Home Bibles ಪರಮಗೀತ 4:8 · ಕನ್ನಡ ಬೈಬಲ್
ಪರಮಗೀತ 4:8 · ಕನ್ನಡ ಬೈಬಲ್

ನನ್ನ ಸಂಗಡ ಲೆಬನೋನಿನಿಂದ ಬಾ, ಪತ್ನಿಯೇ; ಲೆಬನೋನಿನಿಂದ ನನ್ನ ಸಂಗಡ ಬಾ. ಅಮಾನದ ಶಿಖರದಿಂದ, ಶೆನೀರ್‌, ಹೆರ್ಮೋನ್‌ ಶಿಖರದಿಂದ, ಸಿಂಹದ ಗವಿಗಳಿಂದ, ಚಿರತೆಗಳ ಪರ್ವತಗಳಿಂದ ದೃಷ್ಟಿಸು.

Cross references

ದ್ವಿತೀಯೋಪದೇಶಕಾಂಡ 3:9

(ಆ ಹೆರ್ಮೋನಿಗೆ ಚೀದೋನ್ಯರು ಸಿರ್ಯೋನೆಂದೂ ಅಮೋರಿಯರು ಸೇನೀಯರೆಂದೂ ಅನ್ನುತ್ತಾರೆ.)

ದ್ವಿತೀಯೋಪದೇಶಕಾಂಡ 3:25

ಯೊರ್ದನಿನ ಆಚೆಯಲ್ಲಿರುವ ಆ ಒಳ್ಳೇ ದೇಶವನ್ನೂ ಆ ಒಳ್ಳೇ ಬೆಟ್ಟವನ್ನೂ ಲೆಬನೋನನ್ನೂ ನೋಡುವದಕ್ಕೆ ಅಪ್ಪಣೆಯಾಗಬೇಕು ಎಂಬದೇ.

ಯೆಹೋಶುವ 12:1

ಯೊರ್ದನಿಗೆ ಆಚೆ ಸೂರ್ಯನು ಉದಯಿಸುವ ದಿಕ್ಕಿನಲ್ಲಿ ಅರ್ನೋನ್‌ ನದಿಯಿಂದ ಹೆರ್ಮೋನ್‌ ಬೆಟ್ಟದ ವರೆಗೂ ಮೂಡಣ ಬೈಲಿನ ಎಲ್ಲಾದರಲ್ಲಿಯೂ ಇಸ್ರಾಯೇಲ್‌ ಮಕ್ಕಳು ಅವರನ್ನು ಹೊಡೆದು ಸ್ವಾಧೀನ ಪಡಿಸಿಕೊಂಡ ದೇಶಗಳ ಅರಸರು ಯಾರಂದರೆ:

1 ಅರಸುಗಳು 4:33

ಅವನು ಮರಗಳನ್ನು ಕುರಿತು ಲೆಬನೋನಿನಲ್ಲಿರುವ ದೇವದಾರು ಮರ ಮೊದಲುಗೊಂಡು ಗೋಡೆಯ ಮೇಲೆ ಬೆಳೆಯುವ ಹಿಸ್ಸೋಪಿನ ವರೆಗೂ ಹೇಳಿದನು. ಇದಲ್ಲದೆ ಮೃಗ ಪಕ್ಷಿ ಕ್ರಿಮಿ ಮತ್ತು ವಿಾನುಗಳನ್ನು ಕುರಿತೂ ಹೇಳಿದನು.ಸೊಲೊಮೋನನ ಜ್ಞಾನವನ್ನು ಕುರಿತು ಕೇಳಿದ ಭೂಮಿಯ ಮೇಲಿರುವ ಸಮಸ್ತ ಅರಸರ ಬಳಿಯಿಂದ ಎಲ್ಲಾ ಜನಗಳು ಅವನ ಜ್ಞಾನವನ್ನು ಕೇಳಲು ಬಂದರು.

2 ಅರಸುಗಳು 5:12

ನಾನು ಹೊಳೆಗಳಲ್ಲಿ ಸ್ನಾನ ಮಾಡಿ ಶುದ್ಧನಾಗುವ ಹಾಗೆ ದಮಸ್ಕದ ನದಿಗಳಾದ ಅಬಾನಾ ಪರ್ಪರ್‌ ಇಸ್ರಾಯೇಲಿನ ಎಲ್ಲಾ ನೀರಿಗಿಂತ ಉತ್ತಮವಲ್ಲವೋ ಎಂದು ಹೇಳಿ ತಿರುಗಿಕೊಂಡು ಕೋಪದಿಂದ ಹೋದನು.

1 ದಿನವೃತ್ತಾಂತ 5:23

ಮನಸ್ಸೆಯ ಅರ್ಧಗೋತ್ರದ ಮಕ್ಕಳು ದೇಶ ದಲ್ಲಿ ವಾಸಮಾಡಿ ಬಾಷಾನ್‌ ಮೊದಲುಗೊಂಡು ಬಾಳ್‌ಹೆರ್ಮೋನು ಸೆನೀರು ಹೆರ್ಮೋನ್‌ ಬೆಟ್ಟದ ವರೆಗೂ ಹಬ್ಬಿಕೊಂಡರು.

ಕೀರ್ತನೆಗಳು 45:10

ಓ ಮಗಳೇ, ಕಿವಿಗೊಟ್ಟು ಕೇಳಿ ಆಲೋಚಿಸು, ನಿನ್ನ ಸ್ವಂತ ಜನರನ್ನು ನಿನ್ನ ತಂದೆಯ ಮನೆಯನ್ನು ಮರೆತುಬಿಡು.

ಕೀರ್ತನೆಗಳು 76:1

ದೇವರು ಯೆಹೂದದಲ್ಲಿ ಪ್ರಸಿದ್ಧವಾಗಿದ್ದಾನೆ; ಇಸ್ರಾಯೇಲಿನಲ್ಲಿ ಆತನ ಹೆಸರು ದೊಡ್ಡದಾಗಿದೆ.

ಕೀರ್ತನೆಗಳು 76:4

ಬೇಟೆಗಳಿರುವ ಬೆಟ್ಟಗಳಿಗಿಂತ ನೀನು ಪ್ರಕಾಶವು ಳ್ಳವನೂ ಶ್ರೇಷ್ಠನೂ ಆಗಿದ್ದೀ.

ಸಾಮೇತಿಗಳು 9:6

ಮೂಢರನ್ನು ಬಿಟ್ಟು ಬಾಳು ಮತ್ತು ವಿವೇಕದ ಮಾರ್ಗದಲ್ಲಿ ಹೋಗು ಎಂದೂ ಕೂಗುತ್ತಾಳೆ.

ಪರಮಗೀತ 2:13

ಅಂಜೂರದ ಗಿಡವು ಅದರ ಹೀಚುಗಳನ್ನು ಬಿಡುತ್ತದೆ. ದ್ರಾಕ್ಷೇ ಬಳ್ಳಿಗಳ ಹೂವು ಅದರ ಸುವಾಸನೆಯನ್ನು ಕೊಡು ತ್ತದೆ. ಏಳು, ನನ್ನ ಪ್ರಿಯಳೇ, ನನ್ನ ಸುಂದರಿಯೇ, ಹೊರಟು ಬಾ ಎಂಬದು.

ಪರಮಗೀತ 5:1

ನನ್ನ ತೋಟಕ್ಕೆ ಬಂದೆನು, ನನ್ನ ಸಹೋದರಿಯೇ, ವಧುವೇ; ನನ್ನ ರಕ್ತಬೋಳ ವನ್ನೂ ನನ್ನ ಸುಗಂಧಗಳನ್ನೂ ಕೂಡಿಸಿದ್ದೇನೆ; ನನ್ನ ಜೇನು ಗೂಡನ್ನೂ ಜೇನು ತುಪ್ಪವನ್ನೂ ತಿಂದಿದ್ದೇನೆ; ನನ್ನ ದ್ರಾಕ್ಷಾರಸವನ್ನೂ ನನ್ನ ಹಾಲನ್ನೂ ಕುಡಿದಿದ್ದೇನೆ. ತಿನ್ನಿರಿ, ಓ ಸ್ನೇಹಿತರೇ; ಕುಡಿಯಿರಿ. ಹೌದು, ನನ್ನ ಪ್ರಿಯರೇ, ಸಮೃದ್ಧಿಯಾಗಿ ಕುಡಿಯಿರಿ.

ಪರಮಗೀತ 7:11

ನನ್ನ ಪ್ರಿಯನೇ, ನಾವು ಹೊಲಕ್ಕೆ ಹೋಗಿ ಗ್ರಾಮಗಳಲ್ಲಿ ವಸತಿಯಾಗಿರುವ ಬಾ.

ಯೆಶಾಯ 62:5

ಯೌವನಸ್ಥನು ಕನ್ಯಾಸ್ತ್ರೀಯನ್ನು ಮದುವೆಮಾಡಿ ಕೊಳ್ಳುವ ಪ್ರಕಾರ ನಿನ್ನ ಕುಮಾರರು ನಿನ್ನನ್ನು ಮದುವೆ ಮಾಡಿಕೊಳ್ಳುವರು; ಮದಲಿಂಗನು ಮದಲಗಿತ್ತಿಯಲ್ಲಿ ಆನಂದಪಡುವ ಪ್ರಕಾರ ನಿನ್ನ ದೇವರು ನಿನ್ನಲ್ಲಿ ಆನಂದಪಡುವನು.

ಯೋಹಾನ 12:26

ಯಾವನಾದರೂ ನನ್ನನ್ನು ಸೇವಿಸುವವನಾದರೆ ಅವನು ನನ್ನನ್ನು ಹಿಂಬಾಲಿಸಲಿ; ನಾನು ಇರುವಲ್ಲಿಯೇ ನನ್ನ ಸೇವಕನೂ ಇರುವನು; ಯಾವನಾದರೂ ನನ್ನನ್ನು ಸೇವಿಸುವವನಾದರೆ ನನ್ನ ತಂದೆಯು ಅವನನ್ನು ಸನ್ಮಾನಿಸುವನು.

ಕೊಲೊಸ್ಸೆಯವರಿಗೆ 3:1

ಹಾಗಾದರೆ ನೀವು ಕ್ರಿಸ್ತನೊಂದಿಗೆ ಎಬ್ಬಿಸಲ್ಪಟ್ಟವರಾಗಿದ್ದರೆ ಮೇಲಿರುವ ವುಗಳನ್ನೇ ಹುಡುಕಿರಿ; ಅಲ್ಲಿ ಕ್ರಿಸ್ತನು ದೇವರ ಬಲಗಡೆಯಲ್ಲಿ ಕುಳಿತುಕೊಂಡಿದ್ದಾನೆ.

Interlinear

Choose Theme