Home Bibles ರೋಮಾಪುರದವರಿಗೆ 12:5 · ಕನ್ನಡ ಬೈಬಲ್
ರೋಮಾಪುರದವರಿಗೆ 12:5 · ಕನ್ನಡ ಬೈಬಲ್

ಹಾಗೆಯೇ ಅನೇಕರಾದ ನಾವು ಕ್ರಿಸ್ತನಲ್ಲಿ ಒಂದೇ ದೇಹವಾಗಿದ್ದು ಒಬ್ಬರಿ ಗೊಬ್ಬರು ಪರಸ್ಪರ ಅಂಗಗಳಾಗಿದ್ದೇವೆ.

Cross references

ರೋಮಾಪುರದವರಿಗೆ 12:4

ನಮಗೆ ಒಂದೇ ದೇಹದಲ್ಲಿ ಬಹಳ ಅಂಗಗಳಿರಲಾಗಿ ಆ ಎಲ್ಲಾ ಅಂಗಗಳಿಗೆ ಹೇಗೆ ಒಂದೇ ಕೆಲಸವಿರುವದಿಲ್ಲವೋ

1 ಕೊರಿಂಥದವರಿಗೆ 10:17

ಅನೇಕರಾದ ನಾವು ಒಂದೇರೊಟ್ಟಿಯೂ ಒಂದೇದೇಹವೂ ಆಗಿದ್ದೇವೆ; ನಾವೆಲ್ಲರೂ ಆ ಒಂದೇ ರೊಟ್ಟಿಯಲ್ಲಿ ಪಾಲುಗಾರರಾಗಿದ್ದೇವೆ.

1 ಕೊರಿಂಥದವರಿಗೆ 10:33

ಇದಲ್ಲದೆ ನಾನಂತೂ ನನ್ನ ಸ್ವಪ್ರಯೊಜನವನ್ನೇ ನೋಡದೆ ಅನೇಕರು ರಕ್ಷಿಸಲ್ಪಡುವಂತೆ ಅವರ ಪ್ರಯೋಜನಕ್ಕಾಗಿ ಎಲ್ಲಾ ವಿಷಯಗಳಲ್ಲಿ ಎಲ್ಲರನ್ನು ಮೆಚ್ಚಿಸುತ್ತೇನೆ.

1 ಕೊರಿಂಥದವರಿಗೆ 12:12

ಹೇಗೆ ದೇಹವು ಒಂದಾಗಿದ್ದರೂ ಅದಕ್ಕಿರುವ ಅಂಗಗಳು ಅನೇಕವಾಗಿವೆಯೋ, ಹೇಗೆ ಆ ದೇಹದ ಅಂಗಗಳೆಲ್ಲವು ಅನೇಕವಾಗಿದ್ದು ಒಂದೇ ದೇಹವಾಗಿ ರುವದೋ, ಹಾಗೆಯೇ ಕ್ರಿಸ್ತನು ಇದ್ದಾನೆ.

1 ಕೊರಿಂಥದವರಿಗೆ 12:20

ಆದರೆ ಅಂಗಗಳೇನೋ ಅನೇಕ, ದೇಹವು ಒಂದೇ.

1 ಕೊರಿಂಥದವರಿಗೆ 12:27

ಈಗ ನೀವು ಕ್ರಿಸ್ತನ ದೇಹವಾಗಿದ್ದು ವಿಶೇಷ ವಾಗಿ ಅಂಗಗಳಾಗಿದ್ದೀರಿ.

ಎಫೆಸದವರಿಗೆ 1:23

ಸಭೆಯು ಆತನ ದೇಹವಾಗಿದೆ; ಎಲ್ಲವನ್ನು ಎಲ್ಲಾ ಸಂಬಂಧದಲ್ಲಿ ವ್ಯಾಪಿಸುವಾತನಿಂದ ಅದು ಪರಿಪೂರ್ಣತೆಯುಳ್ಳ ದಾಗಿದೆ.

ಎಫೆಸದವರಿಗೆ 4:25

ಆದ ಕಾರಣ ಸುಳ್ಳಾಡುವದನ್ನು ಬಿಟ್ಟು ಪ್ರತಿಯೊಬ್ಬನು ತನ್ನ ನೆರೆಯವನ ಸಂಗಡ ಸತ್ಯವನ್ನೇ ಆಡಲಿ; ಯಾಕಂದರೆ ನಾವು ಒಬ್ಬರಿಗೊಬ್ಬರು ಅಂಗಗಳಾಗಿದ್ದೇವಲ್ಲಾ.

ಎಫೆಸದವರಿಗೆ 5:23

ಕ್ರಿಸ್ತನು ಸಭೆಗೆ ತಲೆಯಾಗಿರುವ ಪ್ರಕಾರವೇ ಗಂಡನು ಹೆಂಡತಿಗೆ ತಲೆಯಾಗಿದ್ದಾನೆ. ಆತನು (ಕ್ರಿಸ್ತನು) ದೇಹಕ್ಕೆ ರಕ್ಷಕ ನಾಗಿದ್ದಾನೆ,

ಎಫೆಸದವರಿಗೆ 5:30

ನಾವು ಆತನ ದೇಹದ ಅಂಗಗಳೂ ಮಾಂಸವೂ ಎಲುಬುಗಳೂ ಆಗಿದ್ದೇವೆ.

ಕೊಲೊಸ್ಸೆಯವರಿಗೆ 1:24

ನಾನು ಈಗ ನಿಮಗೋಸ್ಕರ ಅನುಭವಿ ಸುತ್ತಿರುವ ಬಾಧೆಗಳಲ್ಲಿ ಸಂತೋಷಪಟ್ಟು ಕ್ರಿಸ್ತನ ಸಂಕಟ ಗಳೊಳಗೆ ಇನ್ನೂ ಉಳಿದದ್ದನ್ನು ಸಭೆಯೆಂಬ ಆತನ ದೇಹಕ್ಕೋಸ್ಕರ ನನ್ನ ಶರೀರದಲ್ಲಿ ಅನುಭವಿಸಿ ತೀರಿಸು ತ್ತೇನೆ.

ಕೊಲೊಸ್ಸೆಯವರಿಗೆ 2:19

ಇಂಥವನು (ಕ್ರಿಸ್ತನೆಂಬ) ಶಿರಸ್ಸಿನ ಹೊಂದಿಕೆಯನ್ನು ಬಿಟ್ಟವ ನಾಗಿದ್ದಾನೆ. ಆ ಶಿರಸ್ಸಿನಿಂದಲೇ ದೇಹವೆಲ್ಲಾ ಕೀಲು ನರಗಳ ಮೂಲಕ ಬೇಕಾದ ಸಹಾಯವನ್ನು ಹೊಂದಿ ಒಂದಾಗಿ ಜೋಡಿಸಲ್ಪಟ್ಟು ದೇವರು ಕೊಡುವ ವೃದ್ಧಿ ಯಿಂದ ಅಭಿವೃದ್ದಿಯಾಗುತ್ತಾ ಬರುತ್ತದೆ.

Interlinear

Choose Theme