ಇದಲ್ಲದೆ ಆತನು ನನಗೆ--ಎಲ್ಲಾ ಮುಗಿಯಿತು. ನಾನು ಅಲ್ಫಾವೂ ಓಮೆಗವೂ ಆದಿಯೂ ಅಂತ್ಯವೂ ಆಗಿದ್ದೇನೆ. ದಾಹವುಳ್ಳವನಿಗೆ ಜೀವದ ನೀರಿನ ಬುಗ್ಗೆಯಿಂದ ನಾನು ನೀರನ್ನು ಉಚಿತವಾಗಿ ಕೊಡುವೆನು.
Cross references
ನಿನ್ನ ಬಳಿಯಲ್ಲಿ ಜೀವದ ಬುಗ್ಗೆ ಉಂಟು. ನಿನ್ನ ತೇಜಸ್ಸಿನ ಬೆಳಕನ್ನು ನೋಡುವೆವು.
ಆದದರಿಂದಲೇ ರಕ್ಷಣೆಯೆಂಬ ಬಾವಿಗಳಿಂದ ಆನಂದದೊಡನೆ ನೀವು ನೀರನ್ನು ಸೇದುವಿರಿ.
ಹಾ, ಬಾಯಾರಿದ ಸಕಲಜನರೇ, ನೀವು ನೀರಿನ ಬಳಿಗೆ ಬನ್ನಿರಿ, ಕೊಂಡುಕೊಳ್ಳಿರಿ, ಉಣ್ಣಿರಿ; ಹೌದು, ಬನ್ನಿರಿ; ಹಣವಿಲ್ಲದೆ ಮತ್ತು ಕ್ರಯವಿಲ್ಲದೆ ದ್ರಾಕ್ಷಾರಸವನ್ನೂ ಹಾಲನ್ನೂ ಕೊಂಡು ಕೊಳ್ಳಿರಿ.
ನನ್ನ ಜನರು ಎರಡು ದುಷ್ಕೃತ್ಯಗಳನ್ನು ಮಾಡಿದ್ದಾರೆ; ಜೀವವುಳ್ಳ ನೀರಿನ ಬುಗ್ಗೆಯಾಗಿರುವ ನನ್ನನ್ನು ಬಿಟ್ಟು ತಮಗೆ ತೊಟ್ಟಿಗಳನ್ನು ನೀರು ಹಿಡಿಯಲಾರದ ಒಡಕು ತೊಟ್ಟಿಗಳನ್ನು ಕೆತ್ತಿಕೊಂಡಿದ್ದಾರೆ.
ನಾನು ಅವರ ಹಿಂಜರಿಯುವಿಕೆಯನ್ನು ಸ್ವಸ್ಥ ಮಾಡುವೆನು. ನಾನು ಅವರನ್ನು ಮನಃಪೂರ್ವಕವಾಗಿ ಪ್ರೀತಿಸುವೆನು. ಯಾಕಂದರೆ ನನ್ನ ಕೋಪವು ಅವನ ಕಡೆಯಿಂದ ತಿರುಗಿಕೊಂಡಿದೆ.
ಆ ದಿನದಲ್ಲಿ ಆಗುವದೇನಂ ದರೆ, ಬೆಟ್ಟಗಳು ಹೊಸ ದ್ರಾಕ್ಷಾರಸವನ್ನು ಸುರಿಯುವವು; ಗುಡ್ಡಗಳು ಹಾಲಿನಿಂದ ಹರಿಯುವವು; ಯೆಹೂದದ ಹಳ್ಳಗಳೆಲ್ಲಾ ನೀರಿನಿಂದ ಹರಿಯುವವು; ಕರ್ತನ ಆಲಯದೊಳಗಿಂದ ಬುಗ್ಗೆ ಹೊರಟು, ಶಿಟ್ಟೀಮಿನ ತಗ್ಗಿಗೆ ಜಲ ಕೊಡುವದು.
ಯೇಸು ಪ್ರತ್ಯುತ್ತರವಾಗಿ ಆಕೆಗೆ--ದೇವರ ದಾನವೇನೆಂಬದೂ ಮತ್ತು--ನನಗೆ ಕುಡಿಯುವದಕ್ಕೆ ಕೊಡು ಎಂದು ನಿನ್ನನ್ನು ಕೇಳಿದಾತನು ಯಾರೆಂಬದೂ ನಿನಗೆ ತಿಳಿದಿದ್ದರೆ ನೀನು ಆತನನ್ನು ಕೇಳುತ್ತಿದ್ದಿ, ಆತನು ನಿನಗೆ ಜೀವಕರವಾದ ನೀರನ್ನು ಕೊಡುತ್ತಿದ್ದನು ಎಂದು ಹೇಳಿದನು.
ಆದರೆ ನಾನು ಕೊಡುವ ನೀರನ್ನು ಕುಡಿಯುವವನಿಗೆ ಎಂದಿಗೂ ನೀರ ಡಿಕೆಯಾಗುವದಿಲ್ಲ; ಯಾಕಂದರೆ ನಾನು ಅವನಿಗೆ ಕೊಡುವ ನೀರು ಅವನಲ್ಲಿ ನಿತ್ಯಜೀವಕ್ಕೆ ಉಕ್ಕುವ ನೀರಿನ ಬಾವಿಯಾಗಿರುವದು ಅಂದನು.
ಹಬ್ಬದ ಆ ಮಹಾದಿವಸವಾದ ಕಡೇ ದಿನದಲ್ಲಿ ಯೇಸು ನಿಂತುಕೊಂಡು--ಯಾವನಿಗಾದರೂ ನೀರಡಿಕೆ ಯಾಗಿದ್ದರೆ ಅವನು ನನ್ನ ಬಳಿಗೆ ಬಂದು ಕುಡಿಯಲಿ.
ಅವರು ನೀತಿವಂತರೆಂದು ನಿರ್ಣಯ ಹೊಂದುವದು ಆತನ ಉಚಿತಾರ್ಥವಾದ ಕೃಪೆ ಯಿಂದಲೇ. ಇದು ಕ್ರಿಸ್ತ ಯೇಸುವಿನಿಂದಾದ ವಿಮೋ ಚನೆಯ ಮೂಲಕವಾಗಿ ಆಗುವದು.
ದೇವರು ತನ್ನ ಸ್ವಂತ ಮಗನನ್ನು ಉಳಿಸಿಕೊಳ್ಳದೆ ಆತನನ್ನು ನಮ್ಮೆಲ್ಲರಿಗೊಸ್ಕರ ಒಪ್ಪಿಸಿಕೊಟ್ಟ ಮೇಲೆ ಆತನೊಂದಿಗೆ ಎಲ್ಲವುಗಳನ್ನು ಉಚಿತವಾಗಿ ನಮಗೆ ಕೊಡದೆ ಇರುವನೇ?
ನಾವು ಪ್ರಾಪಂಚಿಕ ಆತ್ಮವನ್ನು ಹೊಂದದೆ ದೇವರು ನಮಗೆ ಉಚಿತವಾಗಿ ದಯಪಾಲಿಸಿರುವವುಗಳನ್ನು ತಿಳುಕೊಳ್ಳು ವದಕ್ಕಾಗಿ ದೇವರ ಆತ್ಮನನ್ನೇ ಹೊಂದಿದೆವು.
ಹಾಗಾದರೆ ಪೌಲನು ಯಾರು? ಅಪೊಲ್ಲೋಸನು ಯಾರು? ಅವರು ಸೇವಕರು, ಅವರ ಮುಖಾಂತರ ನೀವು ನಂಬುವವರಾದಿರಿ; ಕರ್ತನು ಒಬ್ಬೊಬ್ಬನಿಗೆ ದಯಪಾಲಿಸಿದ ಪ್ರಕಾರ ಅವರು ಸೇವೆ ಮಾಡುವವ ರಾಗಿದ್ದಾರೆ.
ಈ ಅಸ್ತಿವಾರದ ಮೇಲೆ ಚಿನ್ನ ಬೆಳ್ಳಿ ಅಮೂಲ್ಯವಾದ ಕಲ್ಲುಗಳು ಕಟ್ಟಿಗೆ ಹುಲ್ಲು ಆಪು ಇವುಗಳಲಿ
ಆದಕಾರಣ ಮನುಷ್ಯ ಮಾತ್ರದವರ ವಿಷಯದಲ್ಲಿ ಯಾರೂ ಹಿಗ್ಗದಿರಲಿ. ಯಾಕಂದರೆ ಸಮಸ್ತವೂ ನಿಮ್ಮದು;
ಯಾಕಂದರೆ ದೇವರಿಂದ ಹುಟ್ಟಿರು ವಂಥದೆಲ್ಲವು ಲೋಕವನ್ನು ಜಯಿಸುತ್ತದೆ. ಲೋಕವನ್ನು ಜಯಿಸಿದಂಥ ಆ ಜಯವು ನಮ್ಮ ನಂಬಿಕೆಯೇ.
ನಾನೇ ಅಲ್ಫಾವೂ ಓಮೆಗವೂ ಆದಿಯೂ ಅಂತ್ಯವೂ ಇರುವಾತನೂ ಇದ್ದಾತನೂ ಮತ್ತು ಬರು ವಾತನೂ ಸರ್ವಶಕ್ತನೂ ಆಗಿದ್ದೇನೆ ಎಂದು ಕರ್ತನು ಹೇಳುತ್ತಾನೆ.
ಅದು--ನಾನೇ ಅಲ್ಫಾವೂ ಓಮೆಗವೂ ಮೊದಲನೆಯವನೂ ಕಡೆ ಯವನೂ ಆಗಿದ್ದೇನೆ; ನೀನು ನೋಡುವದನ್ನೂ ಪುಸ್ತಕದಲ್ಲಿ ಬರೆದು ಆಸ್ಯದಲ್ಲಿನ ಎಫೆಸ, ಸ್ಮುರ್ನ, ಪೆರ್ಗಮ, ಥುವತೈರ, ಸಾರ್ದಿಸ್, ಫಿಲದೆಲ್ಫಿಯ, ಲವೊದಿಕೀಯ ಎಂಬ ಈ ಏಳು ಸಭೆಗಳಿಗೆ ಅದನ್ನು ಕಳುಹಿಸಬೇಕೆಂದು ಹೇಳಿತು.
ನಾನು ಆತನನ್ನು ಕಂಡಾಗ ಸತ್ತವನ ಹಾಗೆ ಆತನ ಪಾದಗಳ ಮುಂದೆ ಬಿದ್ದೆನು. ಆತನು ತನ್ನ ಬಲಗೈಯನ್ನು ನನ್ನ ಮೇಲಿಟ್ಟು--ಹೆದರಬೇಡ, ನಾನು ಮೊದಲನೆಯ ವನೂ ಕಡೆಯವನೂ ಆಗಿದ್ದೇನೆ.
ಸಿಂಹಾಸನದ ಮಧ್ಯದಲ್ಲಿರುವ ಕುರಿಮರಿಯಾದಾತನು ಅವರನ್ನು ಮೇಯಿಸಿ ಜೀವ ಜಲದ ಒರತೆಗಳ ಬಳಿಗೆ ನಡಿಸುತ್ತಾನೆ; ಮತ್ತು ದೇವರು ಅವರ ಕಣ್ಣೀರನ್ನೆಲ್ಲಾ ಒರಸಿಬಿಡುವನು ಎಂದು ಹೇಳಿದನು.
ಪರಲೋಕವನ್ನೂ ಅದರಲ್ಲಿರುವವುಗಳನ್ನೂ ಭೂಮಿಯನ್ನೂ ಅದರಲ್ಲಿರುವವುಗಳನ್ನೂ ಸಮುದ್ರ ವನ್ನೂ ಅದರಲ್ಲಿರುವವುಗಳನ್ನೂ ಸೃಷ್ಟಿಸಿ ಯುಗ ಯುಗಾಂತರಗಳಲ್ಲಿ ಜೀವಿಸುವಾತನ ಮೇಲೆ ಆಣೆ ಯಿಟ್ಟು ಇನ್ನು ಸಮಯವಿರುವದಿಲ್ಲ ಎಂತಲೂ
ಏಳನೆಯ ದೂತನು ತನ್ನ ಪಾತ್ರೆಯಲ್ಲಿದ್ದದ್ದನ್ನು ವಾಯುಮಂಡಲದಲ್ಲಿ ಹೊಯ್ಯಲು ಪರಲೋಕದಲ್ಲಿದ್ದ ಆಲಯದೊಳಗಿಂದಲೂ ಸಿಂಹಾಸನದಿಂದಲೂ ಮಹಾಶಬ್ದವು ಬಂದು--ಮುಗಿಯಿತು ಎಂದು ಹೇಳಿತು.
ನಾನೇ ಅಲ್ಫಾಯೂ ಓಮೆಗವೂ ಆದಿಯೂ ಅಂತ್ಯವೂ ಮೊದಲನೆಯ ವನೂ ಕಡೆಯವನೂ ಆಗಿದ್ದೇನೆ.
ಆತ್ಮನೂ ಮದಲಗಿತ್ತಿಯೂ--ಬಾ, ಅನ್ನುತ್ತಾರೆ. ಕೇಳುವವನು--ಬಾ, ಅನ್ನಲಿ. ಬಾಯಾರಿದವನು ಬರಲಿ. ಇಷ್ಟವುಳ್ಳವನು ಜೀವಜಲವನ್ನು ಉಚಿತವಾಗಿ ತೆಗೆದುಕೊಳ್ಳಲಿ.