ಅದರಂತೆಯೇ ಅವರ ಮನೆಯಲ್ಲಿರುವ ಸಭೆಗೂ ವಂದನೆ ಹೇಳಿರಿ; ಅಖಾಯದಲ್ಲಿ ಕ್ರಿಸ್ತನಿಗೆ ಪ್ರಥಮ ಫಲವಾಗಿರುವ ನನ್ನ ಪ್ರಿಯನಾದ ಎಪೈನೆತನಿಗೂ ವಂದನೆ.
Cross references
ಯಾಕಂದರೆ ಇಬ್ಬರಾಗಲೀ ಮೂವರಾಗಲೀ ನನ್ನ ಹೆಸರಿನಲ್ಲಿ ಎಲ್ಲಿ ಕೂಡಿಬರುತ್ತಾರೋ ಅವರ ಮಧ್ಯ ದಲ್ಲಿ ನಾನು ಇದ್ದೇನೆ ಅಂದನು.
ಗಲ್ಲಿಯೋನನು ಅಖಾಯದ ಪ್ರತಿನಿಧಿ ಯಾಗಿದ್ದಾಗ ಯೆಹೂದ್ಯರು ಒಮ್ಮನಸ್ಸಿನಿಂದ ಪೌಲನಿಗೆ ವಿರೋಧವಾಗಿ ಧಂಗೆ ಎಬ್ಬಿಸಿ ನ್ಯಾಯಸ್ಥಾನದ ಮುಂದೆ ಹಿಡುಕೊಂಡು ಬಂದು--
ಅವನು ಅಖಾಯಕ್ಕೆ ಹೋಗಬೇಕೆಂದು ಮನಸ್ಸು ಮಾಡಿದಾಗ ಅಲ್ಲಿದ್ದ ಶಿಷ್ಯರು ಅವನನ್ನು ಸೇರಿಸಿಕೊಳ್ಳಬೇಕೆಂದು ಪ್ರೋತ್ಸಾಹ ಮಾಡಿ ಸಹೋದರರು ಅವರಿಗೆ ಬರೆದರು; ಅವನು ಅಲ್ಲಿಗೆ ಬಂದು ಕೃಪೆಯಿಂದ ನಂಬಿದ್ದವರಿಗೆ ಹೆಚ್ಚಾಗಿ ಸಹಾಯ ಮಾಡಿದನು;ಹೇಗಂದರೆ ಯೇಸುವೇ ಕ್ರಿಸ್ತನೆಂದು ಅವನು ಬರಹಗಳಿಂದ ತೋರಿಸಿ ಬಹಿ ರಂಗದಲ್ಲಿ ಯೆಹೂದ್ಯರು ಬಲವಾಗಿ ಒಪ್ಪಿಕೊಳ್ಳುವಂತೆ ಮಾಡಿದನು.
ಪ್ರಥಮ ಫಲವು ಪವಿತ್ರವಾಗಿದ್ದರೆ ಕಣಕವೂ ಪವಿತ್ರವಾಗಿದೆ ಮತ್ತು ಬೇರು ಪವಿತ್ರವಾಗಿದ್ದರೆ ಕೊಂಬೆಗಳೂ ಪವಿತ್ರವಾಗಿವೆ.
ಯೆರೂಸಲೇಮಿನಲ್ಲಿರುವ ಬಡವ ರಾದ ಪರಿಶುದ್ಧರಿಗೆ ಸ್ವಲ್ಪ ಸಹಾಯಮಾಡಲು ಮಕೆದೋನ್ಯ ಮತ್ತು ಅಖಾಯದವರು ಇಷ್ಟಪಟ್ಟಿದ್ದಾರೆ.
ಕರ್ತನಲ್ಲಿ ನನ್ನ ಪ್ರಿಯನಾಗಿರುವ ಅಂಪ್ಲಿಯಾತನಿಗೆ ವಂದನೆ.
ಕರ್ತನಲ್ಲಿ ಪ್ರಯಾಸಪ ಡುವ ತ್ರುಫೈನಳಿಗೂ ತ್ರುಫೋಸಳಿಗೂ ವಂದನೆಗಳು. ಕರ್ತನಲ್ಲಿ ಹೆಚ್ಚಾಗಿ ಪ್ರಯಾಸಪಟ್ಟಿರುವ ಪ್ರಿಯ ಪೆರ್ಸೀ ಸಳಿಗೆ ವಂದನೆ.
ಸ್ತೆಫನನ ಮನೆಯವರು ಅಕಾಯದ ಪ್ರಥಮ ಫಲವೆಂದೂ ಅವರು ಪರಿಶುದ್ಧರ ಸೇವೆಯಲ್ಲಿ ತಮ್ಮನ್ನು ಒಪ್ಪಿಸಿಕೊಟ್ಟಿದ್ದರೆಂದೂ ನಿಮಗೆ ತಿಳಿದದೆ.
ಆಸ್ಯ ಸಭೆಗಳವರು ನಿಮಗೆ ವಂದನೆ ಹೇಳುತ್ತಾರೆ. ಅಕ್ವಿಲನೂ ಪ್ರಿಸ್ಕಿಲ್ಲಳೂ ತಮ್ಮ ಮನೆಯಲ್ಲಿ ಕೂಡುವ ಸಭೆಯವರೊಂದಿಗೆ ಕರ್ತನಲ್ಲಿ ಅನೇಕ ವಂದನೆಗಳನ್ನು ಹೇಳುತ್ತಾರೆ.
ದೇವರ ಚಿತ್ತಾನುಸಾರ ಯೇಸು ಕ್ರಿಸ್ತನ ಅಪೊಸ್ತಲನಾದ ಪೌಲನು ಮತ್ತು ನಮ್ಮ ಸಹೋದರನಾದ ತಿಮೊಥೆಯನು ಕೊರಿಂಥದಲ್ಲಿರುವ ದೇವರ ಸಭೆಗೂ ಅಕಾಯದಲ್ಲಿರುವ ಪರಿಶುದ್ಧರೆ ಲ್ಲರಿಗೂ ಬರೆಯುವದೇನಂದರೆ
ನಿಮ್ಮ ಮನಸ್ಸು ಸಿದ್ದವಾಗಿದೆ ಎಂಬದು ನನಗೆ ಗೊತ್ತುಂಟು; ಒಂದು ವರುಷದ ಹಿಂದೆ ಅಕಾಯದವರು ಸಹಾಯಮಾಡುವದಕ್ಕೆ ಸಿದ್ಧವಾಗಿ ದ್ದರೆಂದು ಮಕೆದೋನ್ಯದವರ ಮುಂದೆ ನಿಮ್ಮನ್ನು ಹೊಗಳುತ್ತಾ ಇದ್ದೇನೆ; ನಿಮ್ಮ ಆಸಕ್ತಿಯು ಬಹು ಜನರನ್ನು ಪ್ರೇರೇಪಿಸಿತು.
ಲವೊದಿಕೀಯದಲ್ಲಿರುವ ಸಹೋದರ ರಿಗೂ ನುಂಫನಿಗೂ ಅವನ ಮನೆಯಲ್ಲಿರುವ ಸಭೆಗೂ ವಂದನೆ ಹೇಳಿರಿ.
ನಮ್ಮ ಪ್ರಿಯ ಅಪ್ಫಿಯಳಿಗೂ ನಮ್ಮ ಸಹಭಟನಾದ ಅರ್ಖಿಪ್ಪನಿಗೂ ನಿನ್ನ ಮನೆಯಲ್ಲಿ ಕೂಡುವ ಸಭೆಯವರಿಗೂ ಬರೆಯುವದೇನಂದರೆ--
ಆತನು ತನ್ನ ಚಿತ್ತದ ಪ್ರಕಾರ ಸತ್ಯವಾಕ್ಯದಿಂದ ನಮ್ಮನ್ನು ಹುಟ್ಟಿಸಿರಲಾಗಿ ನಾವು ಆತನ ಸೃಷ್ಟಿಗಳಲ್ಲಿ ಒಂದು ತರಹದ ಪ್ರಥಮ ಫಲ ಗಳಂತಾದೆವು.
ಹಿರಿಯನಾದ ಸತ್ಯದಲ್ಲಿ ಬಹಳವಾಗಿ ಪ್ರೀತಿಸುವ ಗಾಯನಿಗೆ--
ಸ್ತ್ರೀಯ ರೊಂದಿಗೆ ಮಲಿನರಾಗದವರು ಇವರೇ. ಯಾಕಂದರೆ ಇವರು ಕನ್ನಿಕೆಯರು. ಕುರಿಮರಿಯಾದಾತನು ಎಲ್ಲಿಗೆ ಹೋದರೂ ಆತನ ಹಿಂದೆ ಹೋಗುವವರು ಇವರೇ. ದೇವರಿಗೂ ಕುರಿಮರಿಯಾದಾತನಿಗೂ ಪ್ರಥಮ ಫಲ ವಾಗಿರುವ ಇವರು ಮನುಷ್ಯರೊಳಗಿಂದ ವಿಮೋಚಿಸ ಲ್ಪಟ್ಟವರು.