ಆತನು ಸತ್ತಿದ್ದರಲ್ಲಿ ಪಾಪಕ್ಕಾಗಿ ಒಂದೇ ಸಾರಿ ಸತ್ತನು. ಆದರೆ ಆತನು ಜೀವಿಸುವದರಲ್ಲಿ ದೇವರಿಗಾಗಿ ಜೀವಿಸುತ್ತಾನೆ.
Cross references
ಯಾಕಂದರೆ ಆತನು ಜೀವಿಸುವವರಿಗೇ ದೇವರಾಗಿದ್ದಾನೆ, ಸತ್ತವರಿ ಗಲ್ಲ; ಯಾಕಂದರೆ ಎಲ್ಲರೂ ಆತನಿಗಾಗಿ ಜೀವಿಸುತ್ತಾರೆ ಅಂದನು.
ಅದೇ ಪ್ರಕಾರ ನೀವು ಸಹ ಪಾಪದ ಪಾಲಿಗೆ ನಿಜವಾಗಿ ಸತ್ತವರೂ ನಮ್ಮ ಕರ್ತನಾದ ಯೇಸು ಕ್ರಿಸ್ತನ ಮೂಲಕ ದೇವರಿಗಾಗಿ ಜಿವಿಸುವವರೂ ಎಂದು ಎಣಿಸಿಕೊಳ್ಳಿರಿ.
ನ್ಯಾಯಪ್ರಮಾಣವು ಶರೀರದ ಮೂಲಕ ನಿರ್ಬಲವಾಗಿ ಯಾವದನ್ನು ಮಾಡಲಾರದೆ ಇತ್ತೋ ಅದನ್ನು ದೇವರೇ ಮಾಡಿದನು; ಹೇಗಂದರೆ ಆತನು ತನ್ನ ಸ್ವಂತ ಮಗನನ್ನು ಪಾಪಶರೀರದ ಹೋಲಿಕೆ ಯಲ್ಲಿ ಕಳುಹಿಸಿ ಪಾಪಕ್ಕಾಗಿ ಆ ಶರೀರದಲ್ಲಿಯೇ ಪಾಪವನ್ನು ದಂಡಿಸಿದನು.
ನಮ್ಮಲ್ಲಿ ಒಬ್ಬನಾದರೂ ತನಗಾಗಿ ಬದುಕುವದೂ ಇಲ್ಲ, ತನಗಾಗಿ ಸಾಯುವದೂ ಇಲ್ಲ.
ಜೀವಿಸುವವರು ಇನ್ನು ಮೇಲೆ ತಮಗಾಗಿ ಜೀವಿಸದೆ ತಮಗೋಸ್ಕರ ಸತ್ತು ತಿರಿಗಿ ಎದ್ದು ಬಂದಾತನಿಗಾಗಿ ಜೀವಿಸಬೇಕೆಂತಲೇ ಆತನು ಎಲ್ಲರಿಗೋಸ್ಕರ ಸತ್ತನು.
ನಾವು ಆತನಲ್ಲಿ ದೇವರ ನೀತಿಯಾಗುವಂತೆ ದೇವರು ಪಾಪವನ್ನರಿಯ ಆತನನ್ನು ನಮಗೋಸ್ಕರ ಪಾಪವಾಗ ಮಾಡಿದನು.
ಹಾಗೆ ಸಮರ್ಪಿಸಬೇಕಾಗಿದ್ದ ಪಕ್ಷದಲ್ಲಿ ಆತನು ಲೋಕದ ಅಸ್ತಿವಾರದಿಂದ ಅನೇಕ ಸಾರಿ ಬಾಧೆಪಡಬೇಕಾಗಿತ್ತು; ಆದರೆ ಈಗ ಒಂದೇ ಸಾರಿ ಲೋಕಾಂತ್ಯದಲ್ಲಿ ಪಾಪನಿವಾರಣೆ ಮಾಡುವದಕ್ಕೆ ತನ್ನನ್ನು ತಾನೇ ಯಜ್ಞಮಾಡಿಕೊಳ್ಳುವವನಾಗಿ ಪ್ರತ್ಯಕ್ಷ ನಾದನು.
ಕ್ರಿಸ್ತನು ಸಹ ನೀತಿವಂತ ನಾಗಿದ್ದು ಅನೀತಿವಂತರಾದ ನಮ್ಮನ್ನು ದೇವರ ಬಳಿಗೆ ತರುವದಕ್ಕಾಗಿ ಪಾಪನಿವಾರಣೆಗೋಸ್ಕರ ಒಂದೇ ಸಾರಿ ಬಾಧೆಪಟ್ಟು ಶರೀರದಲ್ಲಿ ಕೊಲ್ಲಲ್ಪಟ್ಟನು, ಆತ್ಮನಿಂದ ಬದುಕುವವನಾದನು.
ಈ ಕಾರಣದಿಂದ ಸತ್ತಿರುವವರು ಶರೀರದಲ್ಲಿ ಮನುಷ್ಯರಿಗೆ ತಕ್ಕಂತೆ ನ್ಯಾಯತೀರ್ಪನ್ನು ಹೊಂದಿ ಆತ್ಮದಲ್ಲಿ ದೇವರಿಗಾಗಿ ಜೀವಿಸುವಂತೆ ಅವರಿಗೂ ಸುವಾರ್ತೆ ಸಾರಲ್ಪಟ್ಟಿತು.