Home Bibles ☰ Books ಪ್ರಕಟನೆ 2:12 · ಕನ್ನಡ ಬೈಬಲ್
ಪ್ರಕಟನೆ 2:12 · ಕನ್ನಡ ಬೈಬಲ್

ಪೆರ್ಗಮದಲ್ಲಿರುವ ಸಭೆಯ ದೂತನಿಗೆ ಬರೆ: ಹದವಾದ ಇಬ್ಬಾಯಿ ಕತ್ತಿಯನ್ನು ಹಿಡಿದಾತನು ಹೇಳು ವವುಗಳು ಯಾವವೆಂದರೆ,

Cross references

ನ್ಯಾಯಾಧಿಪತಿಗಳು 3:16

ಏಹೂದನು ಇಬ್ಬಾಯಿಯ ಒಂದು ಮೊಳ ಉದ್ದವಾದ ಒಂದು ಕಠಾರಿಯನ್ನು ತನಗೆ ಮಾಡಿ ಕೊಂಡು ಅದನ್ನು ತನ್ನ ವಸ್ತ್ರದ ಕೆಳಗೆ ತನ್ನ ಬಲಗಡೆ ತೊಡೆಯಲ್ಲಿ ಕಟ್ಟಿಕೊಂಡು

ಯೆಶಾಯ 11:4

ಆದರೆ ಬಡವರಿಗೆ ನೀತಿಯಿಂದ ನ್ಯಾಯತೀರಿಸುವನು; ಭೂಮಿಯ ದೀನರಿಗೆ ನ್ಯಾಯ ವಾಗಿ ತೀರ್ಪುಮಾಡುವನು; ಭೂಮಿಯನ್ನು ತನ್ನ ಬಾಯಿಯ ಕೋಲಿನಿಂದ ಹೊಡೆಯುವನು, ತನ್ನ ತುಟಿಗಳ ಉಸಿರಿನಿಂದ ದುಷ್ಟರನ್ನು ಹತಮಾಡುವನು.

ಹೆಬ್ರಿಯರಿಗೆ 4:12

ಯಾಕಂದರೆ ದೇವರ ವಾಕ್ಯವು ಸಜೀವ ವಾದದ್ದು, ಶಕ್ತಿಯುಳ್ಳದ್ದು, ಯಾವ ಇಬ್ಬಾಯಿ ಕತ್ತಿ ಗಿಂತಲೂ ಹದವಾದದ್ದು, ಪ್ರಾಣ ಆತ್ಮಗಳನ್ನೂ ಕೀಲು ಮಜ್ಜೆಗಳನ್ನೂ ವಿಭಾಗಿಸುವಷ್ಟರ ಮಟ್ಟಿಗೆ ತೂರಿ ಹೋಗುವಂಥದ್ದೂ ಹೃದಯದ ಆಲೋಚನೆಗಳನ್ನೂ ಉದ್ದೇಶಗಳನ್ನೂ ವಿವೇಚಿಸುವಂಥದ್ದೂ ಆಗಿದೆ.

ಪ್ರಕಟನೆ 1:11

ಅದು--ನಾನೇ ಅಲ್ಫಾವೂ ಓಮೆಗವೂ ಮೊದಲನೆಯವನೂ ಕಡೆ ಯವನೂ ಆಗಿದ್ದೇನೆ; ನೀನು ನೋಡುವದನ್ನೂ ಪುಸ್ತಕದಲ್ಲಿ ಬರೆದು ಆಸ್ಯದಲ್ಲಿನ ಎಫೆಸ, ಸ್ಮುರ್ನ, ಪೆರ್ಗಮ, ಥುವತೈರ, ಸಾರ್ದಿಸ್‌, ಫಿಲದೆಲ್ಫಿಯ, ಲವೊದಿಕೀಯ ಎಂಬ ಈ ಏಳು ಸಭೆಗಳಿಗೆ ಅದನ್ನು ಕಳುಹಿಸಬೇಕೆಂದು ಹೇಳಿತು.

ಪ್ರಕಟನೆ 1:16

ಆತನ ಬಲಗೈಯಲ್ಲಿ ಏಳು ನಕ್ಷತ್ರಗಳಿದ್ದವು; ಆತನ ಬಾಯೊಳಗಿಂದ ಹದವಾದ ಇಬ್ಬಾಯಿ ಕತ್ತಿಯು ಹೊರಟಿತು. ಆತನ ಮುಖವು ಸೂರ್ಯನು ತನ್ನ ಬಲದಲ್ಲಿ ಪ್ರಕಾಶಿಸುವಂತಿತ್ತು.

ಪ್ರಕಟನೆ 2:1

ಎಫೆಸದಲ್ಲಿರುವ ಸಭೆಯ ದೂತನಿಗೆ ಬರೆ: ಏಳು ನಕ್ಷತ್ರಗಳನ್ನು ತನ್ನ ಬಲಗೈಯಲ್ಲಿ ಹಿಡುಕೊಂಡು ಏಳು ಚಿನ್ನದ ದೀಪ ಸ್ತಂಭಗಳ ಮಧ್ಯದಲ್ಲಿ ತಿರುಗಾಡುವಾತನು ಈ ವಿಷಯಗಳನ್ನು ಹೇಳುತ್ತಾನೆ.

ಪ್ರಕಟನೆ 2:16

ಆದದರಿಂದ ಮಾನಸಾಂತರಪಡು, ಇಲ್ಲದಿದ್ದರೆ ನಾನು ನಿನ್ನ ಬಳಿಗೆ ಬೇಗನೆ ಬಂದು ನನ್ನ ಬಾಯಿ ಕತ್ತಿಯಿಂದ ಅವರ ಮೇಲೆ ಯುದ್ಧ ಮಾಡುವೆನು.

ಪ್ರಕಟನೆ 19:15

ಜನಾಂಗಗಳನ್ನು ಹೊಡೆಯುವದಕ್ಕಾಗಿ ಹದವಾದ ಕತ್ತಿಯು ಆತನ ಬಾಯಿಂದ ಹೊರಡುತ್ತದೆ. ಆತನು ಅವರನ್ನು ಕಬ್ಬಿಣದ ಕೋಲಿನಿಂದ ಆಳುವನು. ಆತನು ಸರ್ವಶಕ್ತನಾದ ದೇವರ ಉಗ್ರಕೋಪವೆಂಬ ದ್ರಾಕ್ಷೆಯ ತೊಟ್ಟಿಯಲ್ಲಿರುವದನ್ನು ತುಳಿಯುತ್ತಾನೆ.

ಪ್ರಕಟನೆ 19:21

ಮಿಕ್ಕಾದವರು ಆ ಕುದುರೆಯ ಮೇಲೆ ಕೂತಿದ್ದಾತನ ಕತ್ತಿಯಿಂದ ಅಂದರೆ ಆತನ ಬಾಯಿಂದ ಬಂದ ಕತ್ತಿ ಯಿಂದ ಹತರಾದರು; ಹಕ್ಕಿಗಳೆಲ್ಲಾ ಅವರ ಮಾಂಸವನು ಹೊಟ್ಟೆತುಂಬಾ ತಿಂದವು.

Interlinear

Choose Theme