ಸ್ತ್ರೀಯರ ಕೂದಲಿ ನಂತಿರುವ ಕೂದಲು ಅವುಗಳಿಗೆ ಇತ್ತು; ಅವುಗಳ ಹಲ್ಲುಗಳು ಸಿಂಹದ ಹಲ್ಲುಗಳ ಹಾಗಿದ್ದವು.
Cross references
ಯೇಹುವು ಇಜ್ರೇಲಿಗೆ ಬಂದಿದ್ದಾನೆಂದು ಈಜೆ ಬೆಲಳು ಕೇಳಿ ಅವಳು ತನ್ನ ಮುಖಕ್ಕೆ ಬಣ್ಣ ಹಚ್ಚಿ ಕೊಂಡು ತನ್ನ ತಲೆಯನ್ನು ಶೃಂಗರಿಸಿಕೊಂಡು ಕಿಟಕಿ ಯಿಂದ ಇಣಿಕಿ ನೋಡಿದಳು.
ನನ್ನ ಪ್ರಾಣವು ಸಿಂಹಗಳ ಮಧ್ಯದಲ್ಲಿದೆ; ಬೆಂಕಿಯಂತೆ ಉರಿಯುವ ಮನುಷ್ಯರ ಮಧ್ಯದಲ್ಲಿ ಬಿದ್ದಿದ್ದೇನೆ. ಅವರ ಹಲ್ಲುಗಳು ಭಲ್ಲೆಬಾಣಗಳೂ; ಅವರ ನಾಲಿಗೆ ಹದವಾದ ಕತ್ತಿ.
ಆಗ ಸುವಾಸನೆಯ ಬದಲಾಗಿ ದುರ್ವಾಸನೆ, ಡಾಬಿಗೆ ಬದಲಾಗಿ ಹಗ್ಗ; ಜಡೆಯ ಬದಲಾಗಿ ಬೋಳುತಲೆ; ನಡುವಿನ ಶಲ್ಯಕ್ಕೆ ಪ್ರತಿಯಾಗಿ ಗೋಣೀತಟ್ಟು; ಸೌಂದರ್ಯಕ್ಕೆ ಬದಲಾಗಿ ಬರೆ, ಇವು ಆಗುವವು;
ನನ್ನ ದೇಶದ ಮೇಲೆ ಒಂದು ಜನಾಂಗವು ಏರಿ ಬಂತು; ಅದು ಬಲವಾದದ್ದೂ ಲೆಕ್ಕವಿಲ್ಲದ್ದೂ; ಅದರ ಹಲ್ಲುಗಳು ಸಿಂಹದ ಹಲ್ಲುಗಳು, ದೊಡ್ಡ ಸಿಂಹದ ದವಡೆ ಹಲ್ಲುಗಳು ಅದಕ್ಕೆ ಉಂಟು.
ಪುರುಷನು ಕೂದಲು ಬೆಳೆಸಿಕೊಂಡರೆ ಅದು ಅವನಿಗೆ ಅವಮಾನ ಕರವಾಗಿದೆಯೆಂದು ನಿಮಗೆ ಸ್ವಭಾವ ಸಿದ್ಧವಾಗಿ ತಿಳಿಯುತ್ತದಲ್ಲವೋ?
ಹಾಗೆಯೇ ಸ್ತ್ರೀಯರು ಮಾನಸ್ಥೆಯರಾಗಿಯೂ ಸ್ವಸ್ಥಬುದ್ಧಿಯುಳ್ಳವರಾಗಿಯೂ ಇದ್ದು ಮರ್ಯಾದೆಗೆ ತಕ್ಕ ಉಡುಪನ್ನುಟ್ಟುಕೊಳ್ಳಬೇಕೆಂದು ಅಪೇಕ್ಷಿಸುತ್ತೇನೆ. ಅವರು ಜಡೆ ಚಿನ್ನ ಮುತ್ತುಗಳು ಬೆಲೆಯುಳ್ಳ ವಸ್ತ್ರ ಇವುಗಳಿಂದ ತಮ್ಮನ್ನು ಅಲಂಕರಿಸಿಕೊಳ್ಳದೆ
ಜಡೆ ಹೆಣೆದುಕೊ ಳ್ಳುವದೂ ಚಿನ್ನದ ಒಡವೆಗಳನ್ನು ಇಟ್ಟುಕೊಳ್ಳುವದೂ ಇಲ್ಲವೆ ಉಡಿಗೆಗಳನ್ನು ಧರಿಸಿಕೊಳ್ಳುವದೂ ಈ ಹೊರ ಗಣ ಅಲಂಕಾರವು ಬೇಡ.