Home Bibles ಪ್ರಕಟನೆ 22:20 · ಕನ್ನಡ ಬೈಬಲ್
ಪ್ರಕಟನೆ 22:20 · ಕನ್ನಡ ಬೈಬಲ್

ಇವುಗಳನ್ನು ಸಾಕ್ಷೀಕರಿಸುವಾತನು--ಖಂಡಿತ ವಾಗಿ ನಾನು ಬೇಗ ಬರುತ್ತೇನೆ ಎಂದು ಹೇಳುತ್ತಾನೆ. ಆಮೆನ್‌. ಹಾಗೆಯೇ ಆಗಲಿ; ಕರ್ತನಾದ ಯೇಸುವೇ, ಬಾ.ನಮ್ಮ ಕರ್ತನಾದ ಯೇಸು ಕ್ರಿಸ್ತನ ಕೃಪೆಯು ನಿಮ್ಮೆಲ್ಲರೊಂದಿಗೆ ಇರಲಿ. ಆಮೆನ್‌.

Cross references

ಪರಮಗೀತ 8:14

ನನ್ನ ಪ್ರಿಯನೇ, ತ್ವರೆಮಾಡು, ಜಿಂಕೆಯ ಹಾಗೆ ಇಲ್ಲವೆ ಸುಗಂಧವುಳ್ಳ ಪರ್ವತಗಳ ಮೇಲಿರುವ ದುಪ್ಪಿ ಮರಿಯ ಹಾಗೆಯೆ ಇರು.

ಯೆಶಾಯ 25:9

ಆ ದಿನದಲ್ಲಿ (ಜನರು) ಹೇಳುವದೇನಂದರೆ--ಇಗೋ, ಈತನೇ ನಮ್ಮ ದೇವರು, ನಾವು ಈತನಿ ಗೋಸ್ಕರ ಕಾದಿದ್ದೇವೆ; ಈತನು ನಮ್ಮನ್ನು ರಕ್ಷಿಸುವನು. ಈತನೇ ಕರ್ತನು, ನಾವು ಈತನಿಗೋಸ್ಕರ ಕಾದಿ ದ್ದೇವೆ; ನಾವು ಈತನ ರಕ್ಷಣೆಯಲ್ಲಿ ಹರ್ಷಿಸಿ ಸಂತೋಷ ಪಡುವೆವು.

ಯೋಹಾನ 21:25

ಇದಲ್ಲದೆ ಯೇಸು ಮಾಡಿದವುಗಳು ಬಹಳ ಉಂಟು; ಅವುಗಳನ್ನು ಒಂದೊಂದಾಗಿ ಬರೆಯುವ ದಾದರೆ ಬರೆಯಬೇಕಾದ ಪುಸ್ತಕಗಳನ್ನು ಲೋಕವೇ ಹಿಡಿಸಲಾರದೆ ಹೋದೀತೆಂದು ನಾನು ನೆನಸುತ್ತೇನೆ. ಆಮೆನ್‌.

1 ಕೊರಿಂಥದವರಿಗೆ 16:22

ಯಾವನಾದರೂ ಕರ್ತನಾದ ಯೇಸು ಕ್ರಿಸ್ತನನ್ನು ಪ್ರೀತಿಸದಿದ್ದರೆ ಅವನು ಅನಾಥಿಮ (ಶಾಪಗ್ರಸ್ತನಾಗಲಿ;) ಮಾರನಾಥ (ನಮ್ಮ ಕರ್ತನು ಬರುತ್ತಾನೆ).

2 ತಿಮೋಥೆಯ 4:8

ಇನ್ನು ಮುಂದೆ ನನಗೋಸ್ಕರ ನೀತಿಯ ಕಿರೀಟವು ಇಡಲ್ಪಟ್ಟಿದೆ; ಅದನ್ನು ನೀತಿಯುಳ್ಳ ನ್ಯಾಯಾ ಧಿಪತಿಯಾದ ಕರ್ತನು ಆ ದಿನದಲ್ಲಿ ನನಗೆ ಕೊಡು ವನು; ನನಗೆ ಮಾತ್ರವಲ್ಲದೆ ಆತನ ಬರೋಣವನ್ನು ಪ್ರೀತಿಸುವವರೆಲ್ಲರಿಗೆ ಸಹ ಕೊಡುವನು.

ಹೆಬ್ರಿಯರಿಗೆ 9:28

ಹಾಗೆಯೇ ಕ್ರಿಸ್ತನು ಬಹು ಜನರ ಪಾಪಗಳನ್ನು ಹೊತ್ತುಕೊಳ್ಳುವದಕ್ಕೋಸ್ಕರ ಒಂದೇ ಸಾರಿ ಸಮರ್ಪಿತ ನಾದನು. ತನ್ನನ್ನು ನಿರೀಕ್ಷಿಸಿ ಕೊಂಡಿರುವವರಿಗೆ ರಕ್ಷಣೆ ಯನ್ನುಂಟು ಮಾಡುವದಕ್ಕೋಸ್ಕರ ಪಾಪವಿಲ್ಲದವನಾಗಿ ಎರಡನೆಯ ಸಾರಿ ಕಾಣಿಸಿಕೊಳ್ಳುವನು.

2 ಪೇತ್ರ 3:12

ದೇವರ ದಿನದ ಪ್ರತ್ಯಕ್ಷತೆಯನ್ನು ಎದುರು ನೋಡುತ್ತಾ ಆತುರಪಡುವ ಆ ದಿನದಲ್ಲಿ ಆಕಾಶಗಳು ಬೆಂಕಿ ಹತ್ತಿ ಲಯವಾಗಿ ಹೋಗುವವು, ಅತಿ ಉಷ್ಣದಿಂದ ಪಂಚಭೂತಗಳು ಉರಿದು ಕರಗಿ ಹೋಗುವವಲ್ಲವೇ?

ಪ್ರಕಟನೆ 1:2

ಯೋಹಾನನು ದೇವರ ವಾಕ್ಯದ ವಿಷಯವಾಗಿಯೂ ಯೇಸು ಕ್ರಿಸ್ತನ ವಿಷಯವಾಗಿಯೂ ತಾನು ಕಂಡದ್ದನ್ನೆಲ್ಲ ತಿಳಿಸುವವನಾಗಿ ಸಾಕ್ಷಿಕೊಟ್ಟನು.

ಪ್ರಕಟನೆ 1:18

ಸತ್ತವನಾದೆನು,ಈಗ ಬದುಕುವವನಾಗಿದ್ದೇನೆ. ಇಗೋ, ನಾನು ಎಂದೆಂ ದಿಗೂ ಬದುಕುವವನಾಗಿದ್ದೇನೆ. ಆಮೆನ್‌. ನರಕದ ಮತ್ತು ಮರಣದ ಬೀಗದ ಕೈಗಳೂ ನನ್ನಲ್ಲಿ ಅವೆ.

ಪ್ರಕಟನೆ 22:7

ಇಗೋ, ನಾನು ಬೇಗನೆ ಬರುತ್ತೇನೆ. ಈ ಪುಸ್ತಕದಲ್ಲಿ ಬರೆದಿರುವ ಪ್ರವಾದನೆಗಳನ್ನು ಕಾಪಾಡುವವನು ಧನ್ಯನು ಎಂದು ಹೇಳಿದನು.

ಪ್ರಕಟನೆ 22:10

ಇದಲ್ಲದೆ ಅವನು ನನಗೆ--ಈ ಪುಸ್ತಕದಲ್ಲಿರುವ ಪ್ರವಾದನೆಯ ಹೇಳಿಕೆಗಳಿಗೆ ಮುದ್ರೆಹಾಕಬೇಡ; ಯಾಕಂದರೆ ಸಮಯವು ಸವಿಾಪವಾಗಿದೆ.

ಪ್ರಕಟನೆ 22:12

ಇಗೋ, ನಾನು ಬೇಗ ಬರುತ್ತೇನೆ; ನಾನು ಪ್ರತಿಯೊಬ್ಬನಿಗೆ ಅವನವನ ಕೆಲಸದ ಪ್ರಕಾರ ಕೊಡತಕ್ಕ ಪ್ರತಿಫಲವು ನನ್ನಲ್ಲಿದೆ.

ಪ್ರಕಟನೆ 22:18

ಈ ಪುಸ್ತಕದ ಪ್ರವಾದನಾವಾಕ್ಯಗಳನ್ನು ಕೇಳುವ ಪ್ರತಿಯೊಬ್ಬನಿಗೆ ನಾನು ಹೇಳುವ ಸಾಕ್ಷಿ ಏನಂ ದರೆ--ಯಾವನಾದರೂ ಇವುಗಳಿಗೆ ಕೂಡಿಸಿದರೆ ದೇವರು ಅವನಿಗೆ ಈ ಪುಸ್ತಕದಲ್ಲಿ ಬರೆದಿರುವ ಉಪ ದ್ರವಗಳನ್ನು ಕೂಡಿಸುವನು.

Interlinear

Choose Theme