Home Bibles ಪ್ರಕಟನೆ 18:10 · ಕನ್ನಡ ಬೈಬಲ್
ಪ್ರಕಟನೆ 18:10 · ಕನ್ನಡ ಬೈಬಲ್

ಅವರು ದೂರದಲ್ಲಿ ನಿಂತು ಅವಳಿಗುಂಟಾದ ಯಾತ ನೆಯ ಭಯದಿಂದ--ಅಯ್ಯೋ, ಅಯ್ಯೋ, ಆ ಮಹಾಪಟ್ಟಣವಾದ ಬಾಬೆಲೇ, ಬಲಿಷ್ಠವಾದ ನಗ ರಿಯೇ, ಒಂದೇ ಗಳಿಗೆಯಲ್ಲಿ ನಿನಗೆ ತೀರ್ಪಾಯಿತಲ್ಲಾ ಎಂದು ಹೇಳುವರು.

Cross references

ಅಂಕೆಗಳ ಪುಸ್ತಕ 16:34

ಆಗ ಅವರ ಸುತ್ತಲಿದ್ದ ಇಸ್ರಾಯೇಲ್ಯರೆಲ್ಲರು ಅವರ ಕೂಗಿಗೆ ಓಡಿಹೋದರು; ಅವರು--ಭೂಮಿಯು ನಮ್ಮನ್ನು ಸಹ ನುಂಗಿತೆಂದು ಹೇಳಿದರು.

ಯೆಶಾಯ 21:9

ಇಗೋ, ಸವಾರರು ಜೋಡಿ ಜೋಡಿಯಾಗಿ ಬರುತ್ತಾರೆ ಮತ್ತು ಪ್ರತ್ಯುತ್ತರ ವಾಗಿ--ಬಾಬೆಲ್‌ ಬಿತ್ತು, ಆದರೆ ಕೆತ್ತಿದ ದೇವತೆಗಳ ವಿಗ್ರಹಗಳನ್ನು ಮುರಿದು ನೆಲಸಮ ಮಾಡಿಬಿಟ್ಟರು ಎಂದು ಹೇಳಿದನು.

ಯೆರೆಮಿಯ 30:7

ಕರ್ತನು ಹೀಗೆ ಹೇಳುತ್ತಾನೆ --ಯಾಕೋಬನ ವಿಷಯ ಸಂತೋಷದಿಂದ ಹಾಡಿ ಮುಖ್ಯವಾದ ಜನಾಂಗಗಳೊಳಗೆ ಆರ್ಭಟಿಸಿರಿ, ಸಾರಿರಿ, ಸ್ತುತಿಸಿರಿ; ಕರ್ತನೇ, ನಿನ್ನ ಜನರನ್ನೂ ಇಸ್ರಾಯೇಲಿನ ಉಳಿದವರನ್ನೂ ರಕ್ಷಿಸು ಎಂದು ಹೇಳಿರಿ.

ಯೆರೆಮಿಯ 51:8

ಆಗ ಕಸ್ದೀಯರ ದಂಡು ಅರಸನನ್ನು ಹಿಂದಟ್ಟಿ ಚಿದ್ಕೀಯನನ್ನು ಯೆರಿಕೋವಿನ ಬೈಲಿನಲ್ಲಿ ಹಿಡಿದರು. ಅವನ ದಂಡೆಲ್ಲಾ ಅವನನ್ನು ಬಿಟ್ಟು ಚದರಿಹೋಯಿತು.

ಯೋವೇಲ 1:15

ಆ ದಿನಕ್ಕಾಗಿ ಅಯ್ಯೋ, ಯಾಕಂದರೆ ಕರ್ತನ ದಿನವು ಸವಿಾಪವಾಗಿದೆ; ಸರ್ವಶಕ್ತನ ಕಡೆಯಿಂದ ನಾಶದಂತೆ ಬರುತ್ತದೆ.

ಆಮೋಸ 5:16

ಆದದ ರಿಂದ ಕರ್ತನು, ಸೈನ್ಯಗಳ ದೇವರಾದ ಕರ್ತನು, ಹೀಗೆ ಹೇಳುತ್ತಾನೆ ಎಲ್ಲಾ ಬೀದಿಗಳಲ್ಲೂ ಗೋಳಾಟ ಗಳು, ಹೆದ್ದಾರಿಗಳಲ್ಲೂ ಅಯ್ಯೋ, ಅಯ್ಯೋ ಅನ್ನು ವರು. ಒಕ್ಕಲಿಗರನ್ನು ದುಃಖಿಸುವದಕ್ಕೂ ಪ್ರಲಾಪಿ ಸುವದಕ್ಕೆ ತಿಳಿದವರನ್ನು ಗೋಳಾಟಕ್ಕೂ ಕರೆಯುವರು.

ಪ್ರಕಟನೆ 14:8

ಅವನ ಹಿಂದೆ ಇನ್ನೊಬ್ಬ ದೂತನು ಬಂದು--ಬಾಬೆಲೆಂಬ ಆ ಮಹಾನಗರಿಯು ಬಿದ್ದಳು, ಬಿದ್ದಳು; ಯಾಕಂದರೆ ಅವಳು ತನ್ನ ಜಾರತ್ವವೆಂಬ ಕೋಪದ ದ್ರಾಕ್ಷಾರಸವನ್ನು ಸಕಲ ಜನಾಂಗಗಳು ಕುಡಿಯುವಂತೆ ಮಾಡಿದಳು ಎಂದು ಹೇಳಿದನು.

ಪ್ರಕಟನೆ 17:12

ನೀನು ಕಂಡ ಆ ಹತ್ತು ಕೊಂಬುಗಳು ರಾಜ್ಯವನ್ನು ಇನ್ನೂ ಹೊಂದದಿರುವ ಹತ್ತು ಮಂದಿ ರಾಜರು. ಅವರು ಮೃಗದೊಂದಿಗೆ ರಾಜರಂತೆ ಒಂದು ತಾಸಿನವರೆಗೆ ಅಧಿಕಾರವನ್ನು ಹೊಂದುತ್ತಾರೆ.

ಪ್ರಕಟನೆ 18:8

ಆದದರಿಂದ ಅವಳಿಗೆ ಮರಣ ದುಃಖ ಕ್ಷಾಮ ಎಂಬೀ ಉಪದ್ರವಗಳು ಒಂದೇ ದಿನದಲ್ಲಿ ಸಂಭವಿ ಸುವವು; ಅವಳು ಬೆಂಕಿಯಿಂದ ಸಂಪೂರ್ಣವಾಗಿ ಸುಟ್ಟುಹೋಗುವಳು. ಅವಳಿಗೆ ದಂಡನೆಯನ್ನು ವಿಧಿಸಿದ ದೇವರಾಗಿರುವ ಕರ್ತನು ಬಲಿಷ್ಠನಾಗಿದ್ದಾನೆ.

ಪ್ರಕಟನೆ 18:15

ಅವಳಿಂದ ಐಶ್ವರ್ಯವಂತ ರಾದ ಈ ಸರಕುಗಳ ವರ್ತಕರು ಅವಳ ಯಾತನೆಗೆ ಭಯಪಟ್ಟು ದೂರದಲ್ಲಿ ನಿಂತು ಅಳುತ್ತಾ ಗೋಳಾ ಡುತ್ತಾ--

ಪ್ರಕಟನೆ 18:19

ಆಗ ಅವರು ತಮ್ಮ ತಲೆಗಳ ಮೇಲೆ ಧೂಳನು ಹೊಯಿದುಕೊಂಡು ಕೂಗುತ್ತಾ ಅಳುತ್ತಾ, ಗೋಳಾ ಡುತ್ತಾ--ಅಯ್ಯೋ, ಅಯ್ಯೋ ಸಮುದ್ರದ ಮೇಲೆ ಹಡಗುಗಳಿದ್ದವರೆಲ್ಲರನ್ನು ತನ್ನ ಅಮೂಲ್ಯ ದ್ರವ್ಯ ಗಳಿಂದ ಐಶ್ವರ್ಯವಂತರನ್ನಾಗಿ ಮಾಡಿದ ಆ ಮಹಾ ನಗರಿಯು ಒಂದೇ ಗಳಿಗೆಯಲ್ಲಿ ಹಾಳಾದಳಲ್ಲಾ ಎಂದು

Interlinear

Choose Theme