ರೂತ 1:18 · ಕನ್ನಡ ಬೈಬಲ್
ಆಕೆಯು ತನ್ನ ಸಂಗಡ ಬರಲು ದೃಢವಾದ ಮನಸ್ಸು ಮಾಡಿಕೊಂಡಿದ್ದಾಳೆಂದು ಕಂಡಾಗ ಅವಳ ಸಂಗಡ ಮಾತನಾಡದೆ ಇದ್ದಳು.
Cross references
ಅಪೋಸ್ತಲರ ಕೃತ್ಯಗಳು 2:42
ಅವರು ಅಪೊಸ್ತಲರ ಬೋಧನೆ ಯಲ್ಲಿಯೂ ಅನ್ಯೋನ್ಯತೆಯಲ್ಲಿಯೂ ರೊಟ್ಟಿ ಮುರಿ ಯುವದರಲ್ಲಿಯೂ ಪ್ರಾರ್ಥನೆಗಳಲ್ಲಿಯೂ ನಿರತರಾಗಿ ಸ್ಥಿರಚಿತ್ತರಾಗಿದ್ದರು.
ಅಪೋಸ್ತಲರ ಕೃತ್ಯಗಳು 21:14
ಅವನು ಒಪ್ಪದೆ ಇದ್ದದರಿಂದ--ಕರ್ತನ ಚಿತ್ತದಂತೆಯೇ ಆಗಲಿ ಎಂದು ಹೇಳಿ ನಾವು ಸುಮ್ಮನಾದೆವು.
ಎಫೆಸದವರಿಗೆ 6:10
ಕಡೇದಾಗಿ ನನ್ನ ಸಹೋದರರೇ, ಕರ್ತನಲ್ಲಿಯೂ ಆತನ ಅತ್ಯಧಿಕವಾದ ಶಕ್ತಿಯಲ್ಲಿಯೂ ಬಲಗೊಳ್ಳಿರಿ.