ಜೀವಿಸುವದಕ್ಕಾಗಿರುವ ಆಜ್ಞೆಯೇ ಮರಣಕ್ಕಾಯಿತೆಂದು ನಾನು ಕಂಡುಕೊಂಡೆನು.
Cross references
ಆದದರಿಂದ ನೀವು ನನ್ನ ನಿಯಮಗಳನ್ನೂ ನಿರ್ಣಯಗಳನ್ನೂ ಕೈಕೊಳ್ಳಿರಿ. ಒಬ್ಬನು ಅವುಗಳನ್ನು ಮಾಡಿದರೆ ಅವನು ಅವುಗಳಲ್ಲಿ ಜೀವಿಸುವನು; ನಾನೇ ಕರ್ತನು.
ಯಾವ ಸಂಗತಿಗಳನ್ನು ಮಾಡಿದರೆ ಮನುಷ್ಯನು ಬದುಕುವನೋ? ಆ ನನ್ನ ನಿಯಮಗಳನ್ನು ಅವರಿಗೆ ಕೊಟ್ಟು ನನ್ನ ನ್ಯಾಯಗಳನ್ನು ಅವರಿಗೆ ತಿಳಿಸಿದೆನು.
ಆದರೆ ಇಸ್ರಾಯೇಲಿನ ಮನೆತನದವರು ಅರಣ್ಯದಲ್ಲಿಯೂ ನನಗೆ ವಿರುದ್ಧ ವಾಗಿ ತಿರುಗಿಬಿದ್ದರು; ಆಜ್ಞಾವಿಧಿಗಳನ್ನು ಅನುಸರಿಸುವ ಮನುಷ್ಯನು ಬದುಕುವನು. ಅವುಗಳಲ್ಲಿ ನಡೆಯದೆ ನನ್ನ ನ್ಯಾಯಗಳನ್ನು ಅಸಡ್ಡೆ ಮಾಡಿ ನನ್ನ ಸಬ್ಬತ್ ದಿನಗಳನ್ನು ಸಹ ಬಹಳವಾಗಿ ಅಪವಿತ್ರಪಡಿಸಿದರು; ಆಗ ನಾನು ಅವರ ಮೇಲೆ ನನ್ನ ರೋಷದಿಂದ ದಹಿಸಿಬಿಡುವೆನೆಂದು ಹೇಳಿದೆನು.
ಆದಾಗ್ಯೂ ಮಕ್ಕಳು ನನಗೆ ವಿರೋಧವಾಗಿ ತಿರುಗಿ ಬಿದ್ದರು; ಯಾವವುಗಳನ್ನು ಮನುಷ್ಯನು ಮಾಡಿದರೆ ಬದುಕುವನೋ ಆ ನನ್ನ ನಿಯಮಗಳಲ್ಲಿ ನಡೆಯಲಿಲ್ಲ ನನ್ನ ನ್ಯಾಯಗಳನ್ನು ಕೈಕೊಂಡುಮಾಡಲಿಲ್ಲ; ನನ್ನ ಸಬ್ಬತ್ತುಗಳನ್ನು ಅಪವಿತ್ರ ಪಡಿಸಿದಾಗ ಅವರ ಮೇಲೆ ನನ್ನ ರೋಷವನ್ನು ಸುರಿದುಬಿಡುವೆನೆಂದೂ ನನ್ನ ಕೋಪ ವನ್ನು ಅರಣ್ಯದಲ್ಲಿ ಅವರ ಮೇಲೆ ತೀರಿಸಿಬಿಡುವೆ ನೆಂದೂ ಹೇಳಿದೆನು.
ಅದಕ್ಕೆ ಅವನು ಪ್ರತ್ಯುತ್ತರವಾಗಿ--ನೀನು ನಿನ್ನ ದೇವರಾದ ಕರ್ತನನ್ನು ನಿನ್ನ ಪೂರ್ಣಹೃದಯ ದಿಂದಲೂ ನಿನ್ನ ಪೂರ್ಣಪ್ರಾಣದಿಂದಲೂ ನಿನ್ನ ಪೂರ್ಣಶಕ್ತಿಯಿಂದಲೂ ನಿನ್ನ ಪೂರ್ಣಮನಸ್ಸಿನಿಂ ದಲೂ ಪ್ರೀತಿಸಬೇಕು; ನಿನ್ನ ನೆರೆಯವನನ್ನು ನಿನ್ನಂತೆಯೇ ಪ್ರೀತಿಸಬೇಕು ಅಂದನು.
ಇದಲ್ಲದೆ-- ನ್ಯಾಯಪ್ರಮಾಣವು ಹೇಳುವವುಗಳನ್ನು ಮಾಡುವವನು ಅವುಗಳಿಂದಲೇ ಜೀವಿಸುವನು ಎಂದು ಮೋಶೆಯು ಅದರ ನೀತಿಯ ವಿಷಯವಾಗಿ ವಿವರಿಸುತ್ತಾನೆ.
ಆದರೆ ಮರಣದ ಸೇವೆಯು ಕಲ್ಲಿನ ಮೇಲೆ ಲಿಖಿತವಾದ ಅಕ್ಷರಗಳಲ್ಲಿದ್ದರೂ ಪ್ರಭಾವದಿಂದ ಕೂಡಿದ್ದಾಗಿತ್ತು; ಆ ಪ್ರಭಾವದಿಂದ ಮೋಶೆಯ ಮುಖಕ್ಕೆ ಬಂದ ಪ್ರಕಾಶವು ಕುಂದಿ ಹೋಗುವಂಥ ದ್ದಾಗಿದ್ದರೂ ಅದರ ನಿಮಿತ್ತ ಇಸ್ರಾಯೇಲ್ಯರು ಅವನ ಮುಖವನ್ನು ದೃಷ್ಟಿಸಿ ನೋಡಲಾರದೆ ಇದ್ದರು.
ನ್ಯಾಯಪ್ರಮಾಣಕ್ಕೆ ನಂಬಿಕೆಯು ಆಧಾರ ವಲ್ಲ. ಆದರೆ--ಅದರ ಕ್ರಿಯೆಗಳನ್ನು ಮಾಡುವವನೇ ಅವುಗಳ ಮೂಲಕ ಬದುಕುವನು ಎಂಬದೇ.