗ್ಯೂ ಯಾವನಾದರೂ ವಾದಿಸದಿರಲಿ ಇಲ್ಲವೆ ಬೇರೆಯವ ರನ್ನು ಖಂಡಿಸದಿರಲಿ; ನಿಮ್ಮ ಜನರೆಲ್ಲರೂ ಯಾಜಕ ನೊಂದಿಗೆ ವಾದಿಸುವವರ ಹಾಗಿದ್ದಾರೆ.
ಕಷ್ಟಪಡುವವರೇ ಮತ್ತು ಭಾರಹೊತ್ತವರೇ, ನೀವೆಲ್ಲರೂ ನನ್ನ ಬಳಿಗೆ ಬನ್ನಿರಿ, ನಾನು ನಿಮಗೆ ವಿಶ್ರಾಂತಿಯನ್ನು ಕೊಡುವೆನು.
ಹೀಗಿರಲು--ಅವರು ನನ್ನ ವಿಶ್ರಾಂತಿಯಲ್ಲಿ ಸೇರುವದೇ ಇಲ್ಲವೆಂದು ನಾನು ನನ್ನ ಕೋಪದಲ್ಲಿ ಪ್ರಮಾಣಮಾಡಿದೆನು ಎಂದು ಆತನು ಹೇಳಿದ್ದಾನೆ).
ತನ್ನ ವಿಶ್ರಾಂತಿಯಲ್ಲಿ ಅವರು ಸೇರುವದೇ ಇಲ್ಲವೆಂದು ಯಾರನ್ನು ಕುರಿತು ಆತನು ಪ್ರಮಾಣಮಾಡಿದನು? ನಂಬದವರ ವಿಷಯ ವಾಗಿ ಅಲ್ಲವೇ?ಅವರು ಸೇರಲಾರದೆ ಹೋದದ್ದು ಅಪನಂಬಿಕೆಯಿಂದಲೇ ಎಂದು ತಿಳಿದುಕೊಳ್ಳುತ್ತೇವೆ.
ಲೋಕದ ಅಸ್ತಿ ವಾರದೊಡನೆ (ಆತನ) ಕೆಲಸಗಳು ಮುಗಿದಿದ್ದರೂ ಆತನು--ಅವರು ನನ್ನ ವಿಶ್ರಾಂತಿಯಲ್ಲಿ ಸೇರುವದೇ ಇಲ್ಲವೆಂದು ನಾನು ಕೋಪದಿಂದ ಪ್ರಮಾಣಮಾಡಿ ದೆನು ಎಂದು ಹೇಳಿದನು. ನಂಬಿರುವ ನಾವೇ ಆ ವಿಶ್ರಾಂತಿಯಲ್ಲಿ ಪ್ರವೇಶಿಸುತ್ತೇವೆ.
ಈ ಸ್ಥಳದಲ್ಲಿ--ಇವರು ನನ್ನ ವಿಶ್ರಾಂತಿಯಲ್ಲಿ ಸೇರುವದಿಲ್ಲ ಎಂತಲೂ ಆತನು ಹೇಳಿದ್ದಾನೆ.
ಪರಲೋಕದಿಂದ ಬಂದ ಶಬ್ದವನ್ನು ನಾನು ಕೇಳಿ ದೆನು. ಅದು--ಇಂದಿನಿಂದ ಕರ್ತನಲ್ಲಿ ಯಾರಾರು ಸಾಯುವರೋ ಆ ಸತ್ತವರು ಧನ್ಯರು ಎಂಬದಾಗಿ ಬರೆ ಎಂದು ನನಗೆ ಹೇಳಿತು; ಹೌದು, ಅವರು ತಮ್ಮ ಪ್ರಯಾಸಗಳಿಂದ ವಿಶ್ರಮಿಸಿಕೊಳ್ಳುವರು, ಅವರ ಕ್ರಿಯೆಗಳು ಅವರನ್ನು ಹಿಂಬಾಲಿಸುತ್ತವೆ ಎಂದು ಆತ