Home Bibles ಕೀರ್ತನೆಗಳು 99:7 · ಕನ್ನಡ ಬೈಬಲ್
ಕೀರ್ತನೆಗಳು 99:7 · ಕನ್ನಡ ಬೈಬಲ್

ಆತನು ಮೇಘಸ್ತಂಭದಲ್ಲಿಂದ ಅವರ ಸಂಗಡ ಮಾತನಾಡಿದನು; ಆತನ ಸಾಕ್ಷಿಗಳನ್ನೂ ಆತನು ಅವರಿಗೆ ಕೊಟ್ಟ ನಿಯಮಗಳನ್ನೂ ಅವರು ಕೈಕೊಂಡರು.

Cross references

ನಿರ್ಗಮಕಾಂಡ 19:9

ಕರ್ತನು ಮೋಶೆಗೆ--ಇಗೋ, ನಾನು ನಿನ್ನ ಸಂಗಡ ಮಾತನಾಡುವದನ್ನು ಜನರು ಕೇಳುವ ಹಾಗೆಯೂ ಅವರು ಸದಾಕಾಲ ನಿನ್ನನ್ನು ನಂಬುವಂತೆಯೂ ಮಂದ ವಾದ ಮೇಘದಲ್ಲಿ ನಾನು ನಿನ್ನ ಬಳಿಗೆ ಬರುತ್ತೇನೆ ಅಂದನು. ಮೋಶೆಯು ಜನರ ಮಾತುಗಳನ್ನು ಕರ್ತನಿಗೆ ತಿಳಿಸಿದನು.

ನಿರ್ಗಮಕಾಂಡ 33:9

ತರುವಾಯ ಮೋಶೆಯು ಗುಡಾರದಲ್ಲಿ ಪ್ರವೇಶಿಸಿದಾಗ ಮೇಘಸ್ತಂಭವು ಇಳಿದು ಬಂದು ಗುಡಾರದ ಬಾಗಿಲಲ್ಲಿ ನಿಲ್ಲುತಿತ್ತು. ಕರ್ತನು ಮೋಶೆಯ ಸಂಗಡ ಮಾತನಾಡುವನು.

ನಿರ್ಗಮಕಾಂಡ 40:16

ಮೋಶೆಯು ಹಾಗೆಯೇ ಮಾಡಿದನು. ಕರ್ತನು ತನಗೆ ಆಜ್ಞಾಪಿಸಿದ ಪ್ರಕಾರವೇ ಅವನು ಎಲ್ಲವನ್ನು ಮಾಡಿದನು.

ಅಂಕೆಗಳ ಪುಸ್ತಕ 12:5

ಕರ್ತನು ಮೇಘಸ್ತಂಭದಲ್ಲಿ ಇಳಿದು ಗುಡಾರದ ಬಾಗಿಲ ಬಳಿಯಲ್ಲಿ ನಿಂತು ಆರೋನನನ್ನೂ ಮಿರ್ಯಾಮ ಳನ್ನೂ ಕರೆದಾಗ ಅವರಿಬ್ಬರೂ ಮುಂದೆ ಬಂದರು.

ಅಂಕೆಗಳ ಪುಸ್ತಕ 16:15

ಆಗ ಮೋಶೆಯು ಬಹಳ ವಾಗಿ ಕೋಪಿಸಿಕೊಂಡು ಕರ್ತನಿಗೆ--ಅವರ ಬಲಿಯನ್ನು ನೀನು ಗೌರವಿಸಬೇಡ; ನಾನು ಅವರಿಂದ ಒಂದು ಕತ್ತೆಯನ್ನಾದರೂ ತೆಗೆದುಕೊಳ್ಳಲಿಲ್ಲ; ಇಲ್ಲವೆ ಅವರಲ್ಲಿ ಒಬ್ಬನಿಗಾದರೂ ಕೇಡು ಮಾಡಲಿಲ್ಲ ಎಂದು ಹೇಳಿದನು.

ದ್ವಿತೀಯೋಪದೇಶಕಾಂಡ 4:5

ಇಗೋ, ನೀವು ಹೋಗಿ ಸ್ವತಂತ್ರಿಸಿಕೊಳ್ಳುವ ದೇಶದಲ್ಲಿ ನೀವು ಮಾಡಬೇಕೆಂದು ನನ್ನ ದೇವರಾದ ಕರ್ತನು ನನಗೆ ಆಜ್ಞಾಪಿಸಿದಂತೆ ನಿಯಮಗಳನ್ನೂ ನ್ಯಾಯಗಳನ್ನೂ ನಿಮಗೆ ಬೋಧಿಸಿದ್ದೇನೆ.

ದ್ವಿತೀಯೋಪದೇಶಕಾಂಡ 33:9

ಅವನು ತನ್ನ ತಂದೆ ತಾಯಿಗಳಿಗೆ--ನಾನು ಅವ ನನ್ನು ನೋಡಲಿಲ್ಲ ಅಂದನು. ತನ್ನ ಸಹೋದರರ ಗುರುತನ್ನು ತಿಳುಕೊಳ್ಳಲಿಲ್ಲ. ತನ್ನ ಸ್ವಂತ ಮಕ್ಕಳನ್ನು ಅರಿಯಲಿಲ್ಲ. ಯಾಕಂದರೆ ಅವರು (ಲೇವಿಯರು) ನಿನ್ನ ವಾಕ್ಯವನ್ನು ಕೈಕೊಂಡು ನಿನ್ನ ಒಡಂಬಡಿಕೆಯನ್ನು ಕಾಪಾಡಿದ್ದಾರೆ.

1 ಸಮುವೇಲ 12:3

ಇಗೋ, ನಾನು ಇಲ್ಲಿದ್ದೇನೆ; ಕರ್ತನ ಮುಂದೆಯೂ ಆತನ ಅಭಿಷಿಕ್ತನ ಮುಂದೆಯೂ ನನಗೆ ವಿರೋಧವಾಗಿ ಸಾಕ್ಷಿಕೊಡಿರಿ. ನಾನು ಯಾರ ಎತ್ತನ್ನಾದರೂ ಕತ್ತೆಯ ನ್ನಾದರೂ ತೆಗೆದುಕೊಂಡೆನೋ? ಯಾರಿಗಾದರೂ ವಂಚನೆ ಮಾಡಿದೆನೋ? ಯಾರನ್ನಾದರೂ ಹಿಂಸಿಸಿ ದೆನೋ? ಯಾರಿಂದಲಾದರೂ ಕಣ್ಣಿಗೆ ಮರೆಮಾಡುವ ಲಂಚವನ್ನು ತೆಗೆದುಕೊಂಡೆನೋ? ಹೀಗಿದ್ದರೆ ಹೇಳಿರಿ ತಿರಿಗಿಕೊಡುತ್ತೇನೆ ಅಂದನು.

ಕೀರ್ತನೆಗಳು 105:28

ಆತನು ಕತ್ತಲನ್ನು ಕಳುಹಿಸಿ ಅದನ್ನು ಕತ್ತಲಾಗ ಮಾಡಿದನು; ಆಗ ಆತನ ಮಾತಿಗೆ ಅವರು ಎದು ರಾಡಲಿಲ್ಲ.

ಸಾಮೇತಿಗಳು 28:9

ನ್ಯಾಯಪ್ರಮಾಣವನ್ನು ಕೇಳದೆ ತನ್ನ ಕಿವಿಯನ್ನು ತಿರುಗಿಸಿಕೊಳ್ಳುವವನ ಪ್ರಾರ್ಥನೆಯು ಅಸಹ್ಯ.

ಹೆಬ್ರಿಯರಿಗೆ 3:2

ಮೋಶೆಯು ದೇವರ ಮನೆಯಲ್ಲೆಲ್ಲಾ ನಂಬಿಗಸ್ತ ನಾಗಿದ್ದಂತೆಯೇ ಈತನೂ ತನ್ನನ್ನು ನೇಮಿಸಿದಾತನಿಗೆ ನಂಬಿಗಸ್ತನಾಗಿದ್ದಾನೆ.

1 ಯೋಹಾನ 3:21

ಪ್ರಿಯರೇ, ನಮ್ಮ ಹೃದಯವು ನಮ್ಮನ್ನು ಖಂಡಿಸದಿದ್ದರೆ ನಮಗೆ ದೇವರ ವಿಷಯದಲ್ಲಿ ಭರವಸ ವುಂಟು.

Interlinear

Choose Theme