ಪ್ರಕಟನೆ 21:19 · ಕನ್ನಡ ಬೈಬಲ್
ಪಟ್ಟಣದ ಗೋಡೆಯ ಅಸ್ತಿವಾರಗಳು ಸಕಲವಿಧವಾದ ಅಮೂಲ್ಯವಾದ ಕಲ್ಲುಗಳಿಂದ ಅಲಂಕೃತವಾಗಿದ್ದವು. ಮೊದಲನೆಯ ಅಸ್ತಿ ವಾರವು ಸೂರ್ಯಕಾಂತ, ಎರಡನೆಯದು ನೀಲಮಣಿ, ಮೂರನೆಯದು ಕೆಂಪು, ನಾಲ್ಕನೆಯದು ಪಚ್ಚೆ.
Cross references
ನಿರ್ಗಮಕಾಂಡ 28:17
ನೀನು ಅದರಲ್ಲಿ ನಾಲ್ಕು ಕಲ್ಲುಗಳ ನಾಲ್ಕು ಸಾಲುಗಳಾಗಿ ಕಲ್ಲು ಜವೆಗಳನ್ನು ಮಾಡಬೇಕು; ಮೊದಲನೆಯ ಸಾಲಿನಲ್ಲಿ ಪದ್ಮರಾಗ ಗೋಮೇಧಕ ಮಾಣಿಕ್ಯಗಳಿರಬೇಕು. ಇದೇ ಮೊದಲ ನೆಯ ಸಾಲು.
ನಿರ್ಗಮಕಾಂಡ 29:10
ಇದಲ್ಲದೆ ಆ ಹೋರಿಯನ್ನು ಸಭೆಯ ಗುಡಾರದ ಮುಂದೆ ತರಬೇಕು. ಆರೋನನೂ ಅವನ ಕುಮಾರರೂ ಹೋರಿಯ ತಲೆಯ ಮೇಲೆ ತಮ್ಮ ಕೈಗಳನ್ನು ಇಡಬೇಕು.
ಯೋಬ 28:16
ಅದನ್ನು ಓಫೀರಿನ ಬಂಗಾರಕ್ಕೂ ಅಮೂಲ್ಯ ವಾದ ಗೋಮೇಧಿಕಕ್ಕೂ ನೀಲಕ್ಕೂ ಬೆಲೆ ಕಟ್ಟುವ ದಿಲ್ಲ.
ಸಾಮೇತಿಗಳು 3:15
ಅದು ಮಾಣಿಕ್ಯಗಳಿಗಿಂತಲೂ ಬಹು ಅಮೂಲ್ಯವುಳ್ಳದ್ದಾಗಿದ್ದು ನಿನ್ನ ಇಷ್ಟ ವಸ್ತುಗಳೆಲ್ಲವೂ ಅದಕ್ಕೆ ಸಮವಾಗುವದಿಲ್ಲ.
ಯೆಶಾಯ 54:11
ಸಂಕಟಕ್ಕೊಳಗಾದವಳೇ, ಬಿರುಗಾಳಿಯಿಂದ ಬಡಿ ಯಲ್ಪಟ್ಟು ಆದರಣೆ ಹೊಂದದವಳೇ, ಇಗೋ, ನಾನು ನಿನ್ನ ಕಲ್ಲುಗಳನ್ನು ಸುಂದರವಾದ ಬಣ್ಣಗಳೊಂದಿಗೆ ಇಟ್ಟು ನಿನ್ನ ಅಸ್ತಿವಾರವನ್ನು ನೀಲಮಣಿಗಳೊಂದಿಗೆ ಹಾಕುವೆನು.