ಆಗ ಒಬ್ಬ ದೂತನು ತಳವಿಲ್ಲದ ತಗ್ಗಿನ ಬೀಗದ ಕೈಯನ್ನೂ ದೊಡ್ಡ ಸರಪಣಿ ಯನ್ನೂ ತನ್ನ ಕೈಯಲ್ಲಿ ಹಿಡಿದುಕೊಂಡು ಪರಲೋಕ ದಿಂದ ಇಳಿದು ಬರುವದನ್ನು ನಾನು ಕಂಡೆನು.
Cross references
ಅವು ತಮ್ಮನ್ನು ಹೊರಗೆ ಅಗಾಧಕ್ಕೆ ಹೋಗುವಂತೆ ಅಪ್ಪಣೆ ಕೊಡಬಾರದೆಂದು ಆತನನ್ನು ಬೇಡಿಕೊಂಡವು.
ಹೇಗೆಂದರೆ ದೂತರು ಪಾಪಮಾಡಿದಾಗ ದೇವರು ಅವರನ್ನು ಸುಮ್ಮನೆ ಬಿಡದೆ ನರಕಕ್ಕೆ ದೊಬ್ಬಿ ನ್ಯಾಯ ತೀರ್ಪನ್ನು ಹೊಂದುವದಕ್ಕೆ ಇಡಲ್ಪಟ್ಟವರಾಗಿರ ಬೇಕೆಂದು ಕತ್ತಲೆಯ ಸಂಕೋಲೆಗಳಿಗೆ ಒಪ್ಪಿಸಿದನು.
ತಮ್ಮ ಮೊದಲಿನ ಸ್ಥಿತಿಯನ್ನು ಕಾಪಾಡದೆ ತಮ್ಮ ಸ್ವಂತ ವಾಸಸ್ಥಾನವನ್ನು ಬಿಟ್ಟ ದೂತರಿಗೆ ಆತನು ನಿತ್ಯವಾದ ಬೇಡಿಗಳನ್ನು ಹಾಕಿ ಮಹಾ ದಿನದ ತೀರ್ಪಿಗಾಗಿ ಅವರನ್ನು ಕತ್ತಲೆ ಯೊಳಗೆ ಕಾದಿಟ್ಟಿದ್ದಾನೆ.
ಸತ್ತವನಾದೆನು,ಈಗ ಬದುಕುವವನಾಗಿದ್ದೇನೆ. ಇಗೋ, ನಾನು ಎಂದೆಂ ದಿಗೂ ಬದುಕುವವನಾಗಿದ್ದೇನೆ. ಆಮೆನ್. ನರಕದ ಮತ್ತು ಮರಣದ ಬೀಗದ ಕೈಗಳೂ ನನ್ನಲ್ಲಿ ಅವೆ.
ಐದನೆಯ ದೂತನು ಊದಿದಾಗ ಆಕಾಶದಿಂದ ಭೂಮಿಗೆ ಬಿದ್ದ ಒಂದು ನಕ್ಷತ್ರವನ್ನು ಕಂಡೆನು. ಅವನಿಗೆ ತಳವಿಲ್ಲದ ತಗ್ಗಿನ ಬೀಗದ ಕೈ ಕೊಡಲ್ಪಟ್ಟಿತು.
ಮೇಘವನ್ನು ಧರಿಸಿಕೊಂಡಿದ್ದ ಬಲಿಷ್ಠ ನಾದ ಮತ್ತೊಬ್ಬ ದೂತನು ಪರಲೋಕ ದಿಂದ ಇಳಿದು ಬರುವದನ್ನು ನಾನು ಕಂಡೆನು. ಅವನ ತಲೆಯ ಮೇಲೆ ಮಳೆ ಬಿಲ್ಲು ಇತ್ತು; ಅವನ ಮುಖವು ಸೂರ್ಯನಂತಿತ್ತು; ಅವನ ಪಾದಗಳು ಬೆಂಕಿಯ ಕಂಬಗಳಂತಿದ್ದವು;
ಇವುಗಳಾದ ಮೇಲೆ ಮಹಾ ಅಧಿಕಾರವುಳ್ಳ ಮತ್ತೊಬ್ಬ ದೂತನು ಪರಲೋಕದಿಂದ ಇಳಿಯುವದನ್ನು ಕಂಡೆನು; ಅವನ ಪ್ರಭಾವದಿಂದ ಭೂಮಿಗೆ ಪ್ರಕಾಶವುಂಟಾಯಿತು.