ಆತನ ಕೋಪದ ಮಹಾದಿನ ಬಂದದೆ; ಅದರ ಮುಂದೆ ನಿಲ್ಲುವದಕ್ಕೆ ಯಾರು ಶಕ್ತರು ಎಂದು ಹೇಳಿದರು.
Cross references
ನೀನು, ನೀನೇ, ಭಯಹುಟ್ಟಿಸುತ್ತೀ; ನೀನು ಒಂದು ಸಾರಿ ಕೋಪಿಸಿಕೊಂಡರೆ ನಿನ್ನ ಮುಂದೆ ನಿಲ್ಲುವವನಾರು?
ಕರ್ತನೇ, ನೀನು ಅಕ್ರಮಗಳ ಮೇಲೆ ಕಣ್ಣಿಟ್ಟರೆ ಓ ಕರ್ತನೇ, ಯಾರು ನಿಲ್ಲುವರು?
ನೀವು ಗೋಳಾ ಡಿರಿ, ಕರ್ತನ ದಿನವು ಸವಿಾಪವಾಯಿತು; ಅದು ಸರ್ವಶಕ್ತನಿಂದ ನಾಶನದಂತೆ ಬರುವದು.
ಕರ್ತನು ಹೀಗೆ ಹೇಳುತ್ತಾನೆ --ಯಾಕೋಬನ ವಿಷಯ ಸಂತೋಷದಿಂದ ಹಾಡಿ ಮುಖ್ಯವಾದ ಜನಾಂಗಗಳೊಳಗೆ ಆರ್ಭಟಿಸಿರಿ, ಸಾರಿರಿ, ಸ್ತುತಿಸಿರಿ; ಕರ್ತನೇ, ನಿನ್ನ ಜನರನ್ನೂ ಇಸ್ರಾಯೇಲಿನ ಉಳಿದವರನ್ನೂ ರಕ್ಷಿಸು ಎಂದು ಹೇಳಿರಿ.
ಕರ್ತನು ತನ್ನ ಸೈನ್ಯದ ಮುಂದೆ ತನ್ನ ಶಬ್ದವನ್ನು ಮಾಡುತ್ತಾನೆ; ಆತನ ದಂಡು ಬಹು ದೊಡ್ಡದಾಗಿದೆ; ಹೌದು, ಬಲವಾದ ದ್ದಾಗಿದ್ದು ಆತನ ವಾಕ್ಯವನ್ನು ನಡಿಸುತ್ತದೆ; ಕರ್ತನ ದಿನವು ದೊಡ್ಡದು, ಮಹಾ ಭಯಂಕರವಾದದ್ದು, ಅದನ್ನು ತಾಳಿಕೊಳ್ಳುವವನ್ಯಾರು?
ಕರ್ತನ ದೊಡ್ಡ ಭಯಂಕರವಾದ ದಿನವು ಬರುವದಕ್ಕಿಂತ ಮುಂಚೆ, ಸೂರ್ಯನು ಕತ್ತಲೆಗೂ ಚಂದ್ರನು ರಕ್ತಕ್ಕೂ ಮಾರ್ಪಡುವವು.ಆಗುವದೇನಂದರೆ--ಕರ್ತನ ಹೆಸರನ್ನು ಹೇಳಿ ಕೊಳ್ಳುವವರೆಲ್ಲರೂ ರಕ್ಷಿಸಲ್ಪಡುವರು; ಚೀಯೋನ್ ಪರ್ವತದಲ್ಲಿಯೂ ಯೆರೂಸಲೇಮಿನಲ್ಲಿಯೂ ಕರ್ತನು ಕರೆಯುವ ಉಳಿದವರಲ್ಲಿಯೂ ಕರ್ತನು ಹೇಳಿದ ಪ್ರಕಾರ ಬಿಡುಗಡೆಯು ಇರುವದು.
ಕರ್ತನ ಮಹಾದಿನವು ಸವಿಾಪವಾಗಿದೆ, ಅದು ಬಹು ತ್ವರೆಪಡುತ್ತದೆ; ಕರ್ತನ ದಿನದ ಶಬ್ದವು ತ್ವರೆ ಪಡುತ್ತದೆ; ಶೂರನು ಅಲ್ಲಿ ಘೋರವಾಗಿ ಗೋಳಿಡು ವನು.
ಆದರೆ ಆತನ ಬರುವಿಕೆಯ ದಿವಸದಲ್ಲಿ ಯಾರು ಉಳಿದಾರು? ಆತನು ಪ್ರತ್ಯಕ್ಷವಾಗುವಾಗ ಯಾರು ನಿಲ್ಲುವರು? ಆತನು ಅಕ್ಕಸಾಲಿಗನ ಬೆಂಕಿಯ ಹಾಗೆಯೂ ಅಗಸನ ಚೌಳಿನ ಹಾಗೆಯೂ ಇದ್ದಾನೆ.
ಆದಕಾರಣ ಸಂಭವಿಸುವದಕ್ಕಿರುವ ಇವೆಲ್ಲವುಗಳಿಂದ ನೀವು ತಪ್ಪಿಸಿಕೊಳ್ಳುವದಕ್ಕೆ ಯೋಗ್ಯರೆಂದು ಎಣಿಸಲ್ಪಡು ವಂತೆಯೂ ಮನುಷ್ಯಕುಮಾರನ ಮುಂದೆ ನಿಂತು ಕೊಳ್ಳುವಂತೆಯೂ ಎಚ್ಚರವಾಗಿದ್ದು ಯಾವಾಗಲೂ ಪ್ರಾರ್ಥಿಸುತ್ತಾ ಇರ್ರಿ ಅಂದನು.
ಹೀಗೆ ನಿನ್ನ ಕಾಠಿಣ್ಯತೆ ಮತ್ತು ಪಶ್ಚಾತ್ತಾಪವಿಲ್ಲದ ಹೃದಯದಿಂದ ಉಗ್ರತೆಯ ದಿನಕ್ಕಾಗಿಯೂ ದೇವರ ನೀತಿಯುಳ್ಳ ನ್ಯಾಯತೀರ್ವಿಕೆಯ ಪ್ರತ್ಯಕ್ಷತೆಗಾಗಿಯೂ ದೇವರ ಕೋಪವನ್ನು ನಿನಗೋಸ್ಕರ ಕೂಡಿಸಿಟ್ಟುಕೊಳ್ಳುತ್ತಾ ಇದ್ಧೀ.
ತಮ್ಮ ಮೊದಲಿನ ಸ್ಥಿತಿಯನ್ನು ಕಾಪಾಡದೆ ತಮ್ಮ ಸ್ವಂತ ವಾಸಸ್ಥಾನವನ್ನು ಬಿಟ್ಟ ದೂತರಿಗೆ ಆತನು ನಿತ್ಯವಾದ ಬೇಡಿಗಳನ್ನು ಹಾಕಿ ಮಹಾ ದಿನದ ತೀರ್ಪಿಗಾಗಿ ಅವರನ್ನು ಕತ್ತಲೆ ಯೊಳಗೆ ಕಾದಿಟ್ಟಿದ್ದಾನೆ.
ಜನಾಂಗಗಳು ಕೋಪಿಸಿ ಕೊಂಡವು, ನಿನ್ನ ಕೋಪವು ಬಂದಿತು. ಸತ್ತವರು ತೀರ್ಪು ಹೊಂದುವದಕ್ಕೂ ನೀನು ನಿನ್ನ ಸೇವಕರಾದ ಪ್ರವಾದಿಗಳಿಗೂ ಪರಿಶುದ್ಧರಿಗೂ ನಿನ್ನ ನಾಮಕ್ಕೆ ಭಯಪಡುವ ಚಿಕ್ಕವರಿಗೂ ದೊಡ್ಡವರಿಗೂ ಪ್ರತಿ ಫಲವನ್ನು ಕೊಡುವದಕ್ಕೆ ಮತ್ತು ಭೂಮಿಯನ್ನು ನಾಶಮಾಡುವವರನುಆಗ ಪರಲೋಕದಲ್ಲಿ ದೇವಾಲಯವು ತೆರೆಯ ಲ್ಪಟ್ಟಿತು; ಆತನ ಆಲಯದಲ್ಲಿ ಆತನ ಒಡಂಬಡಿಕೆಯ ಮಂಜೂಷವು ಕಾಣಿಸಿತು; ಇದಲ್ಲದೆ ಮಿಂಚುಗಳೂ ವಾಣಿಗಳೂ ಗುಡುಗುಗಳೂ ಭೂಕಂಪವೂ ದೊಡ್ಡ ಆನೆಕಲ್ಲಿನ ಮಳೆಯೂ ಉಂಟಾದವು.
ಅವು ಮಹತ್ಕಾರ್ಯಗಳನ್ನು ಮಾಡುವ ದೆವ್ವಗಳ ಆತ್ಮಗಳೇ; ಸರ್ವಶಕ್ತನಾದ ದೇವರ ಮಹಾ ದಿನದಲ್ಲಾಗುವ ಯುದ್ಧಕ್ಕೆ ಭೂಲೋಕದ ಮತ್ತು ಪ್ರಪಂಚದ ಎಲ್ಲಾ ರಾಜರನ್ನು ಕೂಡಿಸುವದಕ್ಕಾಗಿ ಅವರ ಬಳಿಗೆ ಹೋಗುವವು.