ರ್ತನು ತನ್ನ ರಕ್ಷಣೆಯನ್ನು ತಿಳಿಯ ಮಾಡಿದ್ದಾನೆ; ತನ್ನ ನೀತಿಯನ್ನು ಜನಾಂಗಗಳ ದೃಷ್ಟಿಗೆ ಬಹಿರಂಗವಾಗಿ ಪ್ರಕಟಮಾಡಿದ್ದಾನೆ.
Cross references
ಅವರು ಬಂದು ಆತನೇ ಇದನ್ನು ಮಾಡಿದ್ದಾನೆಂದೂ ಆತನ ನೀತಿಯನ್ನೂ ಹುಟ್ಟಲಿರುವ ಜನರಿಗೆ ತಿಳಿಸುವರು.
ಅವನೇ ಕರ್ತನ ಕಡೆಯಿಂದ ಆಶೀರ್ವಾದವನ್ನೂ ತನ್ನ ರಕ್ಷಕನಾದ ದೇವರಿಂದ ನೀತಿ ಯನ್ನೂ ಹೊಂದುವನು.
ನೀವು ಹೇಳಿರಿ ಮತ್ತು ಅವರನ್ನು ಸವಿಾಪಕ್ಕೆ ತನ್ನಿರಿ; ಹೌದು, ಒಟ್ಟಿಗೆ ಅವರು ಆಲೋಚಿಸಲಿ; ಈ ಸಂಗತಿಗಳನ್ನು ಪುರಾತನ ಕಾಲದಿಂದಲೂ ಪ್ರಕಟಿಸಿದವರು ಯಾರು? ಆ ಕಾಲ ದಿಂದ ತಿಳಿಸಿದವನು ಯಾರು? ಕರ್ತನಾದ ನಾನೇ ಅಲ್ಲವೇ? ನನ್ನ ಹೊರತು ಬೇರೆ ದೇವರು ಇಲ್ಲವೇ ಇಲ್ಲ, ನನ್ನ ಹೊರತಾಗಿ ನೀತಿಯುಳ್ಳ ದೇವರೂ ರಕ್ಷಕನೂ ಇಲ್ಲವೇ ಇಲ್ಲ.
ನನ್ನಷ್ಟಕ್ಕೆ ನಾನೇ ಆಣೆಯನ್ನು ಇಟ್ಟಿದ್ದೇನೆ, ನೀತಿಯುಳ್ಳ ವಾಕ್ಯವು ನನ್ನ ಬಾಯಿಂದ ಹೊರಟಿದೆ, ಅದು ಹಿಂದಿರುಗದು: ಎಲ್ಲರೂ ನನಗೆ ಅಡ್ಡಬೀಳುವರು, ಪ್ರತಿ ನಾಲಿಗೆಯು ಪ್ರತಿಜ್ಞೆ ಮಾಡು ವದು.
ನನ್ನ ನೀತಿಯನ್ನು ಹತ್ತಿರಕ್ಕೆ ಬರಮಾಡುವೆನು, ಅದು ಇನ್ನು ದೂರವಾಗಿರದು. ನನ್ನ ರಕ್ಷಣೆಯು ಇನ್ನು ತಡವಾ ಗದು; ನನ್ನ ಮಹಿಮೆಯಾಗಿರುವ ಇಸ್ರಾಯೇಲಿ ಗೋಸ್ಕರ ಚೀಯೋನಿನಲ್ಲಿ ರಕ್ಷಣೆಯನ್ನು ಉಂಟು ಮಾಡುವೆನು.
ಆತನೇ ಈಗ ಹೀಗನ್ನುತ್ತಾನೆ--ನೀನು ನನ್ನ ಸೇವಕನಾಗಿ ಮಾಡಬೇಕಾದವುಗಳಲ್ಲಿ ಯಾಕೋಬನ ಕುಲಗಳನ್ನು ಉನ್ನತಪಡಿ ಸುವದೂ ಇಸ್ರಾಯೇಲಿನಲ್ಲಿ ರಕ್ಷಿತರಾದವರನ್ನು ತಿರಿಗಿ ಬರಮಾಡುವದೂ ಅಲ್ಪ ಕಾರ್ಯವೇ; ನನ್ನ ರಕ್ಷಣೆಯು ಲೋಕದ ಕಟ್ಟಕಡೆಯ ವರೆಗೆ ವ್ಯಾಪಿಸುವಂತೆ ನಿನ್ನನ್ನು ಅನ್ಯಜನಾಂಗಗಳಿಗೆ ಬೆಳಕನ್ನಾಗಿ ದಯಪಾಲಿಸುವೆನು.
ಒಳ್ಳೆಯ ಶುಭಸಮಾಚಾರವನ್ನು ತರುವವನ, ರಕ್ಷಣೆಯನ್ನು ಪ್ರಕಟಿಸುವವನ, ಚೀಯೋನಿಗೆ ನಿನ್ನ ದೇವರು ದೊರೆತನ ಮಾಡುತ್ತಾನೆ ಎಂದು ಹೇಳಿ, ಶುಭಸಮಾಚಾರವನ್ನು ತಂದು, ಸಮಾಧಾನವನ್ನು ಪ್ರಕಟಿಸಿ ಹೇಳುವಾತನ ಪಾದಗಳು ಪರ್ವತಗಳ ಮೇಲೆ ಎಷ್ಟೋ ಅಂದವಾಗಿವೆ!
ಕರ್ತನು ತನ್ನ ಪರಿ ಶುದ್ಧವಾದ ಬಾಹುವನ್ನು ಸಕಲ ಜನಾಂಗಗಳ ಕಣ್ಣು ಗಳಿಗೆ ತೋರಮಾಡಿದ್ದಾನೆ. ಭೂಮಿಯ ಅಂತ್ಯದವ ರೆಲ್ಲಾ ನಮ್ಮ ದೇವರ ರಕ್ಷಣೆಯನ್ನು ನೋಡುವರು.
ಆಗ ಅನ್ಯ ಜನಾಂಗಗಳು ನಿನ್ನ ನೀತಿಯನ್ನು ಅರಸರೆಲ್ಲರು ನಿನ್ನ ಮಹಿಮೆಯನ್ನು ನೋಡುವರು; ಕರ್ತನ ಬಾಯಿ ಉಚ್ಚರಿಸುವ ಹೊಸ ಹೆಸರಿನಿಂದ ನೀನು ಕರೆಯ ಲ್ಪಡುವಿ.
ನಾನು ನನ್ನ ಕಣ್ಣುಗಳನ್ನು ಅವರ ಮೇಲೆ ಒಳ್ಳೇದಕ್ಕಾಗಿ ಇಡುವೆನು. ಈ ದೇಶಕ್ಕೆ ಅವರನ್ನು ತಿರಿಗಿ ಬರಮಾಡುವೆನು; ಕೆಡವಿ ಹಾಕದೆ ಅವರನ್ನು ಕಟ್ಟುವೆನು, ಕೀಳದೆ ಅವರನ್ನು ನೆಡುವೆನು.
ಆದದರಿಂದ ನೀವು ಹೋಗಿ ಎಲ್ಲಾ ಜನಾಂಗಗಳಿಗೆ ಬೋಧಿಸಿ ತಂದೆಯ, ಮಗನ, ಪರಿಶುದ್ಧಾತ್ಮನ ಹೆಸರಿನಲ್ಲಿ ಬಾಪ್ತಿಸ್ಮ ಮಾಡಿರಿ;ಇದಲ್ಲದೆ ನಾನು ನಿಮಗೆ ಆಜ್ಞಾಪಿಸಿದ್ದೆಲ್ಲವನ್ನು ಕೈಕೊಳ್ಳುವ ಹಾಗೆ ಅವರಿಗೆ ಬೋಧಿಸಿರಿ; ಮತ್ತು ಇಗೋ, ಲೋಕಾಂತ್ಯದ ವರೆಗೂ ಯಾವಾಗಲೂ ನಾನು ನಿಮ್ಮ ಸಂಗಡ ಇದ್ದೇನೆ ಅಂದನು. ಆಮೆನ್.
ಆತನು ಅವರಿಗೆ--ನೀವು ಸಮಸ್ತ ಲೋಕಕ್ಕೆ ಹೋಗಿ ಎಲ್ಲಾ ಸೃಷ್ಟಿಗೆ ಸುವಾರ್ತೆಯನ್ನು ಸಾರಿರಿ.
ಯಾಕಂದರೆ ನನ್ನ ಕಣ್ಣುಗಳು ನಿನ್ನ ರಕ್ಷಣೆಯನ್ನು ನೋಡಿದವು.
ಮಾನವರೆಲ್ಲರು ದೇವರ ರಕ್ಷಣೆಯನ್ನು ಕಾಣುವರು ಎಂದೂ ಬರೆದಿರುವಂತೆ ಹೀಗಾಯಿತು.
ಆತನು ಬಂದಾಗ ಪಾಪ ನೀತಿ ನ್ಯಾಯ ತೀರ್ವಿಕೆಯ ವಿಷಯಗಳಲ್ಲಿಯೂ
ನೀತಿವಂತನು ನಂಬಿಕೆಯಿಂದಲೇ ಜೀವಿಸುವನು ಎಂದು ಬರೆಯಲ್ಪಟ್ಟಂತೆ ದೇವರ ನೀತಿಯು ಅದರಲ್ಲಿ ವಿಶ್ವಾಸದಿಂದ ವಿಶ್ವಾಸಕ್ಕೆ ಪ್ರಕಟವಾಯಿತು.
ಈಗಲಾದರೋ ದೇವರ ನೀತಿಯು ನ್ಯಾಯ ಪ್ರಮಾಣವಿಲ್ಲದೆ ಪ್ರಕಟವಾಗಿದೆ. ಅದು ನ್ಯಾಯ ಪ್ರಮಾಣದಿಂದಲೂ ಪ್ರವಾದಿಗಳಿಂದಲೂ ಸಾಕ್ಷಿಗೊಂ ಡಿದೆ.
ಹಾಗಾದರೆ ನಾವು ಏನು ಹೇಳೋಣ? ನೀತಿ ಯನ್ನು ಹೊಂದುವದಕ್ಕೆ ಪ್ರಯತ್ನಮಾಡದ ಅನ್ಯ ಜನರಿಗೆ ನೀತಿಯು ಅಂದರೆ ನಂಬಿಕೆಯಿಂದುಂಟಾಗುವ ನೀತಿಯು ದೊರಕಿತು.
ಅವರು ದೇವ ರಿಂದ ದೊರಕುವ ನೀತಿಯನ್ನರಿಯದೆ ಸ್ವನೀತಿಯನ್ನೇ ಸ್ಥಾಪಿಸಬೇಕೆಂದು ಪ್ರಯತ್ನಿಸುತ್ತಾ ಇದ್ದದರಿಂದ ದೇವರ ನೀತಿಗೆ ಅಧೀನರಾಗಲಿಲ್ಲ.
ಆದರೆ--ಅವರು ಕೇಳಲಿಲ್ಲವೇನು ಎಂದು ನಾನು ಕೇಳುತ್ತೇನೆ. ಹೌದು ನಿಜವೇ, ಅವರ ಧ್ವನಿಯು ಭೂಮಿಯಲ್ಲೆಲ್ಲಾ ಪ್ರಸರಿಸಿತು, ಅವರ ನುಡಿಗಳು ಲೋಕದ ಕಟ್ಟಕಡೆಯ ವರೆಗೂ ವ್ಯಾಪಿಸಿದವು.
ನಾವು ಆತನಲ್ಲಿ ದೇವರ ನೀತಿಯಾಗುವಂತೆ ದೇವರು ಪಾಪವನ್ನರಿಯ ಆತನನ್ನು ನಮಗೋಸ್ಕರ ಪಾಪವಾಗ ಮಾಡಿದನು.
ನಾನು ಕ್ರಿಸ್ತನಲ್ಲಿರುವ ವನಾಗಿ ಕಾಣಿಸಿಕೊಳ್ಳಬೇಕೆಂದು ನ್ಯಾಯಪ್ರಮಾಣ ದಿಂದಾಗುವ ಸ್ವನೀತಿಯನ್ನಾಶ್ರಯಿಸದೆ ಆತನನ್ನು ನಂಬು ವದರಿಂದ ದೊರಕುವಂಥ ಅಂದರೆ ನಂಬಿಕೆಯ ಆಧಾರ ದಿಂದ ದೇವರು ಕೊಡುವಂಥ ನೀತಿಯನ್ನೇ ಹೊಂದಿ ದ್ದೇನೆ.
ನಾವು ಭಾಗ್ಯಕರವಾದ ನಿರೀಕ್ಷೆಯನ್ನೂ ಮಹತ್ತಾದ ದೇವರ ಮತ್ತು ನಮ್ಮ ರಕ್ಷಕನಾದ ಯೇಸು ಕ್ರಿಸ್ತನ ಪ್ರಭಾವದ ಪ್ರತ್ಯಕ್ಷತೆಯನ್ನೂ ಎದುರು ನೋಡುವವರಾಗಿದ್ದೇವೆ.
ಯೇಸು ಕ್ರಿಸ್ತನ ದಾಸನೂ ಅಪೊಸ್ತಲನೂ ಆಗಿರುವ ಸೀಮೋನ ಪೇತ್ರನು ದೇವರ ಮತ್ತು ನಮ್ಮ ರಕ್ಷಕನಾದ ಯೇಸು ಕ್ರಿಸ್ತನ ನೀತಿಯಿಂದ ನಮ್ಮೊಂದಿಗೆ ಅಮೂಲ್ಯವಾದ ನಂಬಿಕೆಯನ್ನು ಹೊಂದಿದವರಿಗೆ--