Home Bibles ರೋಮಾಪುರದವರಿಗೆ 6:2 · ಕನ್ನಡ ಬೈಬಲ್
ರೋಮಾಪುರದವರಿಗೆ 6:2 · ಕನ್ನಡ ಬೈಬಲ್

ಹಾಗೆ ಎಂದಿಗೂ ಅಲ್ಲ; ಪಾಪದ ಪಾಲಿಗೆ ಸತ್ತವರಾದ ನಾವು ಇನ್ನೂ ಅದರಲ್ಲಿ ಬದುಕು ವದು ಹೇಗೆ?

Cross references

ಆದಿಕಾಂಡ 39:9

ಈ ಮನೆಯಲ್ಲಿ ನನಗಿಂತ ದೊಡ್ಡವ ನಾರೂ ಇಲ್ಲ. ನೀನು ಅವನ ಹೆಂಡತಿಯಾಗಿರುವದ ರಿಂದ ನಿನ್ನನ್ನಲ್ಲದೆ ನನಗೆ ಮತ್ತೇನೂ ಮರೆಮಾಡಲಿಲ್ಲ. ಹಾಗಿರುವಲ್ಲಿ ನಾನು ಈ ದೊಡ್ಡ ದುಷ್ಕೃತ್ಯಮಾಡಿ ದೇವರಿಗೆ ವಿರೋಧವಾಗಿ ಪಾಪಮಾಡುವದು ಹೇಗೆ ಅಂದನು.

ಕೀರ್ತನೆಗಳು 119:104

ನಾನು ನಿನ್ನ ಕಟ್ಟಳೆಗಳಿಂದ ವಿವೇಕಿ ಯಾಗಿದ್ದೇನೆ. ಆದದರಿಂದ ಮೋಸದ ಮಾರ್ಗಗ ಳನ್ನೆಲ್ಲಾ ಹಗೆಮಾಡಿದ್ದೇನೆ.

ರೋಮಾಪುರದವರಿಗೆ 3:1

ಹಾಗಾದರೆ ಯೆಹೂದ್ಯರಿಗಿರುವ ಪ್ರಾಧಾ ನ್ಯತೆ ಏನು? ಇಲ್ಲವೆ ಸುನ್ನತಿಯಿಂದ ಲಾಭವೇನು?

ರೋಮಾಪುರದವರಿಗೆ 5:11

ಇಷ್ಟು ಮಾತ್ರವಲ್ಲದೆ ನಮ್ಮ ಕರ್ತನಾದ ಯೇಸು ಕ್ರಿಸ್ತನ ಮೂಲಕ ಈಗ ಸಮಾಧಾನ ಹೊಂದಿದವರಾಗಿ ಆತನ ಮುಖಾಂತರ ನಾವು ಸಹ ದೇವರಲ್ಲಿ ಹರ್ಷಗೊಳ್ಳುತ್ತೇವೆ.

ರೋಮಾಪುರದವರಿಗೆ 6:5

ಹೇಗಂದರೆ ಆತನ ಮರಣದ ಹೋಲಿಕೆಯಲ್ಲಿ ನಾವು ಒಟ್ಟಾಗಿ ನೆಲೆಸಿದ್ದರೆ ಆತನ ಪುನರುತ್ಥಾನದ ಹೋಲಿಕೆ ಯಲ್ಲಿಯೂ ಇರುವೆವು.

ರೋಮಾಪುರದವರಿಗೆ 7:4

ಹಾಗೆಯೇ ನನ್ನ ಸಹೋದರರೇ, ನೀವು ಸಹ ಕ್ರಿಸ್ತನ ದೇಹದ ಮೂಲಕವಾಗಿ ನ್ಯಾಯಪ್ರಮಾಣದ ಪಾಲಿಗೆ ಸತ್ತಿರಿ. ದೇವರಿಗೆ ಫಲಫಲಿಸುವದಕ್ಕಾಗಿ ಮತ್ತೊಬ್ಬನನ್ನು ಅಂದರೆ ಸತ್ತುಜೀವಿತನಾಗಿ ಎದ್ದಾತನನ್ನು ಸೇರಿಕೊಂಡಿರಿ.

ರೋಮಾಪುರದವರಿಗೆ 7:6

ಈಗಲಾದರೋ ನಮ್ಮನ್ನು ಹಿಡುಕೊಂಡಿದ್ದ ನ್ಯಾಯಪ್ರಮಾಣದ ಪಾಲಿಗೆ ನಾವು ಸತ್ತಕಾರಣ ಅದರಿಂದ ವಿಮುಕ್ತರಾಗಿದ್ದೇವೆ; ಹೀಗೆ ನಾವು ಅಕ್ಷರದ ಹಳೇ ರೀತಿಯಲ್ಲಿ ಆತನನ್ನು ಸೇವಿಸದೆ ಆತ್ಮನಿಂದ ಹೊಸ ರೀತಿಯಲ್ಲಿಯೇ ಸೇವಿಸುತ್ತೇವೆ.

2 ಕೊರಿಂಥದವರಿಗೆ 5:14

ಕ್ರಿಸ್ತನ ಪ್ರೀತಿಯು ನಮ್ಮನ್ನು ಒತ್ತಾಯಮಾಡುತ್ತದೆ; ಹೀಗೆ ಎಲ್ಲರಿಗೋಸ್ಕರ ಒಬ್ಬನು ಸತ್ತದ್ದರಿಂದ ಎಲ್ಲರೂ ಸತ್ತಂತಾಯಿತೆಂದು ನಾವು ಹೀಗೆ ನಿಶ್ಚಯಿಸಿಕೊಳ್ಳುತ್ತೇವೆ.

ಗಲಾತ್ಯದವರಿಗೆ 2:19

ಯಾಕಂ ದರೆ ನಾನಂತೂ ದೇವರಿಗಾಗಿ ಜೀವಿಸುವದಕ್ಕೊಸ್ಕರ ನ್ಯಾಯಪ್ರಮಾಣದ ಮೂಲಕವಾಗಿ ನ್ಯಾಯಪ್ರಮಾ ಣದ ಪಾಲಿಗೆ ಸತ್ತೆನು.

ಗಲಾತ್ಯದವರಿಗೆ 6:14

ನನಗಾದರೋ ನಮ್ಮ ಕರ್ತನಾದ ಯೇಸು ಕ್ರಿಸ್ತನ ಶಿಲುಬೆಯ ವಿಷಯದಲ್ಲಿ ಹೊರತು ಹೆಚ್ಚಳಪಡುವದು ಬೇಡವೇ ಬೇಡ. ಆತನ ಮೂಲಕ ಲೋಕವು ನನ್ನ ಪಾಲಿಗೆ ಶಿಲುಬೆಗೆ ಹಾಕಿಸಿಕೊಂಡಿತು. ನಾನು ಲೋಕದ ಪಾಲಿಗೆ ಶಿಲುಬೆಗೆ ಹಾಕಿಸಿಕೊಂಡವನಾಗಿದ್ದೇನೆ.

ಕೊಲೊಸ್ಸೆಯವರಿಗೆ 2:20

ಪ್ರಾಪಂಚಿಕ ಬಾಲಬೋಧೆಯ ಪಾಲಿಗೆ ನೀವು ಕ್ರಿಸ್ತನೊಂದಿಗೆ ಸತ್ತವರಾಗಿದ್ದ ಮೇಲೆ ಇನ್ನೂ ಪ್ರಾಪಂಚಿಕರಾಗಿ ಬದುಕು ವವರೋ ಎಂಬಂತೆ

ಕೊಲೊಸ್ಸೆಯವರಿಗೆ 3:3

ಯಾಕಂದರೆ ನೀವು ಸತ್ತಿರಲ್ಲಾ, ನಿಮ್ಮ ಜೀವವು ಕ್ರಿಸ್ತನೊಂದಿಗೆ ದೇವರಲ್ಲಿ ಮರೆಯಾಗಿಟ್ಟದೆ.

1 ಪೇತ್ರ 1:14

ನೀವು ಮುಂಚೆ ಅಜ್ಞಾನಿಗಳಾಗಿದ್ದಾಗ ನಿಮಗಿದ್ದ ದುರಾಶೆಗಳನ್ನು ಅನುಸರಿಸಿ ನಡೆದಂತೆ ಇನ್ನು ನಡೆಯುವವರಾಗಿರದೆ

1 ಪೇತ್ರ 2:24

ನಾವು ಪಾಪಗಳ ಪಾಲಿಗೆ ಸತ್ತು ನೀತಿವಂತರಾಗಿ ಜೀವಿಸುವಂತೆ ಆತನು ಮರದ ಮೇಲೆ ನಮ್ಮ ಪಾಪ ಗಳನ್ನು ತಾನೇ ತನ್ನ ದೇಹದಲ್ಲಿ ಹೊತ್ತನು; ಆತನ ಬಾಸುಂಡೆಗಳಿಂದ ನಿಮಗೆ ಗುಣವಾಯಿತು.ನೀವು ಕುರಿಗಳಂತೆ ದಾರಿ ತಪ್ಪಿದವರಾಗಿದ್ದೀರಿ; ಆದರೆ ಈಗ ನೀವು ತಿರಿಗಿ ನಿಮ್ಮ ಆತ್ಮಗಳ ಕುರುಬನೂ ಅಧ್ಯಕ್ಷನೂ ಆಗಿರುವಾತನ ಬಳಿಗೆ ಬಂದಿದ್ದೀರಿ.

1 ಪೇತ್ರ 4:1

ಕ್ರಿಸ್ತನು ಶರೀರದಲ್ಲಿ ನಮಗೋಸ್ಕರ ಬಾಧೆಪಟ್ಟದ್ದರಿಂದ ನೀವು ಸಹ ಆತನಿಗಿದ್ದ ಮನಸ್ಸನ್ನು ಧರಿಸಿಕೊಳ್ಳಿರಿ. ಯಾಕಂದರೆ ಶರೀರ ದಲ್ಲಿ ಬಾಧೆಪಟ್ಟವನು ಪಾಪಮಾಡುವದನ್ನು ನಿಲ್ಲಿಸಿ ಬಿಟ್ಟಿದ್ದಾನೆ.

1 ಯೋಹಾನ 3:9

ದೇವರಿಂದ ಹುಟ್ಟಿದವನು ಪಾಪಮಾಡನು; ಯಾಕಂದರೆ ಆತನ ಬೀಜವು ಅವನಲ್ಲಿ ನೆಲೆಗೊಂಡದೆ. ಅವನು ದೇವರಿಂದ ಹುಟ್ಟಿದ ಕಾರಣ ಪಾಪಮಾಡ ಲಾರನು.

Interlinear

Choose Theme