ಹೇಗಂದರೆ ಪಾಪವು ಆಜ್ಞೆಯಿಂದ ಅನುಕೂಲ ಹೊಂದಿ ನನ್ನನ್ನು ವಂಚಿಸಿ ಅದರ ಮೂಲಕವೇ ನನ್ನನು ಕೊಂದಿತು;
Cross references
ಕರ್ತನಾದ ದೇವರು ಸ್ತ್ರೀಗೆ--ಇದೇನು ನೀನು ಮಾಡಿದ್ದು ಎಂದು ಕೇಳಿದಾಗ ಸ್ತ್ರೀಯು--ಸರ್ಪವು ನನ್ನನ್ನು ವಂಚಿಸಿದ್ದರಿಂದ ನಾನು ತಿಂದೆನು ಅಂದಳು.
ಅವನು ತಿನ್ನುವದು ಬೂದಿಯೇ; ಮೋಸಕ್ಕೊಳಗಾದ ಹೃದಯವು ಅವನಿಗೆ ದಾರಿ ತಪ್ಪಿಸಿದ ಕಾರಣ ನನ್ನ ಬಲಗೈಯಲ್ಲಿ ಸುಳ್ಳು ಇದೆಯಲ್ಲಾ ಎಂದು ಅಂದುಕೊಳ್ಳಲೂ ತನ್ನ ಪ್ರಾಣ ವನ್ನು ಕಾಪಾಡಿಕೊಳ್ಳಲೂ ಅವನಿಂದಾಗದು.
ಇದಲ್ಲದೆ ಯಾವ ಕ್ಷಣದಲ್ಲಿ ನಾನು ಒಂದು ಜನಾಂಗದ ವಿಷಯವಾಗಿಯೂ ಒಂದು ರಾಜ್ಯದ ವಿಷಯವಾಗಿಯೂ ಅದನ್ನು ಕಟ್ಟುವದಕ್ಕೂ ನೆಡುವದಕ್ಕೂ ಮಾತನಾಡುತ್ತೇನೋ
ಬಿತ್ತುವವನನ್ನೂ ಸುಗ್ಗಿ ಕಾಲದಲ್ಲಿ ಕುಡುಗೋಲು ಹಿಡಿಯುವವನನ್ನೂ ಬಾಬೆಲಿನೊಳ ಗಿಂದ ಕಡಿದು ಬಿಡಿರಿ; ಕಷ್ಟಪಡಿಸುವ ಕತ್ತಿಯ ಭಯದಿಂದ ಅವರು ತಮ್ಮ ತಮ್ಮ ಜನರ ಬಳಿಗೆ ತಿರುಗಿಕೊಳ್ಳುವರು; ತಮ್ಮ ತಮ್ಮ ದೇಶಗಳಿಗೆ ಓಡಿ ಹೋಗುವರು.
ನೀನು ಬಹಳವಾಗಿ ತಿರಸ್ಕರಿಸಲ್ಪಟ್ಟಿದ್ದೀ. ಬಂಡೆಯ ಬಿರುಕು ಗಳಲ್ಲಿ ವಾಸಮಾಡುವವನೇ, ಉನ್ನತದಲ್ಲಿ ನಿವಾಸ ಮಾಡಿಕೊಂಡವನೇ--ಯಾರು ನನ್ನನ್ನು ನೆಲಕ್ಕೆ ಇಳಿಸ ಬಲ್ಲರೆಂದು ತನ್ನ ಹೃದಯದಲ್ಲಿ ಅನ್ನುವವನೇ, ನಿನ್ನ ಹೃದಯದ ಗರ್ವವು ನಿನ್ನನ್ನು ಮೋಸಗೊಳಿಸಿದೆ.
ಆದರೆ ಪಾಪವು ಈ ಆಜ್ಞೆಯಿಂದ ಅನುಕೂಲ ಹೊಂದಿ ಸಕಲ ವಿಧವಾದ ದುರಾಶೆಯನ್ನು ನನ್ನಲ್ಲಿ ಹುಟ್ಟಿಸಿತು. ನ್ಯಾಯಪ್ರಮಾಣವು ಇಲ್ಲದಿರು ವಾಗ ಪಾಪವು ಸತ್ತದ್ದಾಗಿದೆ.
ಹಾಗಾದರೆ ಹಿತವಾದದ್ದು ನನಗೆ ಮರಣಕ್ಕೆ ಕಾರಣವಾಯಿತೋ? ಹಾಗೆ ಎಂದಿಗೂ ಅಲ್ಲ; ಆದರೆ ಪಾಪವು ಹಿತವಾದದ್ದರ ಮೂಲಕ ನನ್ನಲ್ಲಿ ಮರಣವನ್ನು ಉಂಟುಮಾಡಿದ್ದರಿಂದ ಅದು ಪಾಪವೇ ಎಂದು ಕಾಣಿಸಿಕೊಂಡಿತು. ಹೀಗೆ ಆಜ್ಞೆಯ ಮೂಲಕ ಪಾಪವು ಅತ್ಯಧಿಕವಾದ ಪಾಪವಾಗಿ ತೋರಿಬಂತು.
ಯೇಸುವಿನಲ್ಲಿರುವ ಸತ್ಯೋಪದೇಶವು ಯಾವದೆಂದರೆ--ನೀವು ನಿಮ ಹಿಂದಿನ ನಡತೆಯನ್ನು ಅನುಸರಿಸದೆ ಪೂರ್ವಸ್ವಭಾವ ವನ್ನು ತೆಗೆದು ಹಾಕಿಬಿಡಬೇಕು; ಅದು ಮೋಸಕರವಾದ ದುರಾಶೆಗಳಿಂದ ಕೆಟ್ಟು ಹೋಗುವಂಥದು.
ನಿಮ್ಮಲ್ಲಿ ಒಬ್ಬ ರಾದರೂ ಪಾಪದಿಂದ ಮೋಸಹೋಗಿ ಕಠಿಣರಾಗ ದಂತೆ--ಈ ದಿನ ಎಂದು ಕರೆಯಲ್ಪಡುವಾಗಲೇ ಪ್ರತಿ ನಿತ್ಯವೂ ಒಬ್ಬರನ್ನೊಬ್ಬರು ಎಚ್ಚರಿಸಿರಿ.
ನೀವು ವಾಕ್ಯದ ಪ್ರಕಾರ ನಡೆಯುವವರಾಗಿರ್ರಿ; ಅದನ್ನು ಕೇಳುವವರು ಮಾತ್ರವೇ ಆಗಿದ್ದು ನಿಮ್ಮನ್ನು ನೀವೇ ಮೋಸಗೊಳಿಸ ಬೇಡಿರಿ.
ನಿಮ್ಮಲ್ಲಿ ಭಕ್ತನೆಂದೆ ಣಿಸಿಕೊಳ್ಳುವ ಯಾವನಾದರೂ ತನ್ನ ನಾಲಿಗೆಗೆ ಕಡಿವಾಣವನ್ನು ಹಾಕದೆ ತನ್ನ ಹೃದಯವನ್ನು ಮೋಸ ಗೊಳಿಸುವವನಾದರೆ ಅವನ ಭಕ್ತಿ ನಿಷ್ಪ್ರಯೋಜನ ವಾಗಿದೆ.ಸಂಕಟದಲ್ಲಿ ಬಿದ್ದ ದಿಕ್ಕಿಲ್ಲದವರನ್ನೂ ವಿಧವೆ ಯರನ್ನೂ ಪರಾಮರಿಸಿ ತನಗೆ ಪ್ರಪಂಚದ ದೋಷವು ಹತ್ತದಂತೆ ನೋಡಿಕೊಂಡಿರುವದೇ ತಂದೆಯಾದ ದೇವರ ಸನ್ನಿಧಾನದಲ್ಲಿ ಶುದ್ಧವೂ ನಿರ್ಮಲವೂ ಆಗಿರುವ ಭಕ್ತಿ.