Home Bibles ಪ್ರಕಟನೆ 2:4 · ಕನ್ನಡ ಬೈಬಲ್
ಪ್ರಕಟನೆ 2:4 · ಕನ್ನಡ ಬೈಬಲ್

ಆದಾಗ್ಯೂ ನಿನ್ನಲ್ಲಿ ನನಗೆ ವಿರೋಧವಾದದ್ದು ಇದೆ. ಯಾಕಂದರೆ ನೀನು ನಿನ್ನ ಮೊದಲಿನ ಪ್ರೀತಿಯನ್ನು ಬಿಟ್ಟುಬಿಟ್ಟಿದ್ದೀ.

Cross references

ಯೆರೆಮಿಯ 2:2

ನೀನು ಹೋಗಿ ಯೆರೂಸಲೇಮಿನ ಕಿವಿಗಳಲ್ಲಿ ಕೂಗಿ ಹೇಳ ಬೇಕಾದದ್ದೇನಂದರೆ, ಕರ್ತನು ಹೀಗೆ ಹೇಳುತ್ತಾನೆ --ನಾನು ನಿನ್ನನ್ನು ನಿನ್ನ ಯೌವನದ ವಾತ್ಸಲ್ಯವನ್ನೂ ನಿನ್ನ ನಿಶ್ಚಿತಾರ್ಥದ ಪ್ರೀತಿಯನ್ನೂ ನೀನು ಅರಣ್ಯದಲ್ಲಿ ಬಿತ್ತಲ್ಪಡದ ದೇಶದಲ್ಲಿ ನನ್ನನ್ನು ಹಿಂಬಾಲಿಸಿದ್ದನ್ನೂ ಜ್ಞಾಪಕಮಾಡಿಕೊಳ್ಳುತ್ತೇನೆ.

ಮತ್ತಾಯ 24:12

ದುಷ್ಟತನ ಹೆಚ್ಚಾಗುವದರಿಂದ ಬಹಳ ಜನರ ಪ್ರೀತಿಯು ತಣ್ಣಗಾಗುವದು.

ಮತ್ತಾಯ 25:7

ಆಗ ಆ ಕನ್ಯೆಯರೆಲ್ಲರೂ ಎದ್ದು ತಮ್ಮ ದೀಪಗಳನ್ನು ಸರಿಪಡಿಸಿಕೊಂಡರು;

ಫಿಲಿಪ್ಪಿಯವರಿಗೆ 1:9

ನಿಮ್ಮ ಪ್ರೀತಿಯು ಹೆಚ್ಚುತ್ತಾ ಹೆಚ್ಚುತ್ತಾ ನೀವು ಜ್ಞಾನ ಮತ್ತು ಪೂರ್ಣ ವಿವೇಕಗಳಿಂದ ಕೂಡಿದವರಾಗಿರಬೇಕೆಂತಲೂ

ಫಿಲಿಪ್ಪಿಯವರಿಗೆ 3:13

ಸಹೋದರರೇ, ನಾನಂತೂ ಹಿಡಿದುಕೊಂಡವ ನೆಂದು ನನ್ನನ್ನು ಎಣಿಸಿಕೊಳ್ಳುವದಿಲ್ಲ; ಆದರೆ ಇದೊಂ ದನ್ನು ಮಾಡುತ್ತೇನೆ, ನಾನು ಹಿಂದಿನ ವಿಷಯಗಳನ್ನು ಮರೆತುಬಿಟ್ಟು ಮುಂದಿನವುಗಳನ್ನು ಹಿಡಿಯುವದಕ್ಕಾಗಿ

1 ತೆಸಲೋನಿಕದವರಿಗೆ 4:9

ಆದರೆ ಸಹೋದರ ಪ್ರೀತಿಯ ವಿಷಯದಲ್ಲಿ ನಿಮಗೆ ಬರೆಯುವದು ಅವಶ್ಯವಿಲ್ಲ; ಒಬ್ಬರನ್ನೊಬ್ಬರು ಪ್ರೀತಿಸ ಬೇಕೆಂಬ ಉಪದೇಶವನ್ನು ನೀವೇ ದೇವರಿಂದ ಹೊಂದಿದವರಾಗಿದ್ದೀರಿ.

2 ತೆಸಲೋನಿಕದವರಿಗೆ 1:3

ಸಹೋದರರೇ, ನಾವು ಯಾವಾಗಲೂ ನಿಮ್ಮ ವಿಷಯದಲ್ಲಿ ದೇವರಿಗೆ ಕೃತಜ್ಞತಾಸ್ತುತಿ ಮಾಡುವದಕ್ಕೆ ಬದ್ಧರಾಗಿದ್ದೇವೆ. ಹಾಗೆ ಮಾಡುವದು ಯೋಗ್ಯ; ಯಾಕಂದರೆ ನಿಮ್ಮ ನಂಬಿಕೆಯು ಬಹಳ ಅಭಿವೃದ್ಧಿ ಹೊಂದುತ್ತಾ ಪರಸ್ಪರವಾದ ಪ್ರೀತಿಯು ನಿಮ್ಮೆಲ್ಲ ರಲ್ಲಿಯೂ ಹೆಚ್ಚುತ್ತಾ ಬರುತ್ತದೆ.

ಹೆಬ್ರಿಯರಿಗೆ 6:10

ನೀವು ಪರಿಶುದ್ಧರಿಗೆ ಉಪಚಾರ ಮಾಡಿದಿರಿ, ಇನ್ನು ಮಾಡುತ್ತಾ ಇದ್ದೀರಿ. ಈ ನಿಮ್ಮ ಕೆಲಸವನ್ನೂ ಇದರಲ್ಲಿ ನೀವು ಆತನ ನಾಮದ ವಿಷಯವಾಗಿ ತೋರಿಸಿದ ಪ್ರೀತಿಯ ಪ್ರಯಾಸವನ್ನೂ ಮರೆಯು ವದಕ್ಕೆ ದೇವರು ಅನ್ಯಾಯಸ್ಥನಲ್ಲ.

ಪ್ರಕಟನೆ 2:14

ಆದರೂ ನಿನಗೆ ವಿರೋಧವಾದ ಕೆಲವು ವಿಷಯಗಳು ನನಗಿವೆ. ವಿಗ್ರಹಗಳಿಗೆ ಯಜ್ಞಾರ್ಪಣೆ ಮಾಡಿದ ಪದಾರ್ಥಗಳನ್ನು ತಿನ್ನುವ ದಕ್ಕೂ ಜಾರತ್ವ ಮಾಡುವದಕ್ಕೂ ಇಸ್ರಾಯೇಲಿನ ಮಕ್ಕಳ ಮುಂದೆ ಮುಗ್ಗರಿಸುವ ಬಂಡೆಯನ್ನು ಹಾಕ ಬೇಕೆಂದು ಬಿಳಾಮನು ಬಾಲಾಕನಿಗೆ ಹೇಳಿದ ಬೋಧನೆಯನ್ನು

ಪ್ರಕಟನೆ 2:20

ಆದಾಗ್ಯೂ ನಿನಗೆ ವಿರೋಧವಾದ ಕೆಲವು ವಿಷಯಗಳು ನನಗಿವೆ; ಅದೇ ನಂದರೆ, ಯೆಜೆಬೇಲೆಂಬ ಆ ಹೆಂಗಸು ತನ್ನನ್ನು ಪ್ರವಾದಿ ನಿಯೆಂದು ಹೇಳಿಕೊಂಡು ಜಾರತ್ವ ಮಾಡುವದಕ್ಕೂ ವಿಗ್ರಹಗಳಿಗೆ ಅರ್ಪಣೆ ಮಾಡಿದ ಪದಾರ್ಥಗಳನ್ನು ತಿನ್ನುವದಕ್ಕೂ ನನ್ನ ದಾಸರಿಗೆ ಬೋಧಿಸುತ್ತಾ ಅವರನ್ನು ವಂಚಿಸುತ್ತಿರು

ಪ್ರಕಟನೆ 3:14

ಲವೊದಿಕೀಯದಲ್ಲಿರುವ ಸಭೆಯ ದೂತನಿಗೆ ಬರೆ: ಆಮೆನ್‌ ಎಂಬಾತನು ಮತ್ತು ನಂಬಿಗಸ್ತನೂ ಸತ್ಯಸಾಕ್ಷಿಯೂ ದೇವರ ಸೃಷ್ಟಿಯ ಆದಿಯೂ ಆಗಿರುವಾತನು ಹೇಳುವವುಗಳು ಯಾವವೆಂದರೆ,

Interlinear

Choose Theme