Home Bibles ರೋಮಾಪುರದವರಿಗೆ 4:3 · ಕನ್ನಡ ಬೈಬಲ್
ರೋಮಾಪುರದವರಿಗೆ 4:3 · ಕನ್ನಡ ಬೈಬಲ್

ಹಾಗಾದರೆ ಬರಹವು ಹೇಳುವ ದೇನು? ಅಬ್ರಹಾಮನು ದೇವರನ್ನು ನಂಬಿದನು; ಆ ನಂಬಿಕೆಯು ಅವನ ಲೆಕ್ಕಕ್ಕೆ ನೀತಿ ಎಂದು ಎಣಿಸಲ್ಪಟ್ಟಿತು.

Cross references

ಆದಿಕಾಂಡ 15:6

ಅಬ್ರಾ ಮನು ಕರ್ತನಲ್ಲಿ ನಂಬಿಕೆಯಿಟ್ಟನು. ಆತನು ಅದನ್ನು ಅವನಿಗೆ ನೀತಿ ಎಂದು ಎಣಿಸಿದನು.

ಕೀರ್ತನೆಗಳು 106:31

ಇದು ತಲತಲಾಂತರಕ್ಕೂ ಯುಗ ಯುಗಕ್ಕೂ ಆತನಿಗೆ ನೀತಿಯೆಂದು ಎಣಿಸಲ್ಪಟ್ಟಿತು.

ಯೆಶಾಯ 8:20

ನ್ಯಾಯಪ್ರಮಾಣ ಮತ್ತು ಸಾಕ್ಷಿಯ ವಿಷಯದಲ್ಲಿ ಈ ವಾಕ್ಯದ ಪ್ರಕಾರ ಹೇಳದಿರು ವದು ಅವರಲ್ಲಿ ಬೆಳಕಿಲ್ಲದ್ದರಿಂದಲೇ.

ಮತ್ತಾಯ 20:9

ಸುಮಾರು ಹನ್ನೊಂದನೆ ಯ ತಾಸಿನಲ್ಲಿ ಕರೆಯಲ್ಪಟ್ಟವರಾದ ಪ್ರತಿಯೊಬ್ಬನು ಒಂದೊಂದು ಪಾವಲಿಯನ್ನು ಹೊಂದಿದನು.

ಮಾರ್ಕ 12:10

ಕಟ್ಟುವವರು ತಿರಸ್ಕರಿಸಿದ ಕಲ್ಲೇ ಮುಖ್ಯವಾದ ಮೂಲೆಗಲ್ಲಾಯಿತು.

ರೋಮಾಪುರದವರಿಗೆ 4:5

ಆದರೆ ಯಾವನು ಪುಣ್ಯಕ್ರಿಯೆಗಳನ್ನು ಮಾಡಿದವನಾಗಿರದೆ ಭಕ್ತಿಹೀನರನ್ನು ನೀತಿವಂತರೆಂದು ನಿರ್ಣಯಿಸುವಾತನಲ್ಲಿ ನಂಬಿಕೆ ಯಿಡುತ್ತಾನೋ ಅವನ ನಂಬಿಕೆಯೇ ನೀತಿ ಎಂದು ಎಣಿಸಲ್ಪಡುವದು.

ರೋಮಾಪುರದವರಿಗೆ 4:9

ಈ ಧನ್ಯತೆಯು ಸುನ್ನತಿಯಿದ್ದವರಿಗೆ ಮಾತ್ರವೋ? ಇಲ್ಲವೆ ಸುನ್ನತಿಯಿಲ್ಲದವರಿಗೂ ಆಗುತ್ತದೋ? ಯಾಕಂದರೆ ಅಬ್ರಹಾಮನ ಲೆಕ್ಕಕ್ಕೆ ಅವನ ನಂಬಿಕೆಯೇ ನೀತಿಯೆಂದು ಎಣಿಸಲ್ಪಟ್ಟಿತೆಂಬದಾಗಿ ನಾವು ಹೇಳುತ್ತೇವಲ್ಲಾ.

ರೋಮಾಪುರದವರಿಗೆ 4:11

ಆಮೇಲೆ ನೀತಿಗೆ ಮುದ್ರೆಯಾಗಿ ಸುನ್ನತಿಯನ್ನು ಗುರುತಾಗಿ ಹೊಂದಿದನು. ಇದು ಸುನ್ನತಿಯಾಗುವದಕ್ಕೆ ಮೊದಲೇ ಅವನಿಗಿದ್ದ ನಂಬಿಕೆಯಿಂದಾಯಿತು. ಹೀಗೆ ಅವನು ನಂಬುವವರೆಲ್ಲರಿಗೆ ಅಂದರೆ ಅವರು ಸುನ್ನತಿ ಯಿಲ್ಲದವರಾದಾಗ್ಯೂ ಅವರಿಗೆ ತಂದೆಯಾದನು; ಹೀಗೆ ಅವರೂ ನೀತಿವಂತರೆಂದು ಎಣಿಸಲ್ಪಡುವರು.

ರೋಮಾಪುರದವರಿಗೆ 4:22

ಆದದರಿಂದ ಆ ನಂಬಿಕೆಯು ಅವನ ಲೆಕ್ಕಕ್ಕೆ ನೀತಿ ಯೆಂದು ಎಣಿಸಲ್ಪಟ್ಟಿತು.

ರೋಮಾಪುರದವರಿಗೆ 9:17

ಬರಹವು ಫರೋ ಹನಿಗೆ--ನನ್ನ ಬಲವನ್ನು ನಿನ್ನಲ್ಲಿ ತೋರಿಸುವ ಹಾಗೆಯೂ ನನ್ನ ನಾಮವು ಭೂಮಿಯ ಎಲ್ಲಾ ಕಡೆಯಲ್ಲಿ ಪ್ರಸಿದ್ಧಿ ಹೊಂದಬೇಕೆಂಬ ಉದ್ದೇಶದಿಂದಲೂ ನಾನು ನಿನ್ನನ್ನು ಉನ್ನತ ಸ್ಥಿತಿಗೆ ತಂದಿದ್ದೇನೆ ಎಂದು ಹೇಳುತ್ತದೆ.

ರೋಮಾಪುರದವರಿಗೆ 10:11

ಆತನ ಮೇಲೆ ನಂಬಿಕೆ ಇಡುವ ಯಾವನಾದರೂ ನಾಚಿಕೆಪಡುವದಿಲ್ಲ ಎಂದು ಬರಹವು ಹೇಳುತ್ತದೆ.

ರೋಮಾಪುರದವರಿಗೆ 11:2

ದೇವರು ಮುಂದಾಗಿ ಅರಿತುಕೊಂಡಿದ್ದ ತನ್ನ ಜನರನ್ನು ತಳ್ಳಿಹಾಕಲಿಲ್ಲ. ಎಲೀಯನ ವಿಷಯವಾಗಿಯಾದರೋ ಅವನು ಇಸ್ರಾಯೇಲ್ಯರಿಗೆ ವಿರೋಧವಾಗಿ ದೇವರಿಗೆ ವಿಜ್ಞಾಪನೆ ಮಾಡುತ್ತಾ--

ಗಲಾತ್ಯದವರಿಗೆ 3:6

ಅಬ್ರಹಾಮನು ಸಹದೇವ ರನ್ನು ನಂಬಿದನು, ಆ ನಂಬಿಕೆಯು ಅವನಿಗೆ ನೀತಿ ಯೆಂದು ಎಣಿಸಲ್ಪಟ್ಟಿತು.

ಯಾಕೋಬ 2:23

ಹೀಗೆ--ಅಬ್ರಹಾಮನು ದೇವರನ್ನು ನಂಬಿದನು; ಆ ನಂಬಿಕೆಯು ಅವನ ಲೆಕ್ಕಕ್ಕೆ ನೀತಿಯೆಂದು ಎಣಿಸಲ್ಪಟ್ಟಿತು ಎಂಬ ಬರಹವು ಹೇಳುವಂತೆ ನೆರವೇರಿತು. ಅವನು ದೇವರ ಸ್ನೇಹಿತ ನೆಂದು ಕರೆಯಲ್ಪಟ್ಟನು.

ಯಾಕೋಬ 4:5

ಇದಲ್ಲದೆ--ನಮ್ಮಲ್ಲಿ ವಾಸವಾಗಿರುವ ಆತ್ಮನು ಅಭಿಮಾನತಾಪದಿಂದ ಹಂಬಲಿಸುತ್ತಾನೆಂಬ ಬರಹವು ವ್ಯರ್ಥವಾಗಿ ಹೇಳುತ್ತದೆ ಎಂದು ನೀವು ಭಾವಿಸು ತ್ತೀರೋ?

2 ಪೇತ್ರ 1:20

ಬರಹದ ಯಾವ ಪ್ರವಾದನೆಯೂ ಕೇವಲ ಸ್ವಂತ ವಾಗಿ ವಿವರಿಸತಕ್ಕಂಥದ್ದಲ್ಲವೆಂಬದನ್ನು ಮೊದಲು ತಿಳಿದುಕೊಳ್ಳಿರಿ.ಯಾಕಂದರೆ ಹಿಂದಿನ ಕಾಲದಲ್ಲಿ ಯಾವ ಪ್ರವಾದನೆಯೂ ಮನುಷ್ಯನ ಚಿತ್ತದಿಂದ ಬರಲಿಲ್ಲ; ಪರಿಶುದ್ಧರಾದ ದೇವಜನರು ಪವಿತ್ರಾತ್ಮ ಪ್ರೇರಿತರಾಗಿ ಮಾತನಾಡಿದರು.

Interlinear

Choose Theme