ಸಂಶಯಪಟ್ಟು ಉಣ್ಣುವವನು ದಂಡಿಸಲ್ಪಡುವನು; ಯಾಕಂದರೆ ಅವನು ನಂಬಿಕೆಯಿಂದ ಉಣ್ಣುವದಿಲ್ಲ. ಯಾವದಕ್ಕೆ ನಂಬಿಕೆಯು ಆಧಾರವಿಲ್ಲವೋ ಅದು ಪಾಪ.
Cross references
ಆದದರಿಂದ ಅಧಿಕಾರಕ್ಕೆ ಎದುರುಬೀಳುವವನು ದೇವರ ನೇಮಕವನ್ನು ಎದುರಿಸುತ್ತಾನೆ; ಎದುರಿಸುವವರು ಶಿಕ್ಷೆಗೊಳಗಾಗು ವರು.
ಒಬ್ಬನು ಒಂದು ದಿವಸಕ್ಕಿಂತ ಮತ್ತೊಂದು ದಿವಸವನ್ನು ವಿಶೇಷವೆಂದು ಎಣಿಸುತ್ತಾನೆ. ಮತ್ತೊಬ್ಬನು ಎಲ್ಲಾ ದಿವಸಗಳನ್ನೂ ಒಂದೇ ರೀತಿಯಾಗಿ ಎಣಿಸುತ್ತಾನೆ; ಹೀಗಿರಲಾಗಿ ಪ್ರತಿಯೊಬ್ಬನು ತನ್ನ ಮನಸ್ಸಿ ನಲ್ಲಿ ನಿಶ್ಚಯಿಸಿಕೊಂಡಿರಲಿ.
ಆದರೆ ಆ ಜ್ಞಾನವು ಎಲ್ಲರಲ್ಲಿಯೂ ಇಲ್ಲ. ಕೆಲವರು ಈವರೆಗೂ ವಿಗ್ರಹದ ಬಳಿಗೆ ಹೋಗುವ ರೂಢಿಯಲ್ಲಿದ್ದದರಿಂದ ತಾವು ತಿನ್ನುವ ಪದಾರ್ಥಗಳನ್ನು ವಿಗ್ರಹಗಳಿಗೆ ಸಮರ್ಪಣೆ ಮಾಡಿದ್ದೆಂದು ತಿನ್ನುತ್ತಾರೆ; ಹೀಗೆ ಅವರ ಮನಸ್ಸು ಬಲಹೀನವಾಗಿರುವದರಿಂದ ಅಶುದ್ಧವಾಗಿದೆ.
ಯಾಕಂದರೆ ಕರ್ತನ ದೇಹವೆಂದು ವಿವೇಚಿಸದೆ ಅಯೋಗ್ಯವಾಗಿ ತಿಂದು ಕುಡಿಯುವವನು ಹಾಗೆ ತಿಂದು ಕುಡಿಯುವದರಿಂದ ನ್ಯಾಯತೀರ್ಪಿಗೊಳ ಗಾಗುವನು.
ಶುದ್ಧರಿಗೆ ಎಲ್ಲವೂ ಶುದ್ಧವೇ; ಆದರೆ ಮಲಿನವಾದವರಿಗೂ ನಂಬಿಕೆಯಿಲ್ಲ ದವರಿಗೂ ಯಾವದೂ ಶುದ್ಧವಲ್ಲ; ಆದರೆ ಅವರ ಬುದ್ಧಿಯೂ ಮನಸ್ಸಾಕ್ಷಿಯೂ ಕೂಡ ಮಲಿನವಾಗಿವೆ.ಅವರು ತಾವು ದೇವರನ್ನು ಅರಿತವರೆಂದು ಹೇಳಿ ಕೊಳ್ಳುತ್ತಾರೆ; ಆದರೆ ಅವರು ಅಸಹ್ಯರೂ ಅವಿಧೇಯ ರೂ ಸತ್ಕಾರ್ಯಗಳಿಗೆಲ್ಲಾ ಭ್ರಷ್ಟರೂ ಆಗಿರುವದರಿಂದ ದೇವರನ್ನು ತಮ್ಮ ಕೃತ್ಯಗಳಿಂದಲೇ ಅಲ್ಲಗಳೆಯುವರು.
ಆದರೆ ನಂಬಿಕೆಯಿಲ್ಲದೆ ದೇವರನ್ನು ಮೆಚ್ಚಿಸುವದು ಅಸಾಧ್ಯ; ಯಾಕಂದರೆ ದೇವರ ಬಳಿಗೆ ಬರುವವನು ದೇವರು ಇದ್ದಾನೆ, ತನ್ನನ್ನು ಜಾಗ್ರತೆಯಾಗಿ ಹುಡುಕು ವವನಿಗೆ ಪ್ರತಿಫಲವನ್ನು ಕೊಡುತ್ತಾನೆ ಎಂದು ನಂಬು ವದು ಅವಶ್ಯ.