Home Bibles ಪರಮಗೀತ 4:7 · ಕನ್ನಡ ಬೈಬಲ್
ಪರಮಗೀತ 4:7 · ಕನ್ನಡ ಬೈಬಲ್

ನನ್ನ ಪ್ರಿಯಳೇ, ನೀನು ಪೂರ್ಣ ಸುಂದರಿಯು, ನಿನ್ನಲ್ಲಿ ಕಳಂಕವೇನೂ ಇಲ್ಲ.

Cross references

ಅಂಕೆಗಳ ಪುಸ್ತಕ 24:5

ಓ ಯಾಕೋಬೇ, ನಿನ್ನ ಡೇರೆಗಳು, ಇಸ್ರಾಯೇಲೇ, ನಿನ್ನ ಗುಡಾರಗಳು, ಎಷ್ಟು ಉತ್ತಮ ವಾಗಿವೆ!

ಕೀರ್ತನೆಗಳು 45:11

ಆಗ ಅರಸನು ನಿನ್ನ ಸೌಂದರ್ಯ ವನ್ನು ಬಹಳವಾಗಿ ಅಪೇಕ್ಷಿಸುವನು; ಆತನೇ ನಿನ್ನ ಕರ್ತನು; ಆತನನ್ನು ಆರಾಧಿಸು.

ಕೀರ್ತನೆಗಳು 45:13

ಅರಸನ ಮಗಳು ತನ್ನಲ್ಲಿ ಪೂರ್ಣ ಘನವುಳ್ಳವ ಳಾಗಿದ್ದಾಳೆ; ಅವಳ ವಸ್ತ್ರವು ಚಿನ್ನದಿಂದ ನೆಯಿದದೆ.

ಪರಮಗೀತ 1:15

ಇಗೋ, ನನ್ನ ಪ್ರಿಯಳೇ, ನೀನು ಸೌಂದರ್ಯ ವಂತೆಯು, ಇಗೋ, ನೀನು ಸೌಂದರ್ಯವಂತೆಯು ನಿನಗೆ ಪಾರಿವಾಳದ ಕಣ್ಣುಗಳಿವೆ.

ಪರಮಗೀತ 4:1

ಇಗೋ, ನನ್ನ ಪ್ರಿಯಳೇ, ನೀನು ಸುಂದರಿಯು! ಇಗೋ, ನೀನು ಸುಂದರಿಯು! ನಿನ್ನ ಮುಸುಕಿನೊಳಗೆ ನಿನಗೆ ಪಾರಿವಾಳದ ಕಣ್ಣುಗ ಳಿವೆ. ನಿನ್ನ ಕೂದಲು ಗಿಲ್ಯಾದಿನ ಪರ್ವತದಲ್ಲಿ ಕಾಣ ಲ್ಪಡುವ ಮೇಕೆ ಮಂದೆಯ ಹಾಗೆ ಇದೆ.

ಪರಮಗೀತ 5:2

ನಾನು ನಿದ್ರೆಗೈದರೂ ನನ್ನ ಹೃದಯವು ಎಚ್ಚರ ವಾಗುವದು. ಇದು ತಟ್ಟುವ ನನ್ನ ಪ್ರಿಯನ ಶಬ್ದ; ಅದು--ನನಗೆ ತೆರೆ, ನನ್ನ ಸಹೋದರಿಯೇ, ನನ್ನ ಪ್ರಿಯಳೇ, ನನ್ನ ಪಾರಿವಾಳವೇ, ನಿರ್ಮಲೆಯೇ, ನನ್ನ ತಲೆಯು ಮಂಜಿನಿಂದಲೂ ನನ್ನ ಕೂದಲು ರಾತ್ರಿಯ ಬಿಂದುಗಳಿಂದಲೂ ತೋಯಲ್ಪಟ್ಟಿವೆ ಎಂಬದು.

ಪರಮಗೀತ 5:16

ಯೆರೂಸಲೇಮಿನ ಕುಮಾರ್ತೆ ಯರೇ, ಅವನ ಬಾಯಿ ಬಹು ಮಧುರವಾಗಿದೆ; ಹೌದು, ಅವನು ಸರ್ವಾಂಗ ಸುಂದರನು. ಇವನೇ ನನ್ನ ಪ್ರಿಯನು, ಇವನೇ ನನ್ನ ಸ್ನೇಹಿತನು.

ಎಫೆಸದವರಿಗೆ 5:25

ಪುರಷರೇ, ನೀವು ನಿಮ್ಮನಿಮ್ಮ ಹೆಂಡತಿಯರನ್ನು ಪ್ರೀತಿಸಿರಿ, ಯಾಕಂದರೆ ಕ್ರಿಸ್ತನು ಸಹ ಸಭೆಯನ್ನು ಪ್ರೀತಿಸಿ ಅದಕ್ಕಾಗಿ ತನ್ನನ್ನು ತಾನೇ ಒಪ್ಪಿಸಿಕೊಟ್ಟನು.

ಕೊಲೊಸ್ಸೆಯವರಿಗೆ 1:22

ತನ್ನ ಸ್ಥೂಲ ದೇಹದಲ್ಲಿ ಉಂಟಾದ ಮರಣದ ಮೂಲಕ ನಿಮ್ಮನ್ನು ಪರಿಶುದ್ಧರನ್ನಾಗಿಯೂ ನಿರ್ದೋಷಿಗಳನ್ನಾಗಿಯೂ ನಿರಪರಾಧಿಗಳನ್ನಾಗಿಯೂ ತನ್ನ ಸನ್ನಿಧಿಯಲ್ಲಿ ನಿಲ್ಲಿಸಬೇಕೆಂದಿದ್ದಾನೆ.

2 ಪೇತ್ರ 3:14

ಆದಕಾರಣ ಪ್ರಿಯರೇ, ನೀವು ಇಂಥವುಗಳನ್ನು ಎದುರು ನೋಡುವವರಾಗಿರುವದರಿಂದ ಸಮಾಧಾನ ದಲ್ಲಿದ್ದು ನಿರ್ಮಲರಾಗಿಯೂ ನಿರ್ದೋಷಿಗಳಾಗಿಯೂ ಆತನಿಗೆ ಕಾಣಿಸಿಕೊಳ್ಳುವಂತೆ ಜಾಗ್ರತೆಯುಳ್ಳವ ರಾಗಿರ್ರಿ.

ಯೂದ 1:24

ಎಡವಿಬೀಳದಂತೆ ನಿಮ್ಮನ್ನು ಕಾಪಾಡುವದಕ್ಕೂ ತನ್ನ ಪ್ರಭಾವದ ಸಮಕ್ಷಮದಲ್ಲಿ ನಿಮ್ಮನ್ನು ನಿರ್ದೋಷಿ ಗಳನ್ನಾಗಿ ಅತ್ಯಂತ ಹರ್ಷದೊಡನೆ ನಿಲ್ಲಿಸುವದಕ್ಕೂ ಶಕ್ತನಾಗಿರುವಒಬ್ಬನೇ ಜ್ಞಾನವುಳ್ಳ ನಮ್ಮ ರಕ್ಷಕನಾದ ದೇವರಿಗೆ ಪ್ರಭಾವ ಮಹತ್ವ ಆಧಿಪತ್ಯ ಅಧಿಕಾರಗಳು ಈಗಲೂ ಯಾವಾಗಲೂ ಇರಲಿ. ಆಮೆನ್‌.

ಪ್ರಕಟನೆ 21:2

ಇದಲ್ಲದೆ ಪರಲೋಕದಿಂದ ಪರಿಶುದ್ಧ ಪಟ್ಟಣವಾದ ಹೊಸ ಯೆರೂಸಲೇಮು ದೇವರ ಬಳಿಯಿಂದ ಇಳಿದು ಬರುವದನ್ನು ಯೋಹಾನನೆಂಬ ನಾನು ಕಂಡೆನು; ಅದು ತನ್ನ ಮದಲಿಂಗನಿಗೋಸ್ಕರ ಅಲಂಕೃತಳಾದ ಮದಲಗಿತ್ತಿಯಂತೆ ಸಿದ್ಧವಾಗಿತ್ತು.

Interlinear

Choose Theme