Home Bibles ರೋಮಾಪುರದವರಿಗೆ 16:13 · ಕನ್ನಡ ಬೈಬಲ್
ರೋಮಾಪುರದವರಿಗೆ 16:13 · ಕನ್ನಡ ಬೈಬಲ್

ಕರ್ತನಲ್ಲಿ ಆರಿಸಲ್ಪಟ್ಟ ರೂಫನಿಗೂ ನನಗೆ ತಾಯಿಯಂತಿರುವ ಅವನ ತಾಯಿಗೂ ವಂದನೆ ಗಳು.

Cross references

ಮತ್ತಾಯ 12:49

ಇಗೋ, ನನ್ನ ತಾಯಿಯು ಮತ್ತು ನನ್ನ ಸಹೋದರರು!ಪರಲೋಕದಲ್ಲಿರುವ ನನ್ನ ತಂದೆಯ ಚಿತ್ತದಂತೆ ಮಾಡುವವನೇ ನನ್ನ ಸಹೋದರನೂ ಸಹೋದರಿ ಯೂ ತಾಯಿಯೂ ಆಗಿದ್ದಾರೆ ಅಂದನು.

ಮತ್ತಾಯ 20:16

ಹೀಗೆ ಕಡೆಯವರು ಮೊದಲನೆಯವರಾಗುವರು; ಮೊದಲನೆಯವರು ಕಡೆಯವರಾಗುವರು. ಯಾಕಂದರೆ ಕರೆಯಲ್ಪಟ್ಟವರು ಅನೇಕರು; ಆದರೆ ಆಯಲ್ಪಟ್ಟವರು ಸ್ವಲ್ಪ ಜನ ಎಂದು ಹೇಳಿದನು.

ಮಾರ್ಕ 3:35

ಯಾಕಂದರೆ ಯಾವನು ದೇವರ ಚಿತ್ತದಂತೆ ಮಾಡುವನೋ ಅವನೇ ನನ್ನ ಸಹೋದರನೂ ನನ್ನ ಸಹೋದರಿಯೂ ನನ್ನ ತಾಯಿಯೂ ಆಗಿದ್ದಾರೆ ಅಂದನು.

ಮಾರ್ಕ 15:21

ಅಲೆಕ್ಸಾಂದ್ರ ಮತ್ತು ರೂಫ ಎಂಬವರ ತಂದೆಯಾದ ಕುರೇನ್ಯದ ಸೀಮೋನ ಎಂಬವನು ಗ್ರಾಮದಿಂದ ಬಂದು ಹಾದುಹೋಗುತ್ತಿರುವಾಗ ಆತನ ಶಿಲುಬೆಯನ್ನು ಹೊರುವಂತೆ ಅವರು ಅವನನ್ನು ಬಲವಂತ ಮಾಡಿದರು.

ಯೋಹಾನ 15:16

ನೀವು ನನ್ನನ್ನು ಆರಿಸಿಕೊಂಡಿಲ್ಲ; ಆದರೆ ನಾನು ನಿಮ್ಮನ್ನು ಆರಿಸಿ ಕೊಂಡು, ನೀವು ಹೋಗಿ ಫಲಕೊಡುವಂತೆಯೂ ನಿಮ್ಮ ಫಲವು ನೆಲೆಗೊಂಡಿರುವಂತೆಯೂ ನಿಮ್ಮನ್ನು ನೇಮಿಸಿದ್ದೇನೆ. ಆದಕಾರಣ ನೀವು ನನ್ನ ಹೆಸರಿನಲ್ಲಿ ತಂದೆಯನ್ನು ಏನು ಕೇಳಿಕೊಂಡರೂ ಆತನು ಅದನ್ನು ನಿಮಗೆ ಕೊಡುವನು.

ಯೋಹಾನ 19:27

ಆಮೇಲೆ ಆತನು ಆ ಶಿಷ್ಯನಿಗೆ--ಇಗೋ, ನಿನ್ನ ತಾಯಿಯು ಅಂದನು. ಆ ಗಳಿಗೆಯಿಂದ ಆ ಶಿಷ್ಯನು ಆಕೆಯನ್ನು ತನ್ನ ಸ್ವಂತ ಮನೆಯಲ್ಲಿ ಸೇರಿಸಿಕೊಂಡನು.

ಎಫೆಸದವರಿಗೆ 1:4

ನಾವು ಪ್ರೀತಿಯಲ್ಲಿದ್ದು ಆತನ ಸನ್ನಿಧಿಯಲ್ಲಿ ಪರಿಶುದ್ಧರೂ ನಿರ್ದೋಷಿಗಳೂ ಆಗಿರಬೇಕೆಂದು ಆತನು ಜಗತ್ತಿಗೆ ಅಸ್ತಿವಾರ ಹಾಕುವದಕ್ಕಿಂತ ಮುಂಚೆ ನಮ್ಮನು ಕ್ರಿಸ್ತನಲ್ಲಿ) ಆರಿಸಿಕೊಂಡನು.

2 ತೆಸಲೋನಿಕದವರಿಗೆ 2:13

ಕರ್ತನಿಗೆ ಪ್ರಿಯರಾಗಿರುವ ಸಹೊದರರೇ, ನೀವು ಆತ್ಮನಿಂದ ಶುದ್ಧೀಕರಿಸಲ್ಪಟ್ಟವರಾಗಿ ಸತ್ಯದ ಮೇಲೆ ನಂಬಿಕೆಯನ್ನಿಟ್ಟು ರಕ್ಷಣೆಯನ್ನು ಪಡೆಯುವದಕ್ಕಾಗಿ ದೇವರು ನಿಮ್ಮನ್ನು ಆದಿಯಿಂದ ಆರಿಸಿಕೊಂಡದ್ದರಿಂದ ನಾವು ನಿಮ್ಮ ವಿಷಯದಲ್ಲಿ ಯಾವಾಗಲೂ ದೇವರಿಗೆ ಕೃತಜ್ಞತಾಸ್ತುತಿ ಮಾಡುವದಕ್ಕೆ ಬದ್ದರಾಗಿದ್ದೇವೆ

1 ತಿಮೋಥೆಯ 5:2

ವೃದ್ಧಸ್ತ್ರೀಯರನ್ನು ತಾಯಂದಿ ರೆಂದೂ ಯೌವನ ಸ್ತ್ರೀಯರನ್ನು ಪೂರ್ಣ ಪವಿತ್ರತೆ ಯಿಂದ ಸಹೋದರಿಯರೆಂದೂ ಎಣಿಸಿ ಅವರವರಿಗೆ ಬುದ್ಧಿಹೇಳು.

2 ಯೋಹಾನ 1:1

ಆಯಲ್ಪಟ್ಟವಳಾದ ಅಮ್ಮನವರಿಗೂ ಆಕೆಯ ಮಕ್ಕಳಿಗೂ ಹಿರಿಯನಾದ--ಸತ್ಯದಲ್ಲಿ ನಿಮ್ಮನ್ನು ಪ್ರೀತಿಸುತ್ತೇನೆ; ನಾನು ಮಾತ್ರವಲ್ಲದೆ ಸತ್ಯವನ್ನು ತಿಳಿದಿರುವವರೆಲ್ಲರೂ ನಿಮ್ಮನ್ನು ಪ್ರೀತಿಸುತ್ತಾರೆ.

Interlinear

Choose Theme