Home Bibles ರೋಮಾಪುರದವರಿಗೆ 4:12 · ಕನ್ನಡ ಬೈಬಲ್
ರೋಮಾಪುರದವರಿಗೆ 4:12 · ಕನ್ನಡ ಬೈಬಲ್

ಇದಲ್ಲದೆ ಸುನ್ನತಿಯಿದ್ದವರಿಗೆ ತಂದೆಯಾದವನು ಸುನ್ನತಿಯವರಿಗೆ ಮಾತ್ರವಲ್ಲ, ಆದರೆ ಅಬ್ರಹಾಮನು ಸುನ್ನತಿ ಮಾಡಿಸಿಕೊಳ್ಳುವದಕ್ಕೆ ಮುಂಚೆ ನಡೆದ ನಂಬಿಕೆಯ ಹೆಜ್ಜೆಜಾಡಿನಲ್ಲಿ ನಡೆಯುತ್ತಿರುವ ಸುನ್ನತಿ ಯಿಲ್ಲದವರಿಗೂ ತಂದೆಯಾಗಿದ್ದಾನೆ.

Cross references

ಯೋಬ 33:11

ಆತನು ನನ್ನ ಕಾಲುಗಳನ್ನು ಕೊಳಕ್ಕೆ ಸೇರಿಸಿದ್ದಾನೆ; ನನ್ನ ಹಾದಿಗಳನ್ನೆಲ್ಲಾ ಗುರುತಿಸುತ್ತಾನೆ.

ಸಾಮೇತಿಗಳು 2:20

ಒಳ್ಳೆಯವರ ಮಾರ್ಗದಲ್ಲಿ ನೀನು ನಡೆಯು ವಂತೆಯೂ ನೀತಿವಂತರ ದಾರಿಗಳನ್ನು ನೀನು ಹಿಡಿಯು ವಂತೆಯೂ ಅದು ನಿನ್ನನ್ನು ನಡಿಸುವದು.

ಪರಮಗೀತ 1:8

ಓ ಸ್ತ್ರೀಯರಲ್ಲಿ ಸೌಂದರ್ಯವಂತಳೇ, ನೀನು ತಿಳಿಯದೆ ಇದ್ದರೆ ನೀನು ಮಂದೆಯ ಜಾಡೆಯನ್ನು ಹಿಡಿದು ಹೊರಟುಹೋಗಿ ಕುರುಬರ ಗುಡಾರಗಳ ಬಳಿಯಲ್ಲಿ ನಿನ್ನ ಮೇಕೆಯ ಮರಿಗಳನ್ನು ಮೇಯಿಸು.

ಮತ್ತಾಯ 3:9

ಮತ್ತು -- ಅಬ್ರಹಾಮನು ನಮಗೆ ತಂದೆಯಾಗಿದ್ದಾನೆ ಎಂದು ನಿಮ್ಮ ನಿಮ್ಮೊಳಗೆ ಅಂದು ಕೊಳ್ಳಬೇಡಿರಿ; ಯಾಕಂದರೆ ದೇವರು ಅಬ್ರಹಾಮನಿಗೆ ಈ ಕಲ್ಲುಗಳಿಂದ ಮಕ್ಕಳನ್ನು ಎಬ್ಬಿಸ ಶಕ್ತನೆಂದು ನಾನು ನಿಮಗೆ ಹೇಳುತ್ತೇನೆ.

ಲೂಕ 16:23

ಆಗ ಅವನು ಪಾತಾಳದೊಳಗೆ ಯಾತನೆಯಲ್ಲಿ ದ್ದವನಾಗಿ ತನ್ನ ಕಣ್ಣುಗಳನ್ನು ಮೇಲಕ್ಕೆತ್ತಿ ದೂರದಿಂದ ಅಬ್ರಹಾಮನನ್ನೂ ಅವನ ಎದೆಯಲ್ಲಿದ್ದ ಲಾಜರನನೂ ನೋಡಿದನು.

ಯೋಹಾನ 8:39

ಅವರು ಪ್ರತ್ಯುತ್ತರವಾಗಿ ಆತನಿಗೆ--ಅಬ್ರಹಾಮನು ನಮ್ಮ ತಂದೆ ಅಂದರು; ಅದಕ್ಕೆ ಯೇಸು ಅವರಿಗೆ--ನೀವು ಅಬ್ರಹಾಮನ ಮಕ್ಕಳಾಗಿದ್ದರೆ ಅಬ್ರಹಾಮನ ಕ್ರಿಯೆಗಳನ್ನು ಮಾಡು ತ್ತಿದ್ದಿರಿ.

ರೋಮಾಪುರದವರಿಗೆ 9:6

ದೇವರ ಮಾತು ನಿರರ್ಥಕವಾಯಿತೆಂತಲ್ಲ; ಯಾಕಂದರೆ ಇಸ್ರಾಯೇಲ್ಯರಿಗೆ ಸಂಬಂಧಪಟ್ಟವ ರೆಲ್ಲರೂ ಇಸ್ರಾಯೇಲ್ಯರಲ್ಲ;

2 ಕೊರಿಂಥದವರಿಗೆ 12:18

ನಾನು ತೀತನನ್ನು ಅಪೇಕ್ಷಿಸಿ ಅವನ ಜೊತೆಯಲ್ಲಿ ಒಬ್ಬ ಸಹೋದರನನ್ನು ಕಳುಹಿಸಿಕೊಟ್ಟೆನು; ತೀತನು ನಿಮ್ಮಿಂದ ಏನಾದರೂ ಲಾಭವನ್ನು ಪಡೆದು ಕೊಂಡನೋ? ನಾವಿಬ್ಬರೂ ಒಂದೇ ಆತ್ಮನಿಂದ ನಡೆಯಲಿಲ್ಲವೋ? ನಾವು ಒಂದೇ ತರವಾದ ಹೆಜ್ಜೆ ಜಾಡಿನಲ್ಲಿ ನಡೆಯಲಿಲ್ಲವೋ?

ಗಲಾತ್ಯದವರಿಗೆ 4:22

ಯಾಕಂದರೆ ದಾಸಿಯಿಂದ ಒಬ್ಬನು, ಸ್ವತಂತ್ರಳಿಂದ ಒಬ್ಬನು ಹೀಗೆ ಅಬ್ರಹಾಮನಿಗೆ ಇಬ್ಬರು ಪುತ್ರರಿದ್ದರೆಂದು ಬರೆಯಲ್ಪಟ್ಟಿದೆ.

1 ಪೇತ್ರ 2:21

ಇದ ಕ್ಕಾಗಿಯೇ ನೀವು ಕರೆಯಲ್ಪಟ್ಟಿರಿ; ಕ್ರಿಸ್ತನು ಸಹ ನಮಗೋಸ್ಕರ ಬಾಧೆಯನ್ನನುಭವಿಸಿ ನೀವು ತನ್ನ ಹೆಜ್ಜೆಯ ಜಾಡಿನಲ್ಲಿ ನಡೆಯಬೇಕೆಂದು ನಮಗೆ ಮಾದರಿಯನ್ನು ಬಿಟ್ಟು ಹೋದನು.

Interlinear

Choose Theme