Home Bibles ☰ Books ರೋಮಾಪುರದವರಿಗೆ 14:12 · ಕನ್ನಡ ಬೈಬಲ್
ರೋಮಾಪುರದವರಿಗೆ 14:12 · ಕನ್ನಡ ಬೈಬಲ್

ಹೀಗಿರಲಾಗಿ ನಮ್ಮಲ್ಲಿ ಪ್ರತಿಯೊಬ್ಬನು ತನ್ನ ತನ್ನ ವಿಷಯವಾಗಿ ದೇವರಿಗೆ ಲೆಕ್ಕ ಒಪ್ಪಿಸಬೇಕು.

Cross references

ಸಭಾಪ್ರಸಂಗಿ 11:9

ಓ ಯೌವನಸ್ಥನೇ, ನಿನ್ನ ಯೌವನದಲ್ಲಿ ಸಂತೋಷಪಡು. ನಿನ್ನ ಯೌವನದ ದಿನಗಳಲ್ಲಿ ನಿನ್ನ ಹೃದಯವು ನಿನ್ನನ್ನು ಆನಂದಪಡಿಸಲಿ; ನೀನು ನಿನ್ನ ಹೃದಯದ ಮಾರ್ಗಗಳಲ್ಲಿಯೂ ನಿನ್ನ ಕಣ್ಣುಗಳ ನೋಟ ದಲ್ಲಿಯೂ ನಡೆ; ಆ ಎಲ್ಲಾ ಸಂಗತಿಗಳಿಗಾಗಿ ದೇವರು ನಿನ್ನನ್ನು ನ್ಯಾಯತೀರ್ಪಿಗೆ ತರುವನೆಂದು ತಿಳಿದುಕೋ.ಆದಕಾರಣ ನಿನ್ನ ಹೃದಯದಿಂದ ದುಃಖವನ್ನು ತೆಗೆದು ಹಾಕು; ನಿನ್ನ ಶರೀರದಿಂದ ಕೆಟ್ಟದ್ದನ್ನು ತೆಗೆದುಬಿಡು; ಬಾಲ್ಯವೂ ಯೌವನವೂ ವ್ಯರ್ಥವಾಗಿವೆ.

ಮತ್ತಾಯ 12:36

ಆದರೆ ನಾನು ನಿಮಗೆ ಹೇಳುವದೇನಂದರೆ-- ಮನುಷ್ಯರು ಆಡುವ ಪ್ರತಿಯೊಂದು ವ್ಯರ್ಥವಾದ ಮಾತಿಗಾಗಿ ನ್ಯಾಯವಿಚಾರಣೆಯ ದಿನದಲ್ಲಿ ಅವರು ಲೆಕ್ಕಕೊಡಬೇಕು.

ಮತ್ತಾಯ 16:27

ಯಾಕಂದರೆ ಮನುಷ್ಯಕುಮಾರನು ತನ್ನ ತಂದೆಯ ಮಹಿಮೆಯಲ್ಲಿ ತನ್ನ ದೂತರೊಡನೆ ಬಂದಾಗ ಆತನು ಪ್ರತಿಯೊಬ್ಬ ನಿಗೂ ಅವನವನ ಕೆಲಸಗಳಿಗೆ ತಕ್ಕಂತೆ ಪ್ರತಿಫಲವನ್ನು ಕೊಡುವನು ಎಂದು ಹೇಳಿದನು.ನಿಮಗೆ ನಿಜವಾಗಿ ಹೇಳುವದೇನಂದರೆ--ಇಲ್ಲಿ ನಿಂತವರಲ್ಲಿ ಕೆಲವರು ಮನುಷ್ಯಕುಮಾರನು ತನ್ನ ರಾಜ್ಯದಲ್ಲಿ ಬರುವದನ್ನು ನೋಡುವವರೆಗೆ ಮರಣದ ರುಚಿಯನ್ನು ನೋಡುವದೇ ಇಲ್ಲ ಅಂದನು.

ಮತ್ತಾಯ 18:23

ಆದದರಿಂದ ಪರಲೋಕ ರಾಜ್ಯವು ತನ್ನ ಸೇವಕರಿಂದ ಲೆಕ್ಕವನ್ನು ತಕ್ಕೊಳ್ಳಬೇಕೆಂದಿದ್ದ ಒಬ್ಬ ಅರಸನಿಗೆ ಹೋಲಿಕೆಯಾಗಿದೆ.

ಲೂಕ 16:2

ಆಗ ಅವನು ಆ ಮನೆವಾರ್ತೆ ಯವನನ್ನು ಕರೆದು ಅವನಿಗೆ--ಇದೇನು ನಾನು ನಿನ್ನ ವಿಷಯದಲ್ಲಿ ಕೇಳುವದು? ಮನೆವಾರ್ತೆಯ ನಿನ್ನ ಲೆಕ್ಕವನ್ನು ಒಪ್ಪಿಸು; ಯಾಕಂದರೆ ನೀನು ಇನ್ನು ಮೇಲೆ ಮನೆವಾರ್ತೆಯವನಾಗಿರುವದಕ್ಕಾಗುವದಿಲ್ಲ ಅಂದನು.

ಗಲಾತ್ಯದವರಿಗೆ 6:5

ಪ್ರತಿಯೊಬ್ಬನು ತನ್ನ ಸ್ವಂತ ಹೊರೆಯನ್ನು ಹೊತ್ತುಕೊಳ್ಳ ಬೇಕು.

1 ಪೇತ್ರ 4:5

ಅವರು ಬದುಕುವ ವರಿಗೂ ಸತ್ತವರಿಗೂ ನ್ಯಾಯತೀರಿಸುವದಕ್ಕಾಗಿ ಸಿದ್ಧ ವಾಗಿರುವಾತನಿಗೆ ಲೆಕ್ಕ ಒಪ್ಪಿಸುವರು.

Interlinear

Choose Theme