Home Bibles ರೋಮಾಪುರದವರಿಗೆ 1:15 · ಕನ್ನಡ ಬೈಬಲ್
ರೋಮಾಪುರದವರಿಗೆ 1:15 · ಕನ್ನಡ ಬೈಬಲ್

ಹೀಗೆ ನಾನಾದರೋ ರೋಮ್‌ನಲ್ಲಿರುವ ನಿಮಗೂ ಸುವಾರ್ತೆಯನ್ನು ಸಾರಲು ಸಿದ್ಧನಾಗಿದ್ದೇನೆ.

Cross references

1 ಅರಸುಗಳು 8:18

ಆಗ ಕರ್ತನು ನನ್ನ ತಂದೆಯಾದ ದಾವೀದನಿಗೆ--ನನ್ನ ನಾಮಕ್ಕೆ ಮಂದಿರವನ್ನು ಕಟ್ಟಬೇಕೆಂದು ನಿನಗೆ ಮನಸ್ಸಾಗಿತ್ತಲ್ಲಾ, ನೀನು ಚೆನ್ನಾಗಿ ಮಾಡಿದಿ.

ಯೆಶಾಯ 6:8

ಆಗ ನಾನು -- ಯಾರನ್ನು ಕಳುಹಿಸಲಿ; ಯಾವನು ನಮ ಗೋಸ್ಕರ ಹೋಗುವನು ಎಂಬ ಕರ್ತನ ನುಡಿಯನ್ನು ಸಹ ಕೇಳಿ -- ನಾನು ಇದ್ದೇನೆ; ನನ್ನನ್ನು ಕಳುಹಿಸು ಅಂದೆನು.

ಮತ್ತಾಯ 9:38

ಆದದರಿಂದ ಬೆಳೆಯ ಯಜ ಮಾನನು ಕೆಲಸಗಾರರನ್ನು ತನ್ನ ಬೆಳೆಗೆ ಕಳುಹಿಸುವಂತೆ ಆತನನ್ನು ಪ್ರಾರ್ಥಿಸಿರಿ ಅಂದನು.

ಮಾರ್ಕ 14:8

ಈಕೆಯು ತನ್ನಿಂದಾದಷ್ಟು ಮಾಡಿದ್ದಾಳೆ; ನನ್ನ ಶರೀರವನ್ನು ಹೂಣಿಡುವದಕ್ಕೆ ಅದನ್ನು ಅಭಿಷೇಕಿಸುವದಕ್ಕಾಗಿ ಈಕೆಯು ಮುಂದಾಗಿ ಮಾಡಿದ್ದಾಳೆ.

ಯೋಹಾನ 4:34

ಆದರೆ ಯೇಸು ಅವರಿಗೆ--ನನ್ನನ್ನು ಕಳುಹಿಸಿದಾತನ ಚಿತ್ತವನ್ನು ನೆರವೇರಿಸಿ ಆತನ ಕೆಲಸ ವನ್ನು ಪೂರೈಸುವದೇ ನನ್ನ ಆಹಾರ ಅಂದನು.

ಅಪೋಸ್ತಲರ ಕೃತ್ಯಗಳು 21:13

ಅದಕ್ಕೆ ಪೌಲನು ಪ್ರತ್ಯುತ್ತರ ವಾಗಿ--ನೀವು ಅತ್ತು ನನ್ನ ಹೃದಯವನ್ನು ಒಡೆಯುವ ದೇನು? ಕರ್ತನಾದ ಯೇಸು ಕ್ರಿಸ್ತನ ಹೆಸರಿನ ನಿಮಿತ್ತವಾಗಿ ಬಂಧಿಸಲ್ಪಡುವದಕ್ಕೆ ಮಾತ್ರವಲ್ಲದೆ ಯೆರೂಸಲೇಮಿನಲ್ಲಿ ಸಾಯುವದಕ್ಕೂ ನಾನು ಸಿದ್ಧ ನಾಗಿದ್ದೇನೆ ಎಂದು ಹೇಳಿದನು.

ರೋಮಾಪುರದವರಿಗೆ 12:18

ಸಾಧ್ಯ ವಾದರೆ ನಿಮ್ಮಿಂದಾಗುವ ಮಟ್ಟಿಗೆ ಎಲ್ಲರ ಸಂಗಡ ಸಮಾಧಾನವಾಗಿರ್ರಿ.

ರೋಮಾಪುರದವರಿಗೆ 15:20

ಹೌದು, ಬೇರೆಯವನ ಅಸ್ತಿವಾರದ ಮೇಲೆ ನಾನು ಕಟ್ಟದಂತೆ ಕ್ರಿಸ್ತನ ಹೆಸರು ತಿಳಿಸದಿರುವ ಕಡೆಯಲ್ಲಿ ನಾನು ಸುವಾರ್ತೆಯನ್ನು ಸಾರುವದಕ್ಕೆ ಪ್ರಯಾಸ ಪಟ್ಟಿದ್ದೇನೆ.

1 ಕೊರಿಂಥದವರಿಗೆ 9:17

ನಾನು ಇದನ್ನು ಇಷ್ಟಪೂರ್ವಕವಾಗಿ ಮಾಡಿದರೆ ನನಗೆ ಬಹುಮಾನವುಂಟು. ನನ್ನ ಇಷ್ಟಕ್ಕೆ ವಿರೋಧ ವಾಗಿ ಮಾಡಿದರೆ ಸುವಾರ್ತೆಯ ವಿಷಯವಾದ ದೈವನೇಮವು ನನ್ನ ವಶಕ್ಕೆ ಕೊಡಲ್ಪಟ್ಟಿದೆ.

2 ಕೊರಿಂಥದವರಿಗೆ 8:12

ಒಬ್ಬನು ಕೊಡುವದಕ್ಕೆ ಮನಸ್ಸಿದ್ದರೆ ಅವನು ತನಗೆ ಇಲ್ಲದ್ದಕ್ಕನುಸಾರವಾಗಿ ಅಲ್ಲ, ಆದರೆ ಇರುವದಕ್ಕನುಸಾರವಾಗಿಯೇ ಕೊಟ್ಟರೆ ಅದು ಸಮರ್ಪ ಕವಾಗಿರುವದು.

2 ಕೊರಿಂಥದವರಿಗೆ 10:15

ನಾವು ಮೇರೆತಪ್ಪಿ ಮತ್ತೊಬ್ಬರ ಪ್ರಯಾಸದ ಫಲಗಳನ್ನು ತಕ್ಕೊಂಡು ಇವು ನಮ್ಮವು ಎಂದು ಹೊಗಳಿಕೊಳ್ಳುವವರಲ್ಲ; ಆದರೆ ನಿಮ್ಮ ನಂಬಿಕೆಯು ಹೆಚ್ಚಿದ ಹಾಗೆಲ್ಲಾ ನಿಮ್ಮ ಮೂಲಕ ನಮ್ಮ ಮೇರೆಯೊಳಗೆ ಇನ್ನೂ ಅಭಿವೃದ್ಧಿ ಹೊಂದುವೆವು;

Interlinear

Choose Theme