Home Bibles ಪ್ರಕಟನೆ 1:15 · ಕನ್ನಡ ಬೈಬಲ್
ಪ್ರಕಟನೆ 1:15 · ಕನ್ನಡ ಬೈಬಲ್

ಆತನ ಪಾದಗಳು ಕುಲುಮೆ ಯಲ್ಲಿ ಕಾಯಿಸಿದ ಶುದ್ಧವಾದ ತಾಮ್ರದಂತೆಯೂ ಆತನ ಧ್ವನಿಯು ಜಲಪ್ರವಾಹದ ಘೋಷದಂತೆಯೂ ಇದ್ದವು.

Cross references

ಕೀರ್ತನೆಗಳು 93:4

ಬಹಳ ನೀರುಗಳ ಶಬ್ದಕ್ಕಿಂತಲೂ ಹೌದು, ಸಮುದ್ರದ ಬಲವಾದ ಅಲೆ ಗಳಿಗಿಂತಲೂ ಉನ್ನತದಲ್ಲಿ ಕರ್ತನು ಬಲಿಷ್ಠನಾಗಿ ದ್ದಾನೆ.ನಿನ್ನ ಸಾಕ್ಷಿಗಳು ಬಹಳ ನಿಶ್ಚಯವಾದವುಗಳು; ಓ ಕರ್ತನೇ, ಸದಾ ನಿನ್ನ ಮನೆಗೆ ಯೋಗ್ಯವಾದದ್ದು ಪರಿಶುದ್ಧತ್ವವೇ.

ಯೆಶಾಯ 17:13

ಮಹಾ ಜಲಪ್ರವಾಹ ಗಳು ಘೋಷಿಸುವಂತೆ ಜನಾಂಗಗಳು ಘೋಷಿಸು ತ್ತವೆ. ಆದರೆ ದೇವರು ಅವರನ್ನು ಗದರಿಸುತ್ತಲೇ ಅವರು ದೂರ ಓಡಿಹೋಗಿ ಬೆಟ್ಟಗಳಲ್ಲಿ ಗಾಳಿಗೆ ಸಿಕ್ಕಿದ ಹೊಟ್ಟಿನಂತೆಯೂ ಸುಂಟರಗಾಳಿಯಿಂದ ಸುತ್ತಿ ಯಾಡುವ ದೂಳಿನಂತೆಯೂ ಅಟ್ಟಲ್ಪಡುವರು.ಇಗೋ, ಸಾಯಂಕಾಲದಲ್ಲಿ ಭಯಭ್ರಾಂತಿ; ಉದ ಯಕ್ಕೆ ಮುಂಚೆ ಅವನು ಇಲ್ಲದಂತಾಗುವನು. ನಮ್ಮನ್ನು ಸೂರೆಮಾಡುವವರಿಗೆ ಇದೇ ಗತಿ. ನಮ್ಮನ್ನು ಕೊಳ್ಳೆ ಹೊಡೆಯುವವರ ಪಾಡು ಇದೇ.

ಯೆಹೆಜ್ಕೇಲ 1:7

ಅವುಗಳ ಕಾಲುಗಳು ನೆಟ್ಟಗಿದ್ದವು; ಅವುಗಳ ಅಂಗಾಲು ಕರುವಿನ ಪಾದದ ಹಾಗಿದ್ದು ಹಿತ್ತಾಳೆಗೆ ಮೆರುಗು ಕೊಟ್ಟ ಬಣ್ಣದ ಹಾಗೆ ಅವು ಥಳಥಳಿಸುತ್ತಿದ್ದವು.

ಯೆಹೆಜ್ಕೇಲ 40:3

ನನ್ನನ್ನು ಅಲ್ಲಿಗೆ ತಂದಾಗ ಇಗೋ, ಅಲ್ಲಿ ಹಿತ್ತಾಳೆಯಂತೆ ತೋರುವ ಒಬ್ಬ ಮನುಷ್ಯನು ಇದ್ದನು. ಅವನ ಕೈಯಲ್ಲಿ ನಾರಿನ ನೂಲು ಅಳತೆಯ ಕೋಲು ಇತ್ತು. ಅವನು ಬಾಗಿಲಲ್ಲೇ ನಿಂತಿ ದ್ದನು.

ಯೆಹೆಜ್ಕೇಲ 43:2

ಇಗೋ, ಇಸ್ರಾಯೇಲಿನ ದೇವರ ಮಹಿಮೆಯು ಪೂರ್ವ ಮಾರ್ಗವಾಗಿ ಬಂದಿತು, ಆತನ ಧ್ವನಿಯು ಬಹು ನೀರುಗಳ ಶಬ್ಧದಂತೆ ಇತ್ತು; ಭೂಮಿಯು ಆತನ ಮಹಿಮೆಯಿಂದ ಪ್ರಕಾ ಶಿಸುತ್ತಿತ್ತು.

ದಾನಿಯೇಲ 10:6

ಆತನ ದೇಹವು ತಾರ್ಷೀಷ್‌ ಕಲ್ಲಿನ ಹಾಗೆಯೂ ಆತನ ಮುಖವು ಮಿಂಚಿನಂತೆಯೂ ಹೊಳೆಯುತ್ತಿತ್ತು. ಪೀತರತ್ನದ ಹಾಗೆ ಅವನ ಕಣ್ಣುಗಳು ಉರಿಯುವ ಬೆಂಕಿಯ ದೀಪದಂತೆ ಇದ್ದವು. ಅವನ ತೋಳುಗಳೂ ಕಾಲುಗಳೂ ಬೆಳಗಿನ ಕಂಚಿನ ಕಾಂತಿಯಾಗಿಯೂ ಆತನ ಮಾತುಗಳ ಶಬ್ದವು ಜನಸಮೂಹದ ಹಾಗೆಯೂ ಇದ್ದವು.

ಪ್ರಕಟನೆ 2:18

ಥುವತೈರದಲ್ಲಿರುವ ಸಭೆಯ ದೂತನಿಗೆ ಬರೆ: ಬೆಂಕಿಯ ಉರಿಯಂತಿರುವ ಕಣ್ಣುಗಳೂ ಶುದ್ಧವಾದ ತಾಮ್ರದಂತಿರುವ ಪಾದಗಳುಳ್ಳ ದೇವಕುಮಾರನು ಹೇಳುವವುಗಳು ಯಾವವೆಂದರೆ,

ಪ್ರಕಟನೆ 14:2

ಇದಲ್ಲದೆ ಪರಲೋಕದ ಕಡೆಯಿಂದ ಬಹಳ ನೀರುಗಳಂತೆಯೂ ಮಹಾಗುಡುಗಿನಂತೆಯೂ ಇದ್ದ ಶಬ್ದವನ್ನು ನಾನು ಕೇಳಿದೆನು. ತಮ್ಮ ವೀಣೆಗಳನ್ನು ಬಾರಿಸುತ್ತಿದ್ದ ವೀಣೆಗಾರರ ಸ್ವರವನ್ನೂ ನಾನು ಕೇಳಿದೆನು.

ಪ್ರಕಟನೆ 19:6

ತರುವಾಯ ಜನರ ದೊಡ್ಡ ಗುಂಪಿನ ಶಬ್ದದಂತೆಯೂ ಬಹಳ ನೀರುಗಳ ಘೋಷದಂತೆಯೂ ಗಟ್ಟಿಯಾದ ಗುಡುಗುಗಳ ಶಬ್ದದಂತೆಯೂ ಇದ್ದ ಒಂದು ಶಬ್ದವನ್ನು ನಾನು ಕೇಳಿದೆನು; ಅದು--ಹಲ್ಲೆಲೂಯಾ, ಸರ್ವಶಕ್ತನಾಗಿರುವ ದೇವರಾದ ಕರ್ತನು ಆಳುತ್ತಾನೆ.

Interlinear

Choose Theme