Home Bibles ರೂತ 3:10 · ಕನ್ನಡ ಬೈಬಲ್
ರೂತ 3:10 · ಕನ್ನಡ ಬೈಬಲ್

ಅದಕ್ಕೆ ಅವನು ಹೇಳಿದ್ದೇನಂದರೆ ನನ್ನ ಮಗಳೇ, ಕರ್ತನಿಂದ ನಿನಗೆ ಆಶೀರ್ವಾದವಾಗಲಿ; ಬಡವರೂ ಐಶ್ವರ್ಯವಂತರೂ ಆದ ಯೌವನಸ್ಥರ ಹಿಂದೆ ನೀನು ಹೋಗದೆ ಇದ್ದದರಿಂದ ಮೊದಲು ತೋರಿಸಿದ್ದಕ್ಕಿಂತ ಕಡೆಯಲ್ಲಿ ನೀನು ತೋರಿಸಿದದಯೆಯು ಹೆಚ್ಚಾಗಿದೆ.

Cross references

ರೂತ 1:8

ನೊವೊಮಿಯು ತನ್ನ ಇಬ್ಬರು ಸೊಸೆಯರಿಗೆ ನೀವು ಇಬ್ಬರೂ ನಿಮ್ಮ ನಿಮ್ಮ ತಾಯಿಯ ಮನೆಗೆ ತಿರಿಗಿಹೋಗಿರಿ; ನೀವು ಸತ್ತವರಿಗೂ ನನಗೂ ಮಾಡಿದ ಹಾಗೆಯೇ ಕರ್ತನು ನಿಮಗೆ ಕೃಪೆಯಿಂದ ಮಾಡಲಿ.

ರೂತ 2:4

ಇಗೋ, ಬೋವಜನು ಬೇತ್ಲೆಹೇಮಿನಿಂದ ಬಂದು ಕೊಯ್ಯುವವರಿಗೆ ಕರ್ತನು ನಿಮ್ಮ ಸಂಗಡ ಇರಲಿ ಅಂದನು. ಅದಕ್ಕೆ ಅವರು ಕರ್ತನು ನಿನ್ನನ್ನು ಆಶೀರ್ವ ದಿಸಲಿ ಅಂದರು.

ರೂತ 2:11

ಆಗ ಬೋವಜನು ಅವಳಿಗೆ ಪ್ರತ್ಯುತ್ತರವಾಗಿ ನಿನ್ನ ಗಂಡನು ಸತ್ತ ತರುವಾಯ ನೀನು ನಿನ್ನ ಅತ್ತೆಗೋಸ್ಕರ ಮಾಡಿ ದ್ದೆಲ್ಲವೂ ನಿನ್ನ ತಂದೆತಾಯಿಗಳನ್ನೂ ಹುಟ್ಟಿದ ದೇಶವನ್ನೂ ಎಂದಿಗೂ ಅರಿಯದ ಜನರ ಬಳಿಗೆ ಬಂದದ್ದೂ ನನಗೆ ಚೆನ್ನಾಗಿ ತಿಳಿಸಲ್ಪಟ್ಟಿದೆ.

ರೂತ 2:20

ನೊವೊಮಿ ತನ್ನ ಸೊಸೆಗೆಜೀವಿಸಿರುವವರಿಗೋಸ್ಕರವೂ ಸತ್ತವರಿಗೋಸ್ಕರವೂ ಮಾಡಿದ ಕೃಪೆಯನ್ನು ಬಿಡದೆ ಇರುವವನು ಕರ್ತ ನಿಂದ ಆಶೀರ್ವದಿಸಲ್ಪಡಲಿ ಅಂದಳು. ನೊವೊಮಿ ಅವಳಿಗೆ ಆ ಮನುಷ್ಯನು ನಮ್ಮ ಸಂಬಂಧಿಕನಾಗಿಯೂ ವಿಮೋಚಿಸತಕ್ಕ ನಮ್ಮ ಬಾಧ್ಯರಲ್ಲಿ ಒಬ್ಬನಾಗಿಯೂ ಇದ್ದಾನೆ ಅಂದಳು.

1 ಸಮುವೇಲ 15:13

ಸಮುವೇಲನು ಸೌಲನ ಬಳಿಗೆ ಬಂದಾಗ ಸೌಲನು ಅವನಿಗೆ--ನಿನಗೆ ಕರ್ತನ ಆಶೀರ್ವಾದವಾಗಲಿ; ನಾನು ಕರ್ತನ ಆಜ್ಞೆಯನ್ನು ಈಡೇರಿಸಿದೆನು ಅಂದನು.

1 ಕೊರಿಂಥದವರಿಗೆ 13:4

ಪ್ರೀತಿ ಬಹು ತಾಳ್ಮೆಯುಳ್ಳದ್ದು, ಕರುಣೆಯುಳ್ಳದ್ದು; ಪ್ರೀತಿಯು ಹೊಟ್ಟೇಕಿಚ್ಚು ಪಡುವದಿಲ್ಲ, ಹೊಗಳಿ ಕೊಳ್ಳುವದಿಲ್ಲ, ಉಬ್ಬಿಕೊಳ್ಳುವದಿಲ್ಲ,

Interlinear

Choose Theme