Home Bibles ಕೀರ್ತನೆಗಳು 97:4 · ಕನ್ನಡ ಬೈಬಲ್
ಕೀರ್ತನೆಗಳು 97:4 · ಕನ್ನಡ ಬೈಬಲ್

ಆತನ ಮಿಂಚುಗಳು ಲೋಕವನ್ನು ಬೆಳಗಿಸುತ್ತವೆ; ಭೂಮಿಯು ನೋಡಿ, ನಡುಗುತ್ತದೆ.

Cross references

ನಿರ್ಗಮಕಾಂಡ 19:16

ಮೂರನೆಯ ದಿನದಲ್ಲಿ ಉದಯವಾದಾಗ ಬೆಟ್ಟದ ಮೇಲೆ ಗುಡುಗುಗಳೂ ಮಿಂಚುಗಳೂ ಮಂದವಾದ ಮೇಘವೂ ಉಂಟಾಗಿ ಬಹು ಬಲವಾದ ತುತೂರಿಯ ಶಬ್ದವಾಯಿತು. ಪಾಳೆಯದಲ್ಲಿದ್ದ ಜನರೆಲ್ಲರೂ ನಡುಗಿ ದರು.

ಯೋಬ 9:6

ಭೂಮಿಯನ್ನು ಅದರ ಸ್ಥಳದೊಳಗಿಂದ ಕದಲಿಸುತ್ತಾನೆ; ಅದರ ಸ್ತಂಭಗಳು ನಡುಗುತ್ತವೆ.

ಯೋಬ 37:3

ಎಲ್ಲಾ ಆಕಾಶದ ಕೆಳಗೆ ಆತನು ಅದನ್ನು ನಡಿಸುತ್ತಾನೆ. ತನ್ನ ಮಿಂಚನ್ನು ಭೂಮಿಯ ಅಂಚುಗಳ ವರೆಗೆ ನಡಿಸುತ್ತಾನೆ.

ಕೀರ್ತನೆಗಳು 77:18

ನಿನ್ನ ಗುಡುಗಿನ ಶಬ್ದವು ಆಕಾಶ ಮಂಡಲದಲ್ಲಿ ಇತ್ತು; ಮಿಂಚುಗಳು ಜಗತ್ತನ್ನು ಬೆಳಗ ಮಾಡಿದವು; ಭೂಮಿಯು ನಡುಗಿ ಕದಲಿತು.

ಕೀರ್ತನೆಗಳು 77:19

ನಿನ್ನ ಮಾರ್ಗವು ಸಮುದ್ರದಲ್ಲಿ ಅದೆ; ನಿನ್ನ ಹಾದಿಯು ಬಹಳ ನೀರುಗಳಲ್ಲಿ ಅವೆ; ನಿನ್ನ ಹೆಜ್ಜೆಗಳು ತಿಳಿಯ ಲ್ಪಡಲಿಲ್ಲ.ಮೋಶೆ ಆರೋನರ ಕೈಯಿಂದ ನಿನ್ನ ಜನರನ್ನು ಮಂದೆಯ ಹಾಗೆ ನಡಿಸಿದಿ.

ಕೀರ್ತನೆಗಳು 96:9

ಪರಿಶುದ್ಧತ್ವದ ಸೌಂದರ್ಯದಿಂದ ಕರ್ತನನ್ನು ಆರಾಧಿಸಿರಿ; ಸಮಸ್ತ ಭೂಮಿಯೇ, ಆತನ ಮುಂದೆ ಭಯಪಡು,

ಕೀರ್ತನೆಗಳು 104:32

ಆತನು ಭೂಮಿಯನ್ನು ದೃಷ್ಟಿಸಲು ಅದು ನಡು ಗುತ್ತದೆ; ಬೆಟ್ಟಗಳನ್ನು ಮುಟ್ಟಲು ಅವು ಹೊಗೆ ಹಾಯುತ್ತವೆ.

ಕೀರ್ತನೆಗಳು 114:7

ಬಂಡೆಯನ್ನು ನೀರಿನ ಕೆರೆಗೂ ಬೆಣಚು ಕಲ್ಲನ್ನು ನೀರಿನ ಬುಗ್ಗೆಗೂ ಮಾರ್ಪಡಿಸುವಕರ್ತನ ಸನ್ನಿಧಿ ಯಲ್ಲಿಯೂ ಯಾಕೋಬನ ದೇವರ ಮುಂದೆಯೂ ಭೂಮಿಯೇ, ನಡುಗು.

ಕೀರ್ತನೆಗಳು 144:5

ಓ ಕರ್ತನೇ, ನಿನ್ನ ಆಕಾಶಗಳನ್ನು ತಗ್ಗಿಸಿ ಇಳಿದು ಬಾ; ಬೆಟ್ಟಗಳನ್ನು ಮುಟ್ಟು; ಆಗ ಅವು ಹೊಗೆ ಹಾಯುವವು.

ಯೆರೆಮಿಯ 10:10

ನನ್ನ ಮಾತುಗಳನ್ನು ಕೇಳಲೊಲ್ಲದಿದ್ದ ತಮ್ಮ ಪಿತೃಗಳ ಅಕ್ರಮ ಗಳಿಗೆ ತಿರುಗಿಕೊಂಡಿದ್ದಾರೆ; ಬೇರೆ ದೇವರುಗಳನ್ನು ಸೇವಿಸುವದಕ್ಕೆ ಅವುಗಳ ಹಿಂದೆ ಹೋಗಿದ್ದಾರೆ; ನಾನು ಅವರ ತಂದೆಗಳ ಸಂಗಡ ಮಾಡಿದ ಒಡಂಬಡಿಕೆಯನ್ನು ಇಸ್ರಾಯೇಲಿನ ಮನೆತನದವರೂ ಯೆಹೂದದ ಮನೆ ತನದವರೂ ವಿಾರಿದ್ದಾರೆ.

ಮತ್ತಾಯ 27:50

ಯೇಸು ತಿರಿಗಿ ಮಹಾಶಬ್ದದಿಂದ ಕೂಗಿ ಆತ್ಮವನ್ನು ಒಪ್ಪಿಸಿಕೊಟ್ಟನು.

ಮತ್ತಾಯ 28:2

ಮತ್ತು ಇಗೋ, ಅಲ್ಲಿ ಮಹಾಭೂಕಂಪ ಉಂಟಾಯಿತು; ಯಾಕಂದರೆ ಕರ್ತನ ದೂತನು ಪರಲೋಕದಿಂದ ಇಳಿದು ಬಂದು ಬಾಗಲಿನಿಂದ ಕಲ್ಲನ್ನು ಉರುಳಿಸಿ ಅದರ ಮೇಲೆ ಕೂತುಕೊಂಡನು.

ಪ್ರಕಟನೆ 11:19

ಆಗ ಪರಲೋಕದಲ್ಲಿ ದೇವಾಲಯವು ತೆರೆಯ ಲ್ಪಟ್ಟಿತು; ಆತನ ಆಲಯದಲ್ಲಿ ಆತನ ಒಡಂಬಡಿಕೆಯ ಮಂಜೂಷವು ಕಾಣಿಸಿತು; ಇದಲ್ಲದೆ ಮಿಂಚುಗಳೂ ವಾಣಿಗಳೂ ಗುಡುಗುಗಳೂ ಭೂಕಂಪವೂ ದೊಡ್ಡ ಆನೆಕಲ್ಲಿನ ಮಳೆಯೂ ಉಂಟಾದವು.

ಪ್ರಕಟನೆ 19:11

ಪರಲೋಕವು ತೆರೆದಿರುವದನ್ನು ನಾನು ಕಂಡೆನು. ಆಗ ಬಿಳೀ ಕುದುರೆಯು ಕಾಣಿಸಿತು; ಅದರ ಮೇಲೆ ಕೂತಿದ್ದಾತನು ನಂಬಿಗಸ್ತನೂ ಸತ್ಯವಂತನೂ ಎಂದು ಕರೆಯಲ್ಪಟ್ಟನು. ಆತನು ನೀತಿಯಿಂದ ನ್ಯಾಯವಿಚಾರಣೆ ಮಾಡಿ ಯುದ್ಧ ಮಾಡುತ್ತಾನೆ;

Interlinear

Choose Theme