ಫಿಲೊಲೊಗನಿಗೂ ಯೂಲ್ಯಳಿಗೂ ನೇರ್ಯನಿಗೂ ಅವನ ಸಹೋದರರಿಗೂ ಒಲುಂಪನಿಗೂ ಅವರೊಂದಿ ಗಿರುವ ಪರಿಶುದ್ಧರೆಲ್ಲರಿಗೂ ವಂದನೆಗಳು.
Cross references
ನಿನ್ನ ಜನರೆಲ್ಲರು ನೀತಿವಂತರಾಗಿರುವರು, ದೇಶವನ್ನು ಸದಾ ಕಾಲಕ್ಕೆ ಸ್ವಾಧೀನ ಮಾಡಿಕೊಳ್ಳುವರು; ನಾನು ಮಹಿಮೆ ಹೊಂದುವದಕ್ಕೋಸ್ಕರ ನಾನು ನೆಟ್ಟ ಕೊಂಬೆಯೂ ನನ್ನ ಕೈ ಸೃಷ್ಟಿಯೂ ದೇಶವನ್ನು ಸದಾ ಅನುಭವಿಸುವರು.ಚಿಕ್ಕವನಿಂದ ಸಾವಿರವಾಗುವರು. ಅಲ್ಪನಿಂದ ಬಲ ವಾದ ಜನಾಂಗವಾಗುವದು; ಕರ್ತನೆಂಬ ನಾನು ಕ್ಲುಪ್ತಕಾಲದಲ್ಲಿ ಇದನ್ನು ಬಹು ಬೇಗನೆ ಉಂಟು ಮಾಡುವೆನು.
ಇದಲ್ಲದೆ ದೇವರಿಗೆ ಪ್ರಿಯ ರಾಗಿದ್ದು ಪರಿಶುದ್ಧರಾಗುವದಕ್ಕೆ ಕರೆಯಲ್ಪಟ್ಟ ರೋಮ್ ನಲ್ಲಿರುವವರೆಲ್ಲರಿಗೆ ನಮ್ಮ ತಂದೆಯಾದ ದೇವ ರಿಂದಲೂ ಕರ್ತನಾದ ಯೇಸು ಕ್ರಿಸ್ತನಿಂದಲೂ ನಿಮಗೆ ಕೃಪೆಯೂ ಸಮಾಧಾನವೂ ಉಂಟಾಗಲಿ.
ನೀವು ಆಕೆಯನ್ನು ಪರಿಶುದ್ಧರಿಗೆ ತಕ್ಕಂತೆ ಕರ್ತನಲ್ಲಿ ಅಂಗೀಕರಿಸಿ ಆಕೆಯ ಕೆಲಸದಲ್ಲಿ ಆಕೆಗೆ ಅವಶ್ಯವಾದ ಸಹಾಯವನ್ನು ಮಾಡಿರಿ; ಆಕೆಯು ನನಗೂ ಅನೇಕರಿಗೂ ಸಹಾಯ ಮಾಡಿದವಳಾಗಿದ್ದಾಳೆ.
ಅಸುಂಕ್ರಿತನಿಗೂ ಪ್ಲೆಗೋನನಿಗೂ ಹೆರ್ಮೇ ಯನಿಗೂ ಪತ್ರೋಬನಿಗೂ ಹೆರ್ಮಾನನಿಗೂ ಅವ ರೊಂದಿಗಿರುವ ಸಹೋದರರಿಗೂ ವಂದನೆಗಳು.
ದೇವರ ಚಿತ್ತಾನುಸಾರವಾಗಿ ಯೇಸು ಕ್ರಿಸ್ತನ ಅಪೊಸ್ತಲನಾದ ಪೌಲನು ಎಫೆಸ ದಲ್ಲಿರುವ ಪರಿಶುದ್ಧರಿಗೂ ಕ್ರಿಸ್ತ ಯೇಸುವಿನಲ್ಲಿ ನಂಬಿಗಸ್ತರಿಗೂ--
ಪವಿತ್ರಾತ್ಮನಿಂದ ಪ್ರತಿಷ್ಟಿಸಲ್ಪಟ್ಟವರಾಗಿ ವಿಧೇಯರಾ ಗುವದಕ್ಕೂ ಯೇಸು ಕ್ರಿಸ್ತನ ರಕ್ತದಿಂದ ಪ್ರೋಕ್ಷಿತರಾಗು ವದಕ್ಕೂ ತಂದೆಯಾದ ದೇವರ ಭವಿಷ್ಯದ್ ಜ್ಞಾನಾನು ಸಾರವಾಗಿ ಆರಿಸಿಕೊಳ್ಳಲ್ಪಟ್ಟವರಿಗೆ ಬರೆಯುವದೇ ನಂದರೆ--ನಿಮಗೆ ಕೃಪೆಯೂ ಶಾಂತಿಯೂ ಹೆಚ್ಚೆಚ್ಚಾಗಿ ದೊರೆಯಲಿ.