ಯಾಕಂದರೆ ಕ್ರಿಸ್ತನು ಸತ್ತಮೇಲೆ ಜೀವಿತ ನಾಗಿ ಎದ್ದು ಬಂದದ್ದರಿಂದ ಆತನು ಇನ್ನು ಮುಂದೆ ಸಾಯತಕ್ಕವನಲ್ಲ; ಮರಣವು ಇನ್ನು ಮುಂದೆ ಆತ ನನ್ನು ಆಳುವದಿಲ್ಲವೆಂದು ನಮಗೆ ತಿಳಿದದೆ.
Cross references
ಆದದರಿಂದ ನನ್ನ ಹೃದಯವು ಸಂತೋಷಿಸಿ ನನ್ನ ಹೆಮ್ಮೆಯು ಉಲ್ಲಾಸಪಡುತ್ತದೆ; ನನ್ನ ಶರೀರವು ಸಹ ನಿರೀಕ್ಷೆಯಿಂದ ವಿಶ್ರಾಂತಿಸುವದು.
ದೇವರು ಆತನನ್ನು ಮರಣ ವೇದನೆಗಳಿಂದ ಬಿಡಿಸಿ ಎಬ್ಬಿಸಿದನು. ಯಾಕಂದರೆ ಮರಣವು ಆತನನ್ನು ಹಿಡಿದುಕೊಂಡಿರುವದು ಅಸಾಧ್ಯ ವಾಗಿತ್ತು.
ಆದರೂ ಆದಾಮನಿಂದ ಮೋಶೆಯವರೆಗೂ ಮರಣದ ಆಳಿಕೆಯು ನಡೆಯುತ್ತಿತ್ತು. ಆದಾಮನ ಆ ಅತಿಕ್ರಮಣಕ್ಕೆ ಸಮಾನವಾದ ಪಾಪವನ್ನು ಮಾಡದೆ ಇದ್ದವರ ಮೇಲೆಯೂ ಅದು ನಡೆಯುತ್ತಿತ್ತು. ಆ ಆದಾಮನು ಬರಬೇಕಾದ ಒಬ್ಬಾತನಿಗೆ ಸೂಚನೆ ಯಾಗಿದ್ದಾನೆ.
ಯಾಕಂದರೆ ಪಾಪವು ನಿಮ್ಮ ಮೇಲೆ ಪ್ರಭುತ್ವ ನಡಿಸಬಾರದು; ಕಾರಣವೇನಂದರೆ ನೀವು ನ್ಯಾಯಪ್ರಮಾಣಾಧೀನ ರಲ್ಲ, ಕೃಪೆಗೆ ಅಧೀನರಾಗಿದ್ದೀರಿ.
ಇದಲ್ಲದೆ ಮಕ್ಕಳು ರಕ್ತಮಾಂಸಗಳಲ್ಲಿ ಪಾಲುಗಾರರಾದದರಿಂದ ಆತನು ಸಹ ಅವರಂತೆಯೇ ಆದನು; ತನ್ನ ಮರಣದಿಂದಲೇ ಮರಣಾಧಿಕಾರಿಯನ್ನು ಅಂದರೆ ಸೈತಾನನನ್ನು ನಾಶ ಮಾಡುವದಕ್ಕೂ
ಆತನು ಶಾರೀರಕವಾದ ಆಜ್ಞೆಯ ನಿಯಮಕ್ಕನುಸಾರ ಅಲ್ಲದೆ ನಿರ್ಲಯವಾದ ಜೀವದ ಶಕ್ತಿಗನುಸಾರವಾಗಿ ಮಾಡಲ್ಪಟ್ಟಿದ್ದಾನೆ.
ಆದಕಾರಣ ಆತನು ತನ್ನ ಮೂಲಕ ದೇವರ ಬಳಿಗೆ ಬರುವವರನ್ನು ಸಂಪೂರ್ಣವಾಗಿ ರಕ್ಷಿಸುವದಕ್ಕೆ ಶಕ್ತನಾಗಿದ್ದಾನೆ; ಅವರಿ ಗೋಸ್ಕರ ವಿಜ್ಞಾಪನೆಮಾಡುವದಕ್ಕೆ ಯಾವಾಗಲೂ ಬದುಕವವನಾಗಿದ್ದಾನೆ.
ಆದರೆ ಈ ಮನುಷ್ಯನು ಪಾಪಗಳಿಗೋಸ್ಕರ ನಿರಂತರವಾದ ಒಂದೇ ಯಜ್ಞವನ್ನು ಅರ್ಪಿಸಿದ ಮೇಲೆ ದೇವರ ಬಲ ಗಡೆಯಲ್ಲಿ ಕೂತುಕೊಂಡನು.
ಸತ್ತವನಾದೆನು,ಈಗ ಬದುಕುವವನಾಗಿದ್ದೇನೆ. ಇಗೋ, ನಾನು ಎಂದೆಂ ದಿಗೂ ಬದುಕುವವನಾಗಿದ್ದೇನೆ. ಆಮೆನ್. ನರಕದ ಮತ್ತು ಮರಣದ ಬೀಗದ ಕೈಗಳೂ ನನ್ನಲ್ಲಿ ಅವೆ.