Home Bibles ☰ Books ಪ್ರಕಟನೆ 9:13 · ಕನ್ನಡ ಬೈಬಲ್
ಪ್ರಕಟನೆ 9:13 · ಕನ್ನಡ ಬೈಬಲ್

ಆರನೆಯ ದೂತನು ಊದಿದಾಗ ದೇವರ ಸಮ್ಮುಖದಲ್ಲಿರುವ ಚಿನ್ನದ ವೇದಿಗಿದ್ದ ನಾಲ್ಕು ಕೊಂಬು ಗಳಿಂದ ಬಂದ ಧ್ವನಿಯನ್ನು ನಾನು ಕೇಳಿದೆನು.

Cross references

ನಿರ್ಗಮಕಾಂಡ 30:2

ಅದರ ಉದ್ದ ಒಂದು ಮೊಳ, ಅಗಲ ಒಂದು ಮೊಳ, ಎತ್ತರ ಎರಡು ಮೊಳ ಇದ್ದು ಅದು ಚಚ್ಚೌಕವಾಗಿರಬೇಕು. ಅದಕ್ಕೆ ಕೊಂಬುಗಳನ್ನು ಅದ ರಿಂದಲೇ ಮಾಡಬೇಕು.

ಹೆಬ್ರಿಯರಿಗೆ 9:24

ಯಾಕಂದರೆ ಕ್ರಿಸ್ತನು ನಿಜವಾದವುಗಳಿಗೆ ಸಾಮ್ಯ ವಾಗಿದ್ದು ಕೈಯಿಂದ ಕಟ್ಟಿದ್ದ ಪರಿಶುದ್ಧ ಸ್ಥಳಗಳಲ್ಲಿ ಪ್ರವೇಶಿಸದೆ ದೇವರ ಸಮ್ಮುಖದಲ್ಲಿ ನಮಗೋಸ್ಕರ ಈಗ ಕಾಣಿಸಿಕೊಳ್ಳು ವದಕ್ಕೆ ಪರಲೋಕದಲ್ಲಿಯೇ ಪ್ರವೇಶಿಸಿದನು.

ಹೆಬ್ರಿಯರಿಗೆ 10:21

ದೇವರ ಮನೆಯ ಮೇಲೆ ಮಹಾಯಾಜಕನು ನಮಗಿರುವದರಿಂದ

ಪ್ರಕಟನೆ 8:3

ಆಮೇಲೆ ಚಿನ್ನದ ಧೂಪದ ಪಾತ್ರೆಯಿದ್ದ ಮತ್ತೊಬ್ಬ ದೂತನು ಬಂದು ಯಜ್ಞವೇದಿಯ ಬಳಿ ಯಲ್ಲಿ ನಿಂತನು; ಸಿಂಹಾಸನದ ಮುಂದೆ ಇದ್ದ ಚಿನ್ನದ ಧೂಪವೇದಿಯ ಮೇಲೆ ಪರಿಶುದ್ಧರೆಲ್ಲರ ಪ್ರಾರ್ಥನೆಗಳ ಜೊತೆಯಲ್ಲಿ ಸಮರ್ಪಿಸುವದಕ್ಕಾಗಿ ಅವನಿಗೆ ಬಹಳ ಧೂಪ ಕೊಡಲ್ಪಟ್ಟಿತು.

ಪ್ರಕಟನೆ 9:1

ಐದನೆಯ ದೂತನು ಊದಿದಾಗ ಆಕಾಶದಿಂದ ಭೂಮಿಗೆ ಬಿದ್ದ ಒಂದು ನಕ್ಷತ್ರವನ್ನು ಕಂಡೆನು. ಅವನಿಗೆ ತಳವಿಲ್ಲದ ತಗ್ಗಿನ ಬೀಗದ ಕೈ ಕೊಡಲ್ಪಟ್ಟಿತು.

Interlinear

Choose Theme