Home Bibles ಕೀರ್ತನೆಗಳು 96 · ಕನ್ನಡ ಬೈಬಲ್ ||

ಕೀರ್ತನೆಗಳು

Chapter 96

ಕನ್ನಡ ಬೈಬಲ್
1ಕರ್ತನಿಗೆ ಹೊಸ ಹಾಡನ್ನು ಹಾಡಿರಿ; ಸಮಸ್ತ ಭೂಮಿಯೇ, ಕರ್ತನಿಗೆ ಹಾಡಿರಿ. 2ಕರ್ತನಿಗೆ ಹಾಡಿರಿ, ಆತನ ಹೆಸರನ್ನು ಸ್ತುತಿಸಿರಿ; ಆತನ ರಕ್ಷಣೆಯನ್ನು ದಿನ ದಿನಕ್ಕೆ ಸಾರಿ ಹೇಳಿರಿ. 3ಅನ್ಯಜನಾಂಗದಲ್ಲಿ ಆತನ ಘನವನ್ನೂ ಎಲ್ಲಾ ಜನಾಂಗಗಳಲ್ಲಿ ಆತನ ಅದ್ಭುತಗಳನ್ನೂ ವಿವ ರಿಸಿರಿ. 4ಕರ್ತನು ದೊಡ್ಡವನೂ ಬಹಳವಾಗಿ ಸ್ತುತಿಸ ಲ್ಪಡತಕ್ಕವನೂ ಆಗಿದ್ದಾನೆ; ಆತನಿಗೇ ಭಯಪಡ ತಕ್ಕದ್ದು. 5ಜನಾಂಗಗಳ ದೇವರುಗಳೆಲ್ಲಾ ವಿಗ್ರಹಗಳಾಗಿವೆ; ಆದರೆ ಕರ್ತನು ಆಕಾಶಗಳನ್ನು ನಿರ್ಮಿಸಿ ದನು. 6ಘನವೂ ಪ್ರಭೆಯೂ ಆತನ ಮುಂದೆ ಅವೆ; ಬಲವೂ ಸೌಂದರ್ಯವೂ ಆತನ ಪರಿಶುದ್ಧ ಸ್ಥಳದಲ್ಲಿ ಅವೆ. 7ಓ ಜನಾಂಗಗಳೇ, ಕರ್ತನಿಗೆ ನೀವು ಘನವನ್ನೂ ಬಲವನ್ನೂ ಸಲ್ಲಿಸಿರಿ. 8ಕರ್ತನಿಗೆ, ಆತನ ಹೆಸರಿಗೆ ಸಲ್ಲತಕ್ಕ ಘನವನ್ನು ಸಲ್ಲಿಸಿರಿ; ಕಾಣಿಕೆ ತೆಗೆದುಕೊಂಡು ಆತನ ಅಂಗಳಗಳಿಗೆ ಬನ್ನಿರಿ. 9ಪರಿಶುದ್ಧತ್ವದ ಸೌಂದರ್ಯದಿಂದ ಕರ್ತನನ್ನು ಆರಾಧಿಸಿರಿ; ಸಮಸ್ತ ಭೂಮಿಯೇ, ಆತನ ಮುಂದೆ ಭಯಪಡು, 10ಕರ್ತನು ಆಳುತ್ತಾನೆ; ಲೋಕವು ಸ್ಥಿರವಾಗಿದೆ, ಕದಲುವದಿಲ್ಲ. ಆತನು ಜನಗಳಿಗೆ ನೀತಿಯಲ್ಲಿ ನ್ಯಾಯತೀರಿಸುವನೆಂದು ಅನ್ಯಜನಾಂಗಗಳಲ್ಲಿ ಹೇಳಿರಿ. 11ಆಕಾಶಗಳು ಸಂತೋಷಿಸಲಿ; ಭೂಮಿಯು ಉಲ್ಲಾಸಪಡಲಿ; ಸಮುದ್ರವೂ ಅದರ ಪರಿಪೂರ್ಣ ತೆಯೂ ಘೋಷಿಸಲಿ. 12ಹೊಲವೂ ಅದರಲ್ಲಿರುವ ಸಮಸ್ತವೂ ಉತ್ಸಾಹಪಡಲಿ; ಅಡವಿಯ ಮರಗಳೆಲ್ಲಾ ಕರ್ತನ ಮುಂದೆಯೇ ಉತ್ಸಾಹಧ್ವನಿ ಮಾಡಲಿ.ಆತನು ಬರುತ್ತಾನೆ, ಭೂಮಿಗೆ ನ್ಯಾಯತೀರಿಸಲು ಬರುತ್ತಾನೆ; ಲೋಕಕ್ಕೆ ನೀತಿಯಿಂದಲೂ ಜನಗಳಿಗೆ ತನ್ನ ಸತ್ಯದಿಂದಲೂ ನ್ಯಾಯತೀರಿಸುವನು. 13ಆತನು ಬರುತ್ತಾನೆ, ಭೂಮಿಗೆ ನ್ಯಾಯತೀರಿಸಲು ಬರುತ್ತಾನೆ; ಲೋಕಕ್ಕೆ ನೀತಿಯಿಂದಲೂ ಜನಗಳಿಗೆ ತನ್ನ ಸತ್ಯದಿಂದಲೂ ನ್ಯಾಯತೀರಿಸುವನು.

Choose Theme