ನಮ್ಮನ್ನು ನಮ್ಮ ದೇವರಿಗೊಸ್ಕರ ರಾಜರನ್ನಾಗಿಯೂ ಯಾಜಕರನ್ನಾ ಗಿಯೂ ಮಾಡಿದ್ದೀ; ನಾವು ಭೂಮಿಯ ಮೇಲೆ ಆಳುವೆವು ಎಂದು ಹೇಳಿದರು.
Cross references
ನೀವು ನನಗೆ ಯಾಜಕ ರಾಜ್ಯವೂ ಪರಿಶುದ್ಧ ಜನಾಂಗವೂ ಆಗಿರುವಿರಿ ಎಂದು ಇಸ್ರಾಯೇಲ್ ಮಕ್ಕಳಿಗೆ ಹೇಳ ಬೇಕಾದ ಮಾತುಗಳು ಇವೇ ಅಂದನು.
ಆದರೆ ಆ ಮಹೋನ್ನತನ ಪರಿಶುದ್ಧರು ರಾಜ್ಯವನ್ನು ವಶಪಡಿಸಿಕೊಂಡು ಅದನ್ನು ಎಂದಿಗೂ ಹೌದು, ಎಂದೆಂದಿಗೂ ವಶಪಡಿಸಿಕೊಳ್ಳು ವರು.
ರಾಜ್ಯವೂ ದೊರೆತನವೂ ಆಕಾಶದ ಕೆಳಗಿರುವ ಪೂರ್ತಿ ರಾಜ್ಯಗಳ ಮಹತ್ತು ಮಹೋನ್ನತನ ಪರಿಶುದ್ಧವಾದ ಜನರಿಗೆ ಕೊಡಲ್ಪಡುವದು; ಆತನ ರಾಜ್ಯವು ನಿತ್ಯವಾದ ರಾಜ್ಯ ಮತ್ತು ಎಲ್ಲಾ ದೊರೆತನಗಳೂ ಆತನನ್ನು ಸೇವಿಸುವವು ಮತ್ತು ವಿಧೇಯವಾಗಿರುವವು.ಇಷ್ಟರಲ್ಲಿ ಇದರ ಪ್ರಸ್ತಾಪವು ಮುಗಿಯಿತು, ದಾನಿಯೇಲನೆಂಬ ನನಗೆ ನನ್ನ ಆಲೋಚನೆಗಳು ಬಹಳವಾಗಿ ಕಳವಳಪಡಿಸಿ ದವು; ನನ್ನ ಮುಖವು ಕಳೆಗುಂದಿತು, ಆದರೂ ಈ ಸಂಗತಿಯನ್ನು ನನ್ನ ಹೃದಯದಲ್ಲಿ ಇಟ್ಟುಕೊಂಡೆನು.
ನೀವು ಸಹ ಜೀವವುಳ್ಳ ಕಲ್ಲುಗಳಾಗಿದ್ದು ಆತ್ಮಸಂಬಂಧ ವಾದ ಮಂದಿರವಾಗುವದಕ್ಕೆ ಕಟ್ಟಲ್ಪಡುತ್ತಾ ಇದ್ದೀರಿ, ಮತ್ತು ಯೇಸು ಕ್ರಿಸ್ತನ ಮೂಲಕ ದೇವರಿಗೆ ಸಮರ್ಪಕ ವಾದ ಆತ್ಮೀಯ ಯಜ್ಞಗಳನ್ನು ಸಮರ್ಪಿಸುವದಕ್ಕೆ ಪವಿತ್ರ ಯಾಜಕ ವರ್ಗದವರಾಗಿದ್ದೀರಿ.
ತನ್ನ ತಂದೆ ಯಾದ ದೇವರಿಗೆ ನಮ್ಮನ್ನು ರಾಜರನ್ನಾಗಿಯೂ ಯಾಜಕ ರನ್ನಾಗಿಯೂ ಮಾಡಿದನು. ಆತನಿಗೆ ಯುಗ ಯುಗಾಂತರಗಳಲ್ಲಿ ಮಹಿಮೆಯೂ ಅಧಿಪತ್ಯವೂ ಇರಲಿ. ಆಮೆನ್.
ಪ್ರಥಮ ಪುನರುತ್ಥಾ ನದಲ್ಲಿ ಸೇರಿರುವವನು ಧನ್ಯನೂ ಪರಿಶುದ್ಧನೂ ಆಗಿ ದ್ದಾನೆ. ಇಂಥವರ ಮೇಲೆ ಎರಡನೆಯ ಮರಣಕ್ಕೆ ಅಧಿಕಾರವಿಲ್ಲ; ಆದರೆ ಅವರು ದೇವರಿಗೂ ಕ್ರಿಸ್ತನಿಗೂ ಯಾಜಕರಾಗಿ ಕ್ರಿಸ್ತನೊಂದಿಗೆ ಸಾವಿರ ವರುಷ ಆಳುವರು.
ಅಲ್ಲಿ ಇನ್ನು ರಾತ್ರಿ ಇರುವದಿಲ್ಲ; ಅವರಿಗೆ ದೀಪವಾಗಲಿ ಸೂರ್ಯನ ಬೆಳಕಾಗಲಿ ಬೇಕಾಗಿರುವ ದಿಲ್ಲ; ಯಾಕಂದರೆ ದೇವರಾದ ಕರ್ತನೇ ಅವರಿಗೆ ಬೆಳಕನ್ನು ಕೊಡುವನು. ಅವರು ಯುಗಯುಗಾಂತರ ಗಳಲ್ಲಿಯೂ ಆಳುವರು.