ಕರ್ತನಿಗೆ ಕಿನ್ನರಿಯಿಂದ, ಹೌದು, ಕಿನ್ನರಿ ಯಿಂದಲೂ ಕೀರ್ತನೆಯ ಸ್ವರದಿಂದಲೂ ಹಾಡಿರಿ.
Cross references
ಇದಲ್ಲದೆ ದಾವೀದನು ವಿಶೇಷವಾದ ವೀಣೆ ಗಳನ್ನೂ ಕಿನ್ನರಿಗಳನ್ನೂ ತಾಳಗಳನ್ನೂ ಬಾರಿಸಿ ಸಂತೋಷದಿಂದ ಸ್ವರವನ್ನು ಎತ್ತುವ ಹಾಗೆ ತಮ್ಮ ಸಹೋದರರಲ್ಲಿ ಹಾಡುಗಾರರನ್ನು ನೇಮಿಸುವ ದಕ್ಕೆ ಲೇವಿಯರ ಪ್ರಧಾನರಿಗೆ ಆಜ್ಞಾಪಿಸಿದನು.
ಸಮಸ್ತ ಇಸ್ರಾಯೇಲ್ಯರು ಆರ್ಭಟದಿಂದಲೂ ಕೊಂಬಿನ ಶಬ್ದದಿಂದಲೂ ತುತೂರಿಗಳಿಂದಲೂ ತಾಳ ಗಳಿಂದಲೂ ವೀಣೆಗಳನ್ನೂ ಕಿನ್ನರಿಗಳನ್ನೂ ಬಾರಿಸು ವದರಿಂದಲೂ ಕರ್ತನ ಒಡಂಬಡಿಕೆಯ ಮಂಜೂಷ ವನ್ನು ತಂದರು.ಕರ್ತನ ಒಡಂಬಡಿಕೆಯ ಮಂಜೂ ಷವು ದಾವೀದನ ಪಟ್ಟಣದಲ್ಲಿ ಸೇರಿದಾಗ ಏನಾಯಿ ತಂದರೆ, ಸೌಲನ ಮಗಳಾದ ವಿಾಕಳು ಕುಣಿಯುತ್ತಾ ಆಡುತ್ತಾ ಇರುವ ಅರಸನಾದ ದಾವೀದನನ್ನು ಕಿಟಿಕಿ ಯಿಂದ ನೋಡಿ ತನ್ನ ಹೃದಯದಲ್ಲಿ ಅವನನ್ನು ಹೀನೈಸಿದಳು.
ಇದಲ್ಲದೆ ದಾವೀದನೂ ಸೈನ್ಯಾಧಿಪತಿಗಳೂ ಆಸಾಫ್ ಹೇಮಾನ್ ಯೆದುತೂನ್ ಇವರ ಕುಮಾರರಲ್ಲಿ ಕಿನ್ನರಿ ವೀಣೆ ತಾಳಗಳಿಂದ ಪ್ರವಾದಿಸಲು ತಕ್ಕವರನ್ನು ಸೇವೆಗೆ ಪ್ರತ್ಯೇಕಿಸಿದರು. ಮತ್ತು ಕೆಲಸದವರ ಲೆಕ್ಕವು ಅವರ ಸೇವೆಯ ಪ್ರಕಾರ ವಾಗಿತ್ತು.
ಇದಲ್ಲದೆ ದಾವೀದನೂ ಅರಸನ ದರ್ಶಿಯಾದ ಗಾದನೂ ಪ್ರವಾ ದಿಯಾದ ನಾತಾನನೂ ಇವರ ಆಜ್ಞೆಯ ಪ್ರಕಾರ ತಾಳ ವೀಣೆ ಕಿನ್ನರಿಗಳನ್ನು ಹಿಡಿದವರಾಗಿ ಕರ್ತನ ಆಲಯದಲ್ಲಿ ಲೇವಿಯರನ್ನು ನಿಲ್ಲಿಸಿದನು. ಕರ್ತನ ಆಜ್ಞೆಯು ಅವನ ಪ್ರವಾದಿಗಳ ಮುಖಾಂತರ ಹಾಗೆ ಇತ್ತು.
ಕರ್ತನನ್ನು ಕಿನ್ನರಿ ಯಿಂದ ಕೊಂಡಾಡಿರಿ; ಹತ್ತು ತಂತಿಗಳ ವೀಣೆಯಿಂದ ಆತನನ್ನು ಕೀರ್ತಿಸಿರಿ.
ಓ ನನ್ನ ದೇವರೇ, ನಾನು ಸಹ ನಿನ್ನನ್ನೂ ನಿನ್ನ ಸತ್ಯವನ್ನೂ ವೀಣೆಯಿಂದ ಕೊಂಡಾಡುವೆನು; ಓ ಇಸ್ರಾಯೇಲಿನ ಪರಿಶುದ್ದನೇ, ಕಿನ್ನರಿಯಿಂದ ನಿನ್ನನ್ನು ಕೀರ್ತಿಸುವೆನು.
ಹತ್ತು ತಂತಿ ವೀಣೆ ಯಿಂದಲೂ ವಾದ್ಯದಿಂದಲೂ ಕಿನ್ನರಿಯ ಘನ ಸ್ವರ ದಿಂದಲೂ ತಿಳಿಸುವದು ಒಳ್ಳೇದು.
ಕರ್ತನಿಗೆ ಸ್ತೋತ್ರದಿಂದ ಹಾಡಿರಿ; ನಮ್ಮ ದೇವ ರನ್ನು ಕಿನ್ನರಿಯಿಂದ ಕೀರ್ತಿಸಿರಿ.
ಕರ್ತನು ಚೀಯೋನನ್ನು ಆದರಿಸುವನು; ಆತನು ಅದರ ಹಾಳಾದ ಸ್ಥಳಗ ಳನ್ನು ಸುಧಾರಿಸುವನು; ಅದರ ಅರಣ್ಯವನ್ನು ಏದೆನ್ ಹಾಗೆಯೂ ಮರುಭೂಮಿಯನ್ನು ಕರ್ತನ ತೋಟದ ಹಾಗೆಯೂ ಮಾಡುವನು. ಅಲ್ಲಿ ಆನಂದವೂ ಉಲ್ಲಾ ಸವೂ ಉಪಕಾರ ಸ್ತುತಿಯೂ ಇಂಪಾದ ಸ್ವರವೂ ಕಂಡುಬರುವವು.
ಆತನು ಆ ಪುಸ್ತಕವನ್ನು ತೆಗೆದುಕೊಂಡಾಗ ಆ ನಾಲ್ಕು ಜೀವಿಗಳೂ ಇಪ್ಪತ್ತನಾಲ್ಕು ಮಂದಿ ಹಿರಿಯರೂ ಕುರಿಮರಿಯಾದಾತನ ಮುಂದೆ ಅಡ್ಡಬಿದ್ದರು; ಅವರೆಲ್ಲರ ಕೈಗಳಲ್ಲಿ ವೀಣೆಗಳೂ ಪರಿ ಶುದ್ಧರ ಪರಿಮಳವಾದ ಪ್ರಾರ್ಥನೆಗಳಿಂದ ತುಂಬಿದ್ದ ಚಿನ್ನದ ಪಾತ್ರೆಗಳೂ ಇದ್ದವು.
ಇದಲ್ಲದೆ ಪರಲೋಕದ ಕಡೆಯಿಂದ ಬಹಳ ನೀರುಗಳಂತೆಯೂ ಮಹಾಗುಡುಗಿನಂತೆಯೂ ಇದ್ದ ಶಬ್ದವನ್ನು ನಾನು ಕೇಳಿದೆನು. ತಮ್ಮ ವೀಣೆಗಳನ್ನು ಬಾರಿಸುತ್ತಿದ್ದ ವೀಣೆಗಾರರ ಸ್ವರವನ್ನೂ ನಾನು ಕೇಳಿದೆನು.