ಪ್ರಕಟನೆ 14:19 · ಕನ್ನಡ ಬೈಬಲ್
ಆಗ ಆ ದೂತನು ತನ್ನ ಕುಡುಗೋಲನ್ನು ಭೂಮಿಗೆ ಹಾಕಿ ಭೂಮಿಯ ದ್ರಾಕ್ಷೇಹಣ್ಣನ್ನು ಕೂಡಿಸಿ ದೇವರ ರೌದ್ರದ ದೊಡ್ಡ ದ್ರಾಕ್ಷೇತೊಟ್ಟಿಯಲ್ಲಿ ಹಾಕಿದನು.ಆ ದ್ರಾಕ್ಷೇ ತೊಟ್ಟಿಯನ್ನು ಪಟ್ಟಣದ ಹೊರಗೆ ತುಳಿದರು. ಆ ತೊಟ್ಟಿಯೊಳಗಿಂದ ರಕ್ತವು ಹೊರಟು ಕುದುರೆಗಳ ಕಡಿವಾಣಗಳನ್ನು ಮುಟ್ಟುವಷ್ಟು ಇನ್ನೂರು ಮೈಲಿ ದೂರ ಹರಿಯಿತು.
Cross references
ದ್ವಿತೀಯೋಪದೇಶಕಾಂಡ 32:32
ಅವರ ದ್ರಾಕ್ಷೇಗಿಡ ಸೊದೋಮಿನ ದ್ರಾಕ್ಷೇಗಿಡ ದಿಂದಲೂ ಗೊಮೋರದ ಹೊಲಗಳೊಳಗಿಂದಲೂ ಅವೆ; ಅವರ ಹಣ್ಣುಗಳು ವಿಷದ ಹಣ್ಣುಗಳು; ಅವರ ಗೊಂಚಲುಗಳು ಕಹಿಯಾಗಿವೆ.
ಪ್ರಕಟನೆ 19:15
ಜನಾಂಗಗಳನ್ನು ಹೊಡೆಯುವದಕ್ಕಾಗಿ ಹದವಾದ ಕತ್ತಿಯು ಆತನ ಬಾಯಿಂದ ಹೊರಡುತ್ತದೆ. ಆತನು ಅವರನ್ನು ಕಬ್ಬಿಣದ ಕೋಲಿನಿಂದ ಆಳುವನು. ಆತನು ಸರ್ವಶಕ್ತನಾದ ದೇವರ ಉಗ್ರಕೋಪವೆಂಬ ದ್ರಾಕ್ಷೆಯ ತೊಟ್ಟಿಯಲ್ಲಿರುವದನ್ನು ತುಳಿಯುತ್ತಾನೆ.