Home Bibles ರೋಮಾಪುರದವರಿಗೆ 10:19 · ಕನ್ನಡ ಬೈಬಲ್
ರೋಮಾಪುರದವರಿಗೆ 10:19 · ಕನ್ನಡ ಬೈಬಲ್

ಆದರೆ--ಇಸ್ರಾಯೇಲ್ಯರು ತಿಳುಕೊಳ್ಳಲಿಲ್ಲವೇನು ಎಂದು ನಾನು ಕೇಳುತ್ತೇನೆ. ಈ ವಿಷಯದಲ್ಲಿ--ನನ್ನ ಜನಾಂಗವಲ್ಲದವರ ಮೂಲಕ ನಿಮ್ಮಲ್ಲಿ ಹುರುಡು ಹುಟ್ಟಿಸುವೆನು; ವಿವೇಕವಿಲ್ಲದ ಜನರ ಮೂಲಕ ನಿಮ್ಮನ್ನು ಸಿಟ್ಟಿಗೆಬ್ಬಿಸುವೆನು ಎಂದು ಮೊದಲು ಮೋಶೆಯು ಹೇಳುತ್ತಾನೆ.

Cross references

ದ್ವಿತೀಯೋಪದೇಶಕಾಂಡ 32:21

ದೇವರಲ್ಲದ್ದರಿಂದ ಅವರು ನನಗೆ ರೋಷ ಹುಟ್ಟಿಸಿ ದರು; ತಮ್ಮ ವ್ಯರ್ಥವಾದವುಗಳಿಂದ ನನಗೆ ಕೋಪ ವನ್ನು ಎಬ್ಬಿಸಿದರು. ಜನವಲ್ಲದ್ದರಿಂದ ನಾನು ಅವರಿಗೆ ರೋಷ ಹುಟ್ಟಿಸುವೆನು; ಮೂಢ ಜನಾಂಗದಿಂದ ಅವರಿಗೆ ಕೋಪವನ್ನೆಬ್ಬಿಸುವೆನು.

ಕೀರ್ತನೆಗಳು 115:5

ಅವುಗಳಿಗೆ ಬಾಯಿ ಉಂಟು; ಮಾತಾಡುವದಿಲ್ಲ; ಕಣ್ಣುಗಳುಂಟು; ನೋಡು ವದಿಲ್ಲ.

ಯೆಶಾಯ 44:18

ಅವರು ಏನೂ ತಿಳಿಯ ದವರು ಇಲ್ಲವೆ ಏನೂ ಗ್ರಹಿಸಲಾರದವರು; ಆತನು ಅವರ ಕಣ್ಣು ಕಾಣದಂತೆಯೂ ಹೃದಯಗಳು ಗ್ರಹಿಸ ದಂತೆಯೂ ಮುಚ್ಚಿ ಬಿಟ್ಟಿದ್ದಾನೆ.

ಯೆರೆಮಿಯ 10:8

ಆದರೆ ಅವರು ಕೇಳಲಿಲ್ಲ, ಕಿವಿಗೊಡಲಿಲ್ಲ; ತಮ್ಮ ಕೆಟ್ಟ ಹೃದಯದ ಕಲ್ಪನೆಯಂತೆ ನಡಕೊಂಡರು; ಆದದರಿಂದ ಅವರು ಮಾಡಬೇಕೆಂದು ನಾನು ಆಜ್ಞಾಪಿಸಿದಂಥ, ಅವರು ಮಾಡುವಂಥ, ಈ ಒಡಂಬಡಿಕೆಯ ಮಾತು ಗಳನ್ನೆಲ್ಲಾ ಅವರ ಮೇಲೆ ಬರಮಾಡುವೆನು.

ಯೆರೆಮಿಯ 10:14

ಆದದರಿಂದ ನೀನು ಈ ಜನರಿಗೋಸ್ಕರ ಪ್ರಾರ್ಥನೆ ಮಾಡಬೇಡ; ಅವರಿಗೋಸ್ಕರ ಮೊರೆ ಯನ್ನೂ ಪ್ರಾರ್ಥನೆಯನ್ನೂ ಎತ್ತಬೇಡ; ಅವರು ತಮ್ಮ ಕೇಡಿನ ನಿಮಿತ್ತ ನನ್ನನ್ನು ಕೂಗುವ ಸಮಯದಲ್ಲಿ ನಾನು ಕೇಳೆನು.

ಹೊಶೇಯ 2:23

ತರುವಾಯ ಇಜ್ರೇಲನ್ನು ನನಗಾಗಿ ದೇಶದಲ್ಲಿ ಬಿತ್ತುವೆನು; ಕರುಣೆ ಹೊಂದ ದವಳ ಮೇಲೆಯೇ ನಾನು ಕರುಣೆಯನ್ನು ತೋರಿ ಸುವೆನು. ನನ್ನ ಜನವಲ್ಲದ್ದಕ್ಕೆ--ನೀನು ನನ್ನ ಜನ ವೆಂದು ಹೇಳುವೆನು; ಅವರು--ನನ್ನ ದೇವರೇ ಎಂದು ಭಜಿಸುವರು ಎಂದು ದೇವರಾದ ಕರ್ತನು ಹೇಳುತ್ತಾನೆ.

ರೋಮಾಪುರದವರಿಗೆ 1:21

ಅವರು ದೇವರನ್ನು ಅರಿತಾಗ ಆತನನ್ನು ದೇವರೆಂದು ಮಹಿಮೆಪಡಿಸಲಿಲ್ಲ, ಕೃತಜ್ಞತೆಯುಳ್ಳವರಾಗಿಯೂ ಇರಲಿಲ್ಲ; ಅವರು ತಮ್ಮ ಕಲ್ಪನೆಗಳಲ್ಲಿ ವಿಫಲರಾದರು ಮತ್ತು ಮೂರ್ಖತನದ ಅವರ ಹೃದಯವು ಕತ್ತಲಾ ಯಿತು.

ರೋಮಾಪುರದವರಿಗೆ 3:26

ತನ್ನ ನೀತಿಯನ್ನು ಈಗಿನ ಕಾಲದಲ್ಲಿ ಹೀಗೆ ತೋರಿಸಿ ತಾನು ನೀತಿವಂತನಾಗಿಯೂ ಯೇಸುವಿನಲ್ಲಿ ನಂಬಿಕೆಯಿಡುವವರನ್ನು ನೀತಿವಂತ ರೆಂದು ನಿರ್ಣಯಿಸುವವನಾಗಿಯೂ ಪ್ರಸಿದ್ಧಿಪಡಿಸಿ ಕೊಂಡನು.

ರೋಮಾಪುರದವರಿಗೆ 10:18

ಆದರೆ--ಅವರು ಕೇಳಲಿಲ್ಲವೇನು ಎಂದು ನಾನು ಕೇಳುತ್ತೇನೆ. ಹೌದು ನಿಜವೇ, ಅವರ ಧ್ವನಿಯು ಭೂಮಿಯಲ್ಲೆಲ್ಲಾ ಪ್ರಸರಿಸಿತು, ಅವರ ನುಡಿಗಳು ಲೋಕದ ಕಟ್ಟಕಡೆಯ ವರೆಗೂ ವ್ಯಾಪಿಸಿದವು.

ರೋಮಾಪುರದವರಿಗೆ 11:11

ಹಾಗಾದರೆ--ಅವರು ಬಿದ್ದುಹೋಗುವಂತೆ ಎಡವಿದರೆಂದು ನಾನು ಹೇಳಬೇಕೋ? ಹಾಗೆ ಎಂದಿಗೂ ಆಗಬಾರದು; ಆದರೆ ಅವರಲ್ಲಿ ಹುರುಡು ಹುಟ್ಟಿಸುವದಕ್ಕಾಗಿ ಅವರ ಬೀಳುವಿಕೆಯ ಮೂಲಕವೇ ಅನ್ಯಜನರಿಗೆ ರಕ್ಷಣೆಯುಂಟಾಯಿತು.

ರೋಮಾಪುರದವರಿಗೆ 11:14

ಹೀಗೆ ಯಾವ ವಿಧದಲ್ಲಿಯಾದರೂ ನನ್ನ ಸ್ವಜನರಲ್ಲಿ ಹುರುಡನ್ನು ಹುಟ್ಟಿಸಿ ಅವರಲ್ಲಿ ಕೆಲವರು ರಕ್ಷಣೆ ಹೊಂದುವಂತೆ ಮಾಡೇನು.

1 ಕೊರಿಂಥದವರಿಗೆ 1:12

ನಾನು ನಿಮಗೆ ಈಗ ಹೇಳುವದೇನಂದರೆ, ನಿಮ್ಮೊ ಳಗೆ ಪ್ರತಿಯೊಬ್ಬನು--ನಾನು ಪೌಲನವನು, ನಾನು ಅಪೊಲ್ಲೋಸನವನು, ನಾನು ಕೇಫನವನು, ನಾನು ಕ್ರಿಸ್ತನವನು ಎಂದು ಹೇಳಿಕೊಳ್ಳುತ್ತಾನಂತೆ.

1 ಕೊರಿಂಥದವರಿಗೆ 7:29

ಆದರೆ ಸಹೋದರರೇ, ನಾನು ಹೇಳುವದೇ ನಂದರೆ--ಸಮಯವು ಸಂಕೋಚವಾದದ್ದರಿಂದ ಇನ್ನು ಮೇಲೆ ಹೆಂಡತಿಯುಳ್ಳವರು ಹೆಂಡತಿಯಿಲ್ಲದವ ರಂತೆಯೂ

1 ಕೊರಿಂಥದವರಿಗೆ 10:19

ಹಾಗಾದರೆ ನಾನು ಏನು ಹೇಳಲಿ? ವಿಗ್ರಹವು ಏನಾದರೂ ವಿಶೇಷವೋ? ಇಲ್ಲವೆ ವಿಗ್ರಹಗಳಿಗೆ ಯಜ್ಞಾರ್ಪಣೆ ಮಾಡಿದ್ದು ಏನಾದರೂ ವಿಶೇಷವೋ?

1 ಕೊರಿಂಥದವರಿಗೆ 11:22

ಏನು, ನೀವು ಉಣ್ಣುವದಕ್ಕೂ ಕುಡಿಯುವದಕ್ಕೂ ಮನೆಗಳಿಲ್ಲದೆ ಇದ್ದೀರಾ? ಅಥವಾ ದೇವರ ಸಭೆಯನ್ನು ಅಸಡ್ಡೆಮಾಡಿ ಏನೂ ಇಲ್ಲದವರನ್ನು ನಾಚಿಕೆಪಡಿಸುತ್ತೀರಾ? ನಾನು ನಿಮಗೇನು ಹೇಳಲಿ? ಈ ವಿಷಯದಲ್ಲಿ ನಾನು ನಿಮ್ಮನ್ನು ಹೊಗಳಲೋ? ಹೊಗಳುವದಿಲ್ಲ.

1 ಕೊರಿಂಥದವರಿಗೆ 12:2

ನೀವು ಅನ್ಯರಾಗಿದ್ದಾಗ ನಿಮಗೆ ಪ್ರೇರಣೆಯಾದ ಹಾಗೆ ಮೂಕವಿಗ್ರಹಗಳ ಬಳಿಗೆ ಹೋಗುತ್ತಿದ್ದಿರೆಂದು ಬಲ್ಲಿರಿ.

1 ಕೊರಿಂಥದವರಿಗೆ 15:50

ಸಹೋದರರೇ, ನಾನು ಹೇಳುವದೇನಂದರೆ-- ಮಾಂಸವು ರಕ್ತವು ದೇವರ ರಾಜ್ಯಕ್ಕೆ ಬಾಧ್ಯವಾಗ ಲಾರವು; ಇಲ್ಲವೆ ಲಯವಾಗುವದು ನಿರ್ಲಯತ್ವಕ್ಕೆ ಬಾಧ್ಯವಾಗುವದಿಲ್ಲ.

ತೀತ 3:3

ನಾವು ಸಹ ಮೊದಲು ಅವಿವೇಕಿಗಳೂ ಅವಿಧೇಯರೂ ಮೋಸಹೋದ ವರೂ ನಾನಾ ವಿಧವಾದ ದುರಾಶೆಗಳಿಗೆ ಮತ್ತು ಭೋಗಗಳಿಗೆ ದಾಸರೂ ಕೆಟ್ಟತನ ಹೊಟ್ಟೇಕಿಚ್ಚುಗಳಲ್ಲಿ ಜೀವಿಸುವವರೂ ಅಸಹ್ಯರೂ ಒಬ್ಬರನ್ನೊಬ್ಬರು ಹಗೆ ಮಾಡುವವರೂ ಆಗಿದ್ದೆವು.

1 ಪೇತ್ರ 2:10

ಮೊದಲು ನೀವು ಪ್ರಜೆಯಾಗಿರಲಿಲ್ಲ, ಈಗ ದೇವರ ಪ್ರಜೆ ಯಾಗಿದ್ದೀರಿ; ಮೊದಲು ಕರುಣೆ ಹೊಂದಿರಲಿಲ್ಲ, ಈಗ ಕರುಣೆ ಹೊಂದಿದವರಾಗಿದ್ದೀರಿ.

Interlinear

Choose Theme