ನಿನ್ನ ಗಿಡಗಳಲ್ಲಿ ದಾಳಿಂಬರದ ವನವೂ ರಮ್ಯವಾದ ಫಲಕೊಡುವ ಗಿಡಗಳೂ ಕರ್ಪೂರವೂ ಜಟಾಮಾಂಸಿಯೂ ಕೂಡ ಇವೆ.
Cross references
ಮುದಿ ಪ್ರಾಯದಲ್ಲಿಯೂ ಫಲ ಫಲಿಸುವರು. ಅವರು ಪುಷ್ಟಿಯಾಗಿ ವೃದ್ಧಿಯಾಗುವರು.ಕರ್ತನು ಯಥಾರ್ಥನೂ ನನ್ನ ಬಂಡೆಯೂ ಆಗಿದ್ದಾನೆ; ಆತನಲ್ಲಿ ಅನೀತಿ ಇರುವದಿಲ್ಲ.
ಉದ್ಯಾನ ವನಗಳನ್ನೂ ಹಣ್ಣು ತೋಟಗಳನ್ನೂ ಮಾಡಿಕೊಂಡು ಅವುಗಳಲ್ಲಿ ತರತರವಾದ ಹಣ್ಣಿನ ವೃಕ್ಷಗಳನ್ನು ನೆಟ್ಟೆನು.
ಅರಸನು ಮೇಜಿನ ಬಳಿಯಲ್ಲಿ ಕೂತಿದ್ದಾಗ ನನ್ನ ಜಟಾಮಾಂಸಿಯು ಅದರ ವಾಸನೆಯನ್ನು ಬಿಡುತ್ತದೆ.
ಏನ್ಗೆದಿಯ ದ್ರಾಕ್ಷೇ ತೋಟ ಗಳಲ್ಲಿರುವ ಗೋರಂಟೆಯ ಪೂಗೊಂಚಲಿನಂತೆ ನನ್ನ ಪ್ರಿಯನು ನನಗೆ ಇರುವನು.
ಜಟಾಮಾಂಸಿಯೂ-- ಕೇಸರಿಯೂ ಬಜೆಯೂ ಲವಂಗವೂ ಎಲ್ಲಾ ಸಾಂಬ್ರಾಣಿ ಗಿಡಗಳೂ ರಕ್ತಬೋಳವೂ ಅಗರೂ
ನನ್ನ ಪ್ರಿಯನು ತೋಟಗಳಲ್ಲಿ ಮೇಯಿಸುವದಕ್ಕೂ ತಾವರೆಗಳನ್ನು ಕೂಡಿಸುವದಕ್ಕೂ ತನ್ನ ತೋಟಕ್ಕೆ ಸುಗಂಧಗಳ ಮಡಿಗೆ ಹೋಗಿದ್ದಾನೆ.
ತಗ್ಗಿನ ಫಲಗಳನ್ನು ನೋಡುವದಕ್ಕೂ ದ್ರಾಕ್ಷೇ ಬಳ್ಳಿಯು ಬೆಳೆದು? ದಾಳಿಂಬರ ಗಿಡಗಳು ಚಿಗುರಿ ವೆಯೋ ಎಂದು ನೋಡುವದಕ್ಕೂ ನಾನು ಬಾದಾ ಮಿಯ ತೋಟಕ್ಕೆ ಹೋದೆನು.
ನಾವು ಉದಯದಲ್ಲಿ ಎದ್ದು,ದ್ರಾಕ್ಷೇ ತೋಟಗಳಿಗೆ ಹೋಗಿ, ದ್ರಾಕ್ಷೇ ಬಳ್ಳಿಯು ಬೆಳೆಯುವದೋ? ಅದರ ಎಳೆಗಾಯಿಗಳು ಕಾಣಿ ಸುತ್ತವೋ? ದಾಳಿಂಬರ ಗಿಡಗಳು ಚಿಗುರುತ್ತವೋ ನೋಡುವ. ಅಲ್ಲಿ ನನ್ನ ಪ್ರೀತಿಯನ್ನು ನಿನಗೆ ತೋರಿಸುವೆನು.ಓ ನನ್ನ ಪ್ರಿಯನೇ, ದುದಾಯಗಳು ವಾಸನೆಕೊಡುತ್ತವೆ; ನಮ್ಮ ಬಾಗಲುಗಳ ಬಳಿಯಲ್ಲಿ ನಿನಗೋಸ್ಕರ ನಾನು ಇಟ್ಟುಕೊಂಡ ವಿವಿಧ ಹೊಸ ಹಳೇ ರಮ್ಯವಾದ ಫಲಗಳು ಅವೆ.
ನೀನು ನನ್ನನ್ನು ಉಪದೇಶಿಸುವ ಹಾಗೆ ನಾನು ನಿನ್ನನ್ನು ನಡಿಸಿ ನನ್ನ ತಾಯಿಯ ಮನೆಯೊಳಗೆ ನಿನ್ನನ್ನು ಬರಮಾಡಿ, ದಾಳಿಂಬರ ಹಣ್ಣಿನ ರಸವಾದ ಊರಿಟ್ಟ ಪಾನವನ್ನು ನಿನಗೆ ಕುಡಿಸುತ್ತಿದ್ದೆನು.
ನಿನ್ನ ಜನರೆಲ್ಲರು ನೀತಿವಂತರಾಗಿರುವರು, ದೇಶವನ್ನು ಸದಾ ಕಾಲಕ್ಕೆ ಸ್ವಾಧೀನ ಮಾಡಿಕೊಳ್ಳುವರು; ನಾನು ಮಹಿಮೆ ಹೊಂದುವದಕ್ಕೋಸ್ಕರ ನಾನು ನೆಟ್ಟ ಕೊಂಬೆಯೂ ನನ್ನ ಕೈ ಸೃಷ್ಟಿಯೂ ದೇಶವನ್ನು ಸದಾ ಅನುಭವಿಸುವರು.ಚಿಕ್ಕವನಿಂದ ಸಾವಿರವಾಗುವರು. ಅಲ್ಪನಿಂದ ಬಲ ವಾದ ಜನಾಂಗವಾಗುವದು; ಕರ್ತನೆಂಬ ನಾನು ಕ್ಲುಪ್ತಕಾಲದಲ್ಲಿ ಇದನ್ನು ಬಹು ಬೇಗನೆ ಉಂಟು ಮಾಡುವೆನು.
ಭೂಮಿಯು ತನ್ನ ಮೊಳಕೆಯನ್ನು ಹೇಗೆ ಹೊರಡಿಸುವದೋ ತೋಟವು ತನ್ನಲ್ಲಿ ಬಿತ್ತಿದ್ದನ್ನು ಹೇಗೆ ಮೊಳಿಸುವದೋ ಹಾಗೆಯೇ ದೇವರಾದ ಕರ್ತನ ನೀತಿಯನ್ನೂ ಸ್ತೋತ್ರವನ್ನೂ ಎಲ್ಲಾ ಜನಾಂಗಗಳ ಮುಂದೆ ಮೊಳೆಯಿಸುವನು.
ಒಬ್ಬನು ಇನ್ನೊಬ್ಬ ನನ್ನು ನೂಕುವದಿಲ್ಲ; ಅವರಲ್ಲಿ ಪ್ರತಿಯೊಬ್ಬನು ತನ್ನ ತನ್ನ ದಾರಿಯಲ್ಲಿ ಹೋಗುತ್ತಾನೆ; ಆಯುಧಗಳಲ್ಲಿ ಬಿದ್ದರೂ ಗಾಯವಾಗುವದಿಲ್ಲ.
ಬೇಥಾನ್ಯದಲ್ಲಿದ್ದ ಕುಷ್ಠರೋಗಿಯಾದ ಸೀಮೋನನ ಮನೆಯಲ್ಲಿ ಆತನು ಊಟಕ್ಕೆ ಕೂತಿದ್ದಾಗ ಒಬ್ಬ ಸ್ತ್ರೀಯು ಅತಿ ಶ್ರೇಷ್ಠವಾದ ಸುಗಂಧ ತೈಲದ ಭರಣಿ ಯನ್ನು ತೆಗೆದುಕೊಂಡು ಬಂದು ಅದನ್ನು ಒಡೆದು ಆತನ ತಲೆಯ ಮೇಲೆ ಹೊಯಿದಳು.
ಆಗ ಮರಿಯಳು ಬಹು ಬೆಲೆಯುಳ್ಳ ಅಚ್ಚ ಜಟಾಮಾಂಸಿ ತೈಲವನ್ನು ಒಂದು ಸೇರಷ್ಟು ತಂದು ಯೇಸುವಿನ ಪಾದಕ್ಕೆ ಹಚ್ಚಿ ತನ್ನ ತಲೆಯ ಕೂದಲಿನಿಂದ ಆತನ ಪಾದಗಳನ್ನು ಒರಸಿದಳು; ಆ ತೈಲದ ಪರಿ ಮಳವು ಮನೆಯಲ್ಲಿ ತುಂಬಿಕೊಂಡಿತ್ತು.
ನಾನೇ ನಿಜವಾದ ದ್ರಾಕ್ಷೇ ಬಳ್ಳಿ ನನ್ನ ತಂದೆ ವ್ಯವಸಾಯಗಾರನು.
ಯೇಸು ಕ್ರಿಸ್ತನ ಮೂಲಕ ನೀತಿಯೆಂಬ ಫಲಗಳಿಂದ ತುಂಬಿದವರಾಗಿ ದೇವರಿಗೆ ಮಹಿಮೆಯನ್ನೂ ಸ್ತೋತ್ರ ವನ್ನೂ ತರುವವರಾಗಿರಬೇಕೆಂತಲೂ ಪ್ರಾರ್ಥಿಸುತ್ತೇನೆ.