ಇವುಗಳಾದ ಮೇಲೆ ಪರಲೋಕದಲ್ಲಿ ಬಹಳ ಜನರ ಮಹಾ ಶಬ್ದವನ್ನು ನಾನು ಕೇಳಿದೆನು; ಅವರು--ಹಲ್ಲೆಲೂಯಾ; ನಮ್ಮ ದೇವ ರಾದ ಕರ್ತನಿಗೆ ರಕ್ಷಣೆಯೂ ಮಹಿಮೆಯೂ ಘನವೂ ಅಧಿಕಾರವೂ ಉಂಟಾದವು.
Cross references
ಕರ್ತನೇ, ದೊಡ್ಡಸ್ತಿಕೆಯೂ ಪರಾಕ್ರಮವೂ ಸೌಂದರ್ಯವೂ ಜಯವೂ ಮಹಿಮೆಯೂ ನಿನ್ನದೇ; ಆಕಾಶಗಳಲ್ಲಿಯೂ ಭೂಮಿಯಲ್ಲಿಯೂ ಇರುವದೆಲ್ಲಾ ನಿನ್ನದೇ. ಕರ್ತನೇ, ರಾಜ್ಯವು ನಿನ್ನದು; ನೀನು ಸಮಸ್ತಕ್ಕೂ ತಲೆಯಾಗಿ ಉನ್ನತವಾಗಿದ್ದೀ. ಐಶ್ವರ್ಯವೂ ಘನವೂ ನಿನ್ನ ಬಳಿ ಯಿಂದ ಬರುತ್ತದೆ.
ರಕ್ಷಣೆಯು ಕರ್ತನದೇ; ನಿನ್ನ ಜನರ ಮೇಲೆ ನಿನ್ನ ಆಶೀರ್ವಾದ ಉಂಟು. ಸೆಲಾ.
ನೀವು ಕರ್ತನನ್ನು ಸ್ತುತಿಸಿರಿ, ಕರ್ತನಿಗೆ ಉಪಕಾರ ಸ್ತುತಿಮಾಡಿರಿ; ಆತನು ಒಳ್ಳೆಯವನು, ಆತನ ಕರುಣೆಯು ಶಾಶ್ವತ ವಾಗಿರುವದು.
ಕರ್ತನನ್ನು ಸ್ತುತಿಸಿರಿ; ನಾನು ಕರ್ತನನ್ನು ಪೂರ್ಣಹೃದಯದಿಂದ ಯಥಾರ್ಥರ ಕೂಟದಲ್ಲಿಯೂ ಸಭೆಯಲ್ಲಿಯೂ ಕೊಂಡಾಡುವೆನು.
ನಾವಾದರೋ ಇಂದಿನಿಂದ ಯುಗಯುಗಕ್ಕೂ ಕರ್ತನನ್ನು ಸ್ತುತಿಸುವೆವು. ಕರ್ತನನ್ನು ಸ್ತುತಿಸಿರಿ.
ಕರ್ತನನ್ನು ಸ್ತುತಿಸಿರಿ. ನನ್ನ ಪ್ರಾಣವೇ, ಕರ್ತನನ್ನು ಸ್ತುತಿಸು.
ಕರ್ತನನ್ನು ನೀವು ಸ್ತುತಿಸಿರಿ, ಕರ್ತನನ್ನು ಆಕಾಶದಿಂದ ನೀವು ಸ್ತುತಿಸಿರಿ; ಉನ್ನತವಾದವುಗಳಲ್ಲಿ ಆತನನ್ನು ಸ್ತುತಿಸಿರಿ.
ಕರ್ತನನ್ನು ಸ್ತುತಿಸಿರಿ. ಕರ್ತನಿಗೆ ಹೊಸ ಹಾಡನ್ನೂ ಪರಿಶುದ್ಧರ ಸಭೆ ಯಲ್ಲಿ ಆತನ ಸ್ತೋತ್ರವನ್ನೂ ಹಾಡಿರಿ.
ನೀವು ಕರ್ತನನ್ನು ಸ್ತುತಿಸಿರಿ. ದೇವರನ್ನು ಆತನ ಪರಿಶುದ್ಧ ಆಲಯದಲ್ಲಿ ಸ್ತುತಿಸಿರಿ; ಆತನ ಬಲದ ಆಂತರಿಕ್ಷದಲ್ಲಿ ಆತನನ್ನು ಸ್ತುತಿಸಿರಿ.
ಆದರೆ ನಾನು ಸ್ತೋತ್ರದ ಸ್ವರದಿಂದ ನಿನಗೆ ಬಲಿಅರ್ಪಿಸು ವೆನು; ನಾನು ಮಾಡಿದ ಪ್ರಮಾಣವನ್ನು ತೀರಿಸುವೆನು; ರಕ್ಷಣೆಯು ಕರ್ತನದೇ ಎಂದು ಹೇಳಿದನು.ಆಗ ಕರ್ತನು ಆ ವಿಾನಿಗೆ ಹೇಳಿದ್ದರಿಂದ ಅದು ಯೋನನನ್ನು ಒಣ ಭೂಮಿಯ ಮೇಲೆ ಕಾರಿಬಿಟ್ಟಿತು.
ನಮ್ಮನ್ನು ಶೋಧನೆಯೊಳಗೆ ನಡಿಸದೆ ಕೇಡಿನಿಂದ ತಪ್ಪಿಸು. ಯಾಕಂದರೆ ರಾಜ್ಯವೂ ಬಲವೂ ಮಹಿಮೆಯೂ ಎಂದೆಂದಿಗೂ ನಿನ್ನವೇ. ಆಮೆನ್.
ಹೇಗಿದ್ದರೂ ಇನ್ನು ಮುಂದೆ ನಿತ್ಯ ಜೀವಕ್ಕಾಗಿ ತನ್ನ ಮೇಲೆ ನಂಬಿಕೆಯಿಡುವವರಿಗೆ ದೃಷ್ಟಾಂತವಿರಬೇಕೆಂದು ಯೇಸು ಕ್ರಿಸ್ತನು ಮೊದಲು ನನ್ನನ್ನು ಕರುಣಿಸಿ ನನ್ನಲ್ಲಿ ತನ್ನ ಪೂರ್ಣದೀರ್ಘ ಶಾಂತಿಯನ್ನು ತೋರ್ಪಡಿಸಿದನು.
ಆಗ ಆ ಇಪ್ಪತ್ತನಾಲ್ಕು ಮಂದಿ ಹಿರಿಯರು ಸಿಂಹಾಸನದ ಮೇಲೆ ಕೂತಿದ್ದಾತನ ಮುಂದೆ ಅಡ್ಡಬಿದ್ದು ತಮ್ಮ ಕಿರೀಟಗಳನ್ನು ಸಿಂಹಾಸನದ ಮುಂದೆ ಹಾಕಿ ಯುಗಯುಗಾಂತರ ಗಳಲ್ಲಿಯೂ ಜೀವಿಸುವಾತನನ್ನು ಆರಾಧಿಸುತ್ತಾ--ಓ ಕರ್ತನೇ, ನೀನು ಪ್ರಭಾವ ಮಾನಬಲಗಳನ್ನು ಹೊಂದುವದಕ್ಕೆ ಯೋಗ್ಯನಾಗಿದ್ದೀ; ಯಾಕಂದರೆ ಸಮಸ್ತವನ್ನು ಸೃಷ್ಟಿಸಿದಾತನು ನೀನೇ. ಅವು ನಿನ್ನ ಚಿತ್ತ ದಂತೆ ಉಂಟಾಗಿ ಸೃಷ್ಟಿಸಲ್ಪಟ್ಟವು ಎಂದು ಹೇಳುವರು.
ಅವರು ಹೊಸ ಹಾಡನ್ನು ಹಾಡುತ್ತಾ--ನೀನು ಪುಸ್ತಕವನ್ನು ತೆಗೆದುಕೊಳ್ಳುವದಕ್ಕೂ ಅದರ ಮುದ್ರೆಗಳನ್ನು ಬಿಚ್ಚುವದಕ್ಕೂ ಯೋಗ್ಯ ನಾಗಿದ್ದೀ; ಯಾಕಂದರೆ ನೀನು ವಧಿತನಾಗಿ ನಿನ್ನ ರಕ್ತದಿಂದ ಸಕಲ ಕುಲ ಭಾಷೆ ಪ್ರಜೆ ಜನಾಂಗಗಳ ವರಿಂದ ನಮ್ಮನ್ನು ದೇವರಿಗಾಗಿ ವಿಮೋಚಿಸಿದ್ದೀ;
ಅವರು--ರಕ್ಷಣೆಯು ಸಿಂಹಾಸನದ ಮೇಲೆ ಕೂತಿರುವ ನಮ್ಮ ದೇವರಿಗೂ ಕುರಿಮರಿಯಾದಾತನಿಗೂ ಸೇರಿದ್ದು ಎಂದು ಮಹಾ ಶಬ್ದದಿಂದ ಕೂಗಿದರು.
ಏಳನೆಯ ದೂತನು ತುತೂರಿಯನ್ನೂದಿದನು. ಆಗ ಪರಲೋಕದಲ್ಲಿ ಮಹಾಶಬ್ದಗಳುಂಟಾಗಿ-- ಈ ಲೋಕದ ರಾಜ್ಯಗಳು ನಮ್ಮ ಕರ್ತನ ಮತ್ತು ಆತನ ಕ್ರಿಸ್ತನ ರಾಜ್ಯಗಳಾದವು; ಆತನು ಯುಗ ಯುಗಾಂತರಗಳಲ್ಲಿಯೂ ಆಳುವನು ಎಂದು ಹೇಳಿ ದವು.
ಆಗ ಪರಲೋಕದಲ್ಲಿ ಮಹಾಶಬ್ದವನ್ನು ನಾನು ಕೇಳಿದೆನು. ಅದು--ಈಗ ರಕ್ಷಣೆಯೂ ಶಕ್ತಿಯೂ ನಮ್ಮ ದೇವರ ರಾಜ್ಯವೂ ಆತನ ಕ್ರಿಸ್ತನ ಅಧಿಕಾರವೂ ಬಂದವು; ಯಾಕಂದರೆ ಹಗಲಿರುಳು ನಮ್ಮ ಸಹೋದರರ ಮೇಲೆ ನಮ್ಮ ದೇವರ ಮುಂದೆ ದೂರು ಹೇಳಿದ ದೂರು ಗಾರನು ದೊಬ್ಬಲ್ಪಟ್ಟಿದ್ದಾನೆ.
ಇವುಗಳಾದ ಮೇಲೆ ಮಹಾ ಅಧಿಕಾರವುಳ್ಳ ಮತ್ತೊಬ್ಬ ದೂತನು ಪರಲೋಕದಿಂದ ಇಳಿಯುವದನ್ನು ಕಂಡೆನು; ಅವನ ಪ್ರಭಾವದಿಂದ ಭೂಮಿಗೆ ಪ್ರಕಾಶವುಂಟಾಯಿತು.
ತಿರಿಗಿ ಅವರು --ಹಲ್ಲೆಲೂಯಾ ಅಂದರು. ಅವಳ ಹೊಗೆಯು ಯುಗಯುಗಾಂತರಗಳಲ್ಲಿಯೂ ಏರಿ ಹೋಗುತ್ತದೆ.
ತರುವಾಯ ಜನರ ದೊಡ್ಡ ಗುಂಪಿನ ಶಬ್ದದಂತೆಯೂ ಬಹಳ ನೀರುಗಳ ಘೋಷದಂತೆಯೂ ಗಟ್ಟಿಯಾದ ಗುಡುಗುಗಳ ಶಬ್ದದಂತೆಯೂ ಇದ್ದ ಒಂದು ಶಬ್ದವನ್ನು ನಾನು ಕೇಳಿದೆನು; ಅದು--ಹಲ್ಲೆಲೂಯಾ, ಸರ್ವಶಕ್ತನಾಗಿರುವ ದೇವರಾದ ಕರ್ತನು ಆಳುತ್ತಾನೆ.