Home Bibles ☰ Books ರೋಮಾಪುರದವರಿಗೆ 16:12 · ಕನ್ನಡ ಬೈಬಲ್
ರೋಮಾಪುರದವರಿಗೆ 16:12 · ಕನ್ನಡ ಬೈಬಲ್

ಕರ್ತನಲ್ಲಿ ಪ್ರಯಾಸಪ ಡುವ ತ್ರುಫೈನಳಿಗೂ ತ್ರುಫೋಸಳಿಗೂ ವಂದನೆಗಳು. ಕರ್ತನಲ್ಲಿ ಹೆಚ್ಚಾಗಿ ಪ್ರಯಾಸಪಟ್ಟಿರುವ ಪ್ರಿಯ ಪೆರ್ಸೀ ಸಳಿಗೆ ವಂದನೆ.

Cross references

ಮತ್ತಾಯ 9:38

ಆದದರಿಂದ ಬೆಳೆಯ ಯಜ ಮಾನನು ಕೆಲಸಗಾರರನ್ನು ತನ್ನ ಬೆಳೆಗೆ ಕಳುಹಿಸುವಂತೆ ಆತನನ್ನು ಪ್ರಾರ್ಥಿಸಿರಿ ಅಂದನು.

1 ಕೊರಿಂಥದವರಿಗೆ 15:10

ಆದರೆ ನಾನು ಎಂಥವನಾಗಿದ್ದೇನೋ ದೇವರ ಕೃಪೆಯಿಂದಲೇ ಅಂಥವನಾಗಿದ್ದೇನೆ; ನನಗುಂಟಾದ ಆತನ ಕೃಪೆಯು ನಿಷ್ಪಲವಾಗಲಿಲ್ಲ; ನಾನು ಅವರೆಲ್ಲರಿ ಗಿಂತಲೂ ಎಷ್ಟೋ ಹೆಚ್ಚಾಗಿ ಪ್ರಯಾಸಪಟ್ಟೆನು; ಆದರೆ ಪ್ರಯಾಸಪಟ್ಟವನು ನಾನಲ್ಲ, ನನ್ನೊಂದಿಗಿದ್ದ ದೇವರ ಕೃಪೆಯೇ.

1 ಕೊರಿಂಥದವರಿಗೆ 15:58

ಆದದರಿಂದ ನನ್ನ ಪ್ರಿಯ ಸಹೋದರರೇ, ಸ್ಥಿರಚಿತ್ತರಾಗಿಯೂ ನಿಶ್ಚಲರಾಗಿಯೂ ಇರ್ರಿ. ನೀವು ಕರ್ತನಲ್ಲಿ ಪಡುವ ಪ್ರಯಾಸವು ನಿಷ್ಪಲವಾಗುವದಿ ಲ್ಲವೆಂದು ತಿಳಿದು ಕರ್ತನ ಕೆಲಸವನ್ನು ಯಾವಾಗಲೂ ಅತ್ಯಾಸಕ್ತಿಯಿಂದ ಮಾಡುವವರಾಗಿರ್ರಿ.

1 ಕೊರಿಂಥದವರಿಗೆ 16:16

ಆದದರಿಂದ ಅಂಥವರಿಗೂ ನಮ್ಮೊಂದಿಗೆ ಸಹಾಯ ಮಾಡುತ್ತಾ ಪ್ರಯಾಸಪಡುವ ಪ್ರತಿಯೊಬ್ಬನಿಗೂ ನೀವು ಅಧೀನರಾಗಬೇಕೆಂದು ನಾನು ನಿಮ್ಮನ್ನು ಬೇಡಿ ಕೊಳ್ಳುತ್ತೇನೆ.

ಕೊಲೊಸ್ಸೆಯವರಿಗೆ 1:29

ನನ್ನಲ್ಲಿ ಬಲದಿಂದ ಕಾರ್ಯ ಮಾಡುವಾತನ ಕೆಲಸಕ್ಕನು ಸಾರವಾಗಿ ನಾನು ಸಹ ಅದಕ್ಕಾಗಿ ಪ್ರಯಾಸಪಡುತ್ತಾ ಹೋರಾಡುತ್ತೇನೆ.

ಕೊಲೊಸ್ಸೆಯವರಿಗೆ 4:12

ನಿಮ್ಮಲ್ಲಿ ಒಬ್ಬನಾದ ಕ್ರಿಸ್ತನ ಸೇವಕನಾಗಿರುವ ಎಪಫ್ರನು ನಿಮಗೆ ವಂದನೆ ಹೇಳುತ್ತಾನೆ. ನೀವು ಪರಿಪೂರ್ಣರಾಗಿಯೂ ಎಲ್ಲಾ ವಿಷಯಗಳಲ್ಲಿ ದೇವರ ಚಿತ್ತವನ್ನು ಕುರಿತು ಪೂರ್ಣ ನಿಶ್ಚಯವುಳ್ಳವರಾಗಿಯೂ ನಿಂತಿರಬೇಕೆಂದು ಇವನು ನಿಮಗೋಸ್ಕರ ಕಷ್ಟಪಟ್ಟು ಪ್ರಾರ್ಥನೆಗಳಲ್ಲಿ ಹೋರಾಡುತ್ತಾನೆ.

1 ತೆಸಲೋನಿಕದವರಿಗೆ 1:3

ನಂಬಿಕೆಯ ಫಲವಾದ ನಿಮ್ಮ ಕೆಲಸವನ್ನೂ ಪ್ರೀತಿಪೂರ್ವಕವಾದ ನಿಮ್ಮ ಪ್ರಯಾಸವನ್ನೂ ನಮ್ಮ ಕರ್ತನಾದ ಯೇಸು ಕ್ರಿಸ್ತನ ಮೇಲಣ ನಿರೀಕ್ಷೆಯಿಂದುಂಟಾದ ನಿಮ್ಮ ಸೈರಣೆ ಯನ್ನೂ ನಾವು ನಮ್ಮ ತಂದೆಯಾದ ದೇವರ ಮುಂದೆ ಎಡೆಬಿಡದೆ ಜ್ಞಾಪಕಮಾಡಿಕೊಳ್ಳುತ್ತೇವೆ.

1 ತೆಸಲೋನಿಕದವರಿಗೆ 5:12

ಸಹೋದರರೇ, ಯಾರು ನಿಮ್ಮಲ್ಲಿ ಪ್ರಯಾಸಪಟ್ಟು ಕರ್ತನ ಕಾರ್ಯಗಳಲ್ಲಿ ನಿಮ್ಮ ಮೇಲೆ ಮುಖ್ಯಸ್ಥರಾಗಿದ್ದು ನಿಮಗೆ ಬುದ್ಧಿಹೇಳುತ್ತಾರೋ ಅವರನ್ನು ಲಕ್ಷಿಸಿರಿ.

1 ತಿಮೋಥೆಯ 4:10

ಆದದರಿಂದ ಇದಕ್ಕಾಗಿ ನಾವು ಕಷ್ಟಪಡುವವರೂ ನಿಂದೆಯನ್ನನುಭವಿಸುವವರೂ ಆಗಿದ್ದೇವೆ; ಯಾಕಂದರೆ ಎಲ್ಲಾ ಮನುಷ್ಯರಿಗೆ ವಿಶೇಷವಾಗಿ ನಂಬುವವರಿಗೆ ರಕ್ಷಕನಾಗಿರುವ ಜೀವವುಳ್ಳ ದೇವರನ್ನು ನಾವು ನಂಬಿ ದ್ದೇವೆ.

1 ತಿಮೋಥೆಯ 5:17

ಚೆನ್ನಾಗಿ ಅಧಿಕಾರ ನಡಿಸುವ ಹಿರಿಯರನ್ನು, ಅವ ರೊಳಗೆ ವಿಶೇಷವಾಗಿ ವಾಕ್ಯದಲ್ಲಿಯೂ ಬೋಧನೆ ಯಲ್ಲಿಯೂ ಕಷ್ಟಪಡುವವರನ್ನು ಇಮ್ಮಡಿಯಾದ ಮಾನಕ್ಕೆ ಯೋಗ್ಯರೆಂದು ಎಣಿಸಬೇಕು.

ಹೆಬ್ರಿಯರಿಗೆ 6:10

ನೀವು ಪರಿಶುದ್ಧರಿಗೆ ಉಪಚಾರ ಮಾಡಿದಿರಿ, ಇನ್ನು ಮಾಡುತ್ತಾ ಇದ್ದೀರಿ. ಈ ನಿಮ್ಮ ಕೆಲಸವನ್ನೂ ಇದರಲ್ಲಿ ನೀವು ಆತನ ನಾಮದ ವಿಷಯವಾಗಿ ತೋರಿಸಿದ ಪ್ರೀತಿಯ ಪ್ರಯಾಸವನ್ನೂ ಮರೆಯು ವದಕ್ಕೆ ದೇವರು ಅನ್ಯಾಯಸ್ಥನಲ್ಲ.

Interlinear

Choose Theme